Featured

ಜನರಲ್ ರಾವತ್‍ರ ಮರಣವನ್ನು ಸಂಭ್ರಮಿಸಿದ ಕಿಡಿಗೇಡಿ ಅರೆಸ್ಟ್ -Vishwanews24

ಜನರಲ್ ರಾವತ್‍ರ ಮರಣವನ್ನು ಸಂಭ್ರಮಿಸಿದ ಕಿಡಿಗೇಡಿ ಅರೆಸ್ಟ್ -Vishwanews24

ಜೈಪುರ: ಡಿಸೆಂಬರ್ 8 ರಂದು ಹೆಲಿಕಾಪ್ಟರ್ ದುರಂತದಲ್ಲಿ ರಕ್ಷಣಾ ಪಡೆಯ ಮುಖ್ಯಸ್ಥ ಬಿಪಿನ್ ರಾವತ್ ಅಗಲಿಕೆಯಿಂದ ಇಡೀ ದೇಶವೇ ಶೋಕತಪ್ತವಾಗಿರುವ ಸಂದರ್ಭದಲ್ಲಿ ಕಿಡಿಗೇಡಿಯೊಬ್ಬ ಸಾಮಾಜಿಕ ಮಾಧ್ಯಮದಲ್ಲಿ ಅವರ ಸಾವಿನ ಸಂಭ್ರಮಾಚರಣೆಯನ್ನು ನಡೆಸಿ ಇಡೀ ದೇಶದ ಕೆಂಗಣ್ಣಿಗೆ ಗುರಿಯಾಗಿದ್ದಾನೆ.

ರಾಜಸ್ಥಾನ ಮೂಲದ ಜವ್ವಾದ್ ಖಾನ್ ಸಾಮಾಜಿಕ ಮಾಧ್ಯಮದಲ್ಲಿ ಜನರಲ್ ರಾವತ್ ಅವರ ಚಿತ್ರವನ್ನು ಹಂಚಿಕೊಂಡಿದ್ದನು. ಇದರೊಂದಿಗೆ ಜಹನ್ನೂಮ್ ಮುಟ್ಟುವ ಮೊದಲೇ ಜೀವಂತವಾಗಿ ಸುಟ್ಟುಹೋದರು ಎಂಬ ಅವಹೇಳನಕಾರಿ ಸಾಲನ್ನೂ ಬರೆದು ಹಾಕಿದ್ದ. ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಆಗುತ್ತಿದ್ದಂತೆ ರಾಜಸ್ಥಾನದ ಟೋಂಕ್ ಪೊಲೀಸರು ಆರೋಪಿ ಜವ್ವಾದ್ ಖಾನ್‍ನನ್ನು ಬಂಧಿಸಿದ್ದಾರೆ.

ಇದರ ಬಳಿಕ ಟ್ವಿಟ್ಟರ್‌ನಲ್ಲಿ ಟೋಂಕ್ ಪೊಲೀಸರು ಮಾಹಿತಿಯನ್ನು ನೀಡಿದ್ದಾರೆ. ಅವಹೇಳನಕಾರಿ ಹೇಳಿಕೆಯ ಮೇಲೆ ಅಬ್ದುಲ್ ನಕ್ಕಿ ಖಾನ್‍ರ ಮಗ ಜವ್ವಾದ್ ಖಾನ್‍ನನ್ನು ಬಂಧಿಸಲಾಗಿದೆ. 21 ವಯಸ್ಸಿನ ಜವ್ವಾದ್ ಖಾನ್ ರಾಜ್ ಟಾಕೀಸ್ ಬಳಿಯ ನಿವಾಸಿಯಾಗಿದ್ದಾನೆ. ಡಿಸೆಂಬರ್ 8ರಂದು ಅವಹೇಳನಕಾರಿ ಹೇಳಿಕೆಯನ್ನು ನೀಡಿರುವ ವಿಚಾರ ನಮ್ಮ ಗಮನಕ್ಕೆ ಬಂದಿರುವುದರಿಂದ ಆರೋಪಿಯನ್ನು ಬಂಧಿಸಲು ನಾಲ್ಕು ವಿಶೇಷ ತಂಡಗಳ ರಚನೆ ಮಾಡಲಾಗಿತ್ತು. ಅವನನ್ನು ಸದ್ಯ ಬಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

16 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

18 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

18 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

18 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

19 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

19 hours ago