Featured

ಜನರಿಗೆ ಬಿಜೆಪಿಯವರ ಮೋಸದ ಅರಿವಾದಾಗ ಖಂಡಿತಾ ಅಧಿಕಾರದಿಂದ ಕಿತ್ತೊಗೆಯುತ್ತಾರೆ : ವಿನಯಕುಮಾರ್ ಸೊರಕೆ -Vishwanews24

ಉದ್ಯಾವರ: ಬಿಜೆಪಿಯವರು ಅಪಪ್ರಚಾರ ಮಾಡಿ ಜನತೆಯ ಮಾನಸಿಕತೆಯನ್ನು ಭಾವನಾತ್ಮಕವಾಗಿ ಭ್ರಷ್ಟಗೊಳಿಸಿ ಅಧಿಕಾರವನ್ನು ಹಿಡಿದಿರಬಹುದು. ಇದು ಏನೂ ಶಾಶ್ವತವಲ್ಲ. ಜನರಿಗೆ ಇವರ ಮೋಸದ ಅರಿವಾದಾಗ ಖಂಡಿತಾ ಅಧಿಕಾರದಿಂದ ಕಿತ್ತೊಗೆಯುತ್ತಾರೆ ಎಂದು ಮಾಜಿ ಸಚಿವರಾದ ಶ್ರೀ ವಿನಯಕುಮಾರ್ ಸೊರಕೆಯವರು ಹೇಳಿದರು.

ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ ಮಾತನಾಡಿದ ಅವರು, ನಮ್ಮ ಅಭಿವೃದ್ಧಿ ಮತ್ತು ಜನಪರ ಕೆಲಸಗಳನ್ನು ಎದುರಿಸಲಾಗದೇ ಬಿಜೆಪಿಯವರು ಧರ್ಮ, ಗಡಿ, ಸೈನ್ಯ ಮೊದಲಾದ ಭಾವನಾತ್ಮಕ ಸಂಗತಿಗಳನ್ನು ಮುನ್ನಲೆಗೆ ತಂದು ಅಪಪ್ರಚಾರ ಮಾಡಿ ಜನತೆಯ ಮಾನಸಿಕತೆಯನ್ನು ಭಾವನಾತ್ಮಕವಾಗಿ ಭ್ರಷ್ಟಗೊಳಿಸಿ ಅಧಿಕಾರವನ್ನು ಹಿಡಿದಿರಬಹುದು. ಇದು ಏನೂ ಶಾಶ್ವತವಲ್ಲ. ಜನರಿಗೆ ಇವರ ಮೋಸದ ಅರಿವಾದಾಗ ಖಂಡಿತಾ ಅಧಿಕಾರದಿಂದ ಕಿತ್ತೊಗೆಯುತ್ತಾರೆ ಎಂದರು.

ಸೋತ ಕಾಂಗ್ರೆಸ್ ಪಕ್ಷ ಫಿನಿಕ್ಸ್ ನಂತೆ ಎದ್ದು ಬಂದ ಇತಿಹಾಸ ನಮ್ಮ ಮುಂದೆ ಇದೆ. ಹಾಗಾಗಿ ಕಾರ್ಯಕರ್ತರು ದೃತಿಗೆಡಬೇಕಾಗಿಲ್ಲ, ನಾವೆಲ್ಲಾ ಒಗ್ಗಟ್ಟಾಗಿ ತಳಮಟ್ಟದಲ್ಲಿ ಪಕ್ಷ ಸಂಘಟನೆಯಲ್ಲಿ ಪಾಲ್ಗೊಳೋಣ ಎಂದು  ಹೇಳಿದರು.

ದೇಶದ ಆರ್ಥಿಕ ಸ್ಥಿತಿ ಕಂಡು ಕೇಳರಿಯದ ರೀತಿಯಲ್ಲಿ ಕುಸಿಯುತ್ತಿದೆ. ನಿರುದ್ಯೋಗ ತಾಂಡವ ಆಡುತ್ತಿದೆ. ಬಿಜೆಪಿಯ ಈ ರೀತಿ ಜನತೆಯನ್ನು ದಾರಿ ತಪ್ಪಿಸುವ ಕೆಲಸವನ್ನು ವಿಫಲಗೊಳಿಸಲು ನಮ್ಮ ಕಾರ್ಯಕರ್ತರು ಸಜ್ಜಾಗಬೇಕಾಗಿದೆ ಎಂದು ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಶ್ರೀ ಉದ್ಯಾವರ ನಾಗೇಶ್ ಕುಮಾರ್‍ ನುಡಿದರು.

ಸಭೆಯ ಅಧ್ಯಕ್ಷತೆಯನ್ನು ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಗಿರೀಶ್ ಕುಮಾರ್ ವಹಿಸಿದ್ದರು. ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಗಂಧಿ ಶೇಖರ್ ಉಪಸ್ಥಿತರಿದ್ದರು. ಕಾಪು ಉತ್ತರ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿಗಳಾದ ಶ್ರೀ ಆಬಿದ್ ಆಲಿಯವರು ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರ್ವಹಿಸಿದರು

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

21 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

22 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

22 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

23 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

23 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago