ಜನರಲ್ ರಾವತ್‍ರ ಮರಣವನ್ನು ಸಂಭ್ರಮಿಸಿದ ಕಿಡಿಗೇಡಿ ಅರೆಸ್ಟ್ -Vishwanews24
ಜನರಲ್ ರಾವತ್‍ರ ಮರಣವನ್ನು ಸಂಭ್ರಮಿಸಿದ ಕಿಡಿಗೇಡಿ ಅರೆಸ್ಟ್ -Vishwanews24
ಜೈಪುರ: ಡಿಸೆಂಬರ್ 8 ರಂದು ಹೆಲಿಕಾಪ್ಟರ್ ದುರಂತದಲ್ಲಿ ರಕ್ಷಣಾ ಪಡೆಯ ಮುಖ್ಯಸ್ಥ ಬಿಪಿನ್ ರಾವತ್ ಅಗಲಿಕೆಯಿಂದ ಇಡೀ ದೇಶವೇ ಶೋಕತಪ್ತವಾಗಿರುವ ಸಂದರ್ಭದಲ್ಲಿ ಕಿಡಿಗೇಡಿಯೊಬ್ಬ ಸಾಮಾಜಿಕ ಮಾಧ್ಯಮದಲ್ಲಿ ಅವರ ಸಾವಿನ ಸಂಭ್ರಮಾಚರಣೆಯನ್ನು ನಡೆಸಿ ಇಡೀ ದೇಶದ ಕೆಂಗಣ್ಣಿಗೆ ಗುರಿಯಾಗಿದ್ದಾನೆ.
ರಾಜಸ್ಥಾನ ಮೂಲದ ಜವ್ವಾದ್ ಖಾನ್ ಸಾಮಾಜಿಕ ಮಾಧ್ಯಮದಲ್ಲಿ ಜನರಲ್ ರಾವತ್ ಅವರ ಚಿತ್ರವನ್ನು ಹಂಚಿಕೊಂಡಿದ್ದನು. ಇದರೊಂದಿಗೆ ಜಹನ್ನೂಮ್ ಮುಟ್ಟುವ ಮೊದಲೇ ಜೀವಂತವಾಗಿ ಸುಟ್ಟುಹೋದರು ಎಂಬ ಅವಹೇಳನಕಾರಿ ಸಾಲನ್ನೂ ಬರೆದು ಹಾಕಿದ್ದ. ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಆಗುತ್ತಿದ್ದಂತೆ ರಾಜಸ್ಥಾನದ ಟೋಂಕ್ ಪೊಲೀಸರು ಆರೋಪಿ ಜವ್ವಾದ್ ಖಾನ್‍ನನ್ನು ಬಂಧಿಸಿದ್ದಾರೆ.
ಇದರ ಬಳಿಕ ಟ್ವಿಟ್ಟರ್‌ನಲ್ಲಿ ಟೋಂಕ್ ಪೊಲೀಸರು ಮಾಹಿತಿಯನ್ನು ನೀಡಿದ್ದಾರೆ. ಅವಹೇಳನಕಾರಿ ಹೇಳಿಕೆಯ ಮೇಲೆ ಅಬ್ದುಲ್ ನಕ್ಕಿ ಖಾನ್‍ರ ಮಗ ಜವ್ವಾದ್ ಖಾನ್‍ನನ್ನು ಬಂಧಿಸಲಾಗಿದೆ. 21 ವಯಸ್ಸಿನ ಜವ್ವಾದ್ ಖಾನ್ ರಾಜ್ ಟಾಕೀಸ್ ಬಳಿಯ ನಿವಾಸಿಯಾಗಿದ್ದಾನೆ. ಡಿಸೆಂಬರ್ 8ರಂದು ಅವಹೇಳನಕಾರಿ ಹೇಳಿಕೆಯನ್ನು ನೀಡಿರುವ ವಿಚಾರ ನಮ್ಮ ಗಮನಕ್ಕೆ ಬಂದಿರುವುದರಿಂದ ಆರೋಪಿಯನ್ನು ಬಂಧಿಸಲು ನಾಲ್ಕು ವಿಶೇಷ ತಂಡಗಳ ರಚನೆ ಮಾಡಲಾಗಿತ್ತು. ಅವನನ್ನು ಸದ್ಯ ಬಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
दिवंगत श्रीमान बिपिन रावत सीडीएस भारतीय सेना के विरुद्ध अमर्यादित टिप्पणी करने वाले व्यक्ति जावादखान, उम्र 21 वर्ष, निवासी नजर बाग रोड टोंक को गिरफ्तार कर लिया गया है, जिस पर कठोरतम विधिक कार्यवाही की जावेगी। #CDSChopperCrash #tonk @rajpolicehelp @igpajmer @omprakaships1 pic.twitter.com/Y7odb1yLAZ
— Tonk Police Rajasthan (@TonkPolice_) December 9, 2021
