Featured

ಜನರಲ್ಲಿ ಮತೀಯ ಭಾವನೆಗಳನ್ನು ಬಿತ್ತುವ ಮೂಲಕ ಅಧಿಕಾರಕ್ಕೇರಿದ ಬಿಜೆಪಿಯು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ : ರಮಾನಾಥ ರೈ -Vishwanews24

ಜನರಲ್ಲಿ ಮತೀಯ ಭಾವನೆಗಳನ್ನು ಬಿತ್ತುವ ಮೂಲಕ ಅಧಿಕಾರಕ್ಕೇರಿದ ಬಿಜೆಪಿಯು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ : ರಮಾನಾಥ ರೈ -Vishwanews24

ಮಂಗಳೂರು : ಅಭಿವೃದ್ಧಿಯ ಬದಲು ಜನರಲ್ಲಿ ಮತೀಯ ಭಾವನೆಗಳನ್ನು ಬಿತ್ತುವ ಮೂಲಕ ಅಧಿಕಾರಕ್ಕೇರಿದ ಬಿಜೆಪಿಯು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.

ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಅವರು ಕಳೆದ 72 ದಿನದಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ಕೂಡ ಬಿಜೆಪಿ ನೇತೃತ್ವದ ಕೇಂದ್ರದ ಎನ್‌ಡಿಎ ಸರಕಾರ ಸ್ಪಂದಿಸುತ್ತಿಲ್ಲ. ಬದಲಾಗಿ ರೈತರನ್ನು ಇನ್ನಿಲ್ಲದಂತೆ ಅವಮಾನಿಸುತ್ತಿದೆ. ರೈತರ ಪರವಾಗಿ ಧ್ಬನಿ ಎತ್ತುವವರ ವಿರುದ್ಧ ಪ್ರಕರಣ ದಾಖಲಿಸಿ ಅನ್ಯಾಯ ಎಸಗುತ್ತಿದೆ ಎಂದು ಹೇಳಿದರು.

ಬೆಳಪು : ಕಾಪು ತಾಲೂಕಿನ ಮೊದಲ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣ -Vishwanews24

ಬಿಜೆಪಿಯ ಪರವಾಗಿ ಮಾತನಾಡಿದವರು ಮಾತ್ರ ದೇಶಪ್ರೇಮಿಗಳು ಮತ್ತು ವಿರುದ್ಧವಾಗಿ ಮಾತನಾಡಿದವರನ್ನು ದೇಶದ್ರೋಹಿಗಳು ಎಂಬಂತೆ ಕೇಂದ್ರ ಸರಕಾರ ಬಿಂಬಿಸುತ್ತಿದೆ. ಈ ಬೆಳವಣಿಗೆಯು ಒಳ್ಳೆಯದಲ್ಲ. ಬಿಜೆಪಿಯು ಜನಸಾಮಾನ್ಯರ ಹಿತ ಕಾಪಾಡುವ ಬದಲು ನಾಲ್ಕೈದು ಬಂಡವಾಳ ಶಾಹಿಗಳ ಪರವಾಗಿ ಕೆಲಸ ಮಾಡುತ್ತಿದೆ ಎಂದು ರಮಾನಾಥ ರೈ ಆಪಾದಿಸಿದರು.

ಸುದ್ದಿಗೋಷ್ಠಿಯಲ್ಲಿ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ನೂತನ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ದ.ಕ.ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್, ಮಂಗಳೂರು ಮನಪಾ ಪ್ರತಿಪಕ್ಷದ ನಾಯಕ ಅಬ್ದುಲ್ ರವೂಫ್ ಬಜಾಲ್, ಮುಡಾ ಮಾಜಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಮಾಜಿ ಮೇಯರ್‌ಗಳಾದ ಶಶಿಧರ ಹೆಗ್ಡೆ, ಭಾಸ್ಕರ ಮೊಯ್ಲಿ, ಕಾರ್ಪೊರೇಟರ್ ನವೀನ್ ಡಿಸೋಜ, ಮಾಜಿ ಕಾರ್ಪೊರೇಟರ್ ಅಪ್ಪಿ, ಪಕ್ಷದ ಮುಖಂಡರಾದ ಪೃಥ್ವಿರಾಜ್ ಕೆ., ಟಿ.ಕೆ.ಸುಧೀರ್, ಸದಾಶಿವ ಉಳ್ಳಾಲ್ ಉಪಸ್ಥಿತರಿದ್ದರು.

ಸಾಧ್ಯವಾದರೇ ಮುಂಬರುವ ಉಪ ಚುನಾವಣೆಗಳನ್ನು ನೀವು ಗೆದ್ದು ತೋರಿಸಿ : ಸಿಎಂ ಯಡಿಯೂರಪ್ಪ ಸವಾಲು -Vishwanews24

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

17 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

17 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

18 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

18 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

18 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

18 hours ago