ಚಿಕ್ಕಮಗಳೂರು, : ಜನರಿಗೆ ಮುಖ ತೋರಿಸಿಕೊಳ್ಳಲಾಗದೆ ಮೋದಿ ಮುಖ ನೋಡಿ ವೋಟು ಹಾಕಿ ಎಂದು ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಕೇಳುತ್ತಿರುವುದು ಹಾಸ್ಯಾಸ್ಪದ ಎಂದು ಜೆಡಿಎಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ವ್ಯಂಗ್ಯವಾಡಿದರು.
ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಕುಟುಂಬದ 60 ವರ್ಷದ ರಾಜಕೀಯ ಸೇವೆಯಲ್ಲಿ ಯಾರಿಂದಲೂ ನಯಾಪೈಸೆ ಲಂಚ ಪಡೆದಿಲ್ಲ. ಇದನ್ನು ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿಯೇ ಹೇಳುತ್ತೇನೆ. ನಾವು ಸಾಧ್ಯವಾದಾಗ ದಾನ – ಧರ್ಮ ಮಾಡಿದ್ದೇವೆ. ಯಾರ ಮುಂದೆಯೂ ಕೈಚಾಚದೆ ರಾಜಕೀಯದಲ್ಲಿ ಶುದ್ಧ ಹಸ್ತದಿಂದ ಸೇವೆ ಮಾಡುತ್ತಿದ್ದೇವೆ ಎಂದು ಹೇಳಿದರು.
ಕಸ್ತೂರಿ ರಂಗನ್ ವರದಿ ಜಾರಿ ಸನ್ನಿಹಿತವಾಗಿದೆ. ಅದು ಬಂದರೆ ರಸ್ತೆ ನಿರ್ವಿುಸುವಂತಿಲ್ಲ. ಬೋರ್ವೆಲ್ ಕೊರೆಯುವಂತಿಲ್ಲ. ಮನೆ ಕಟ್ಟುವ ಹಾಗಿಲ್ಲ. ಈ ರೀತಿ ಅರ್ಧ ಜಿಲ್ಲೆ ನಾಶವಾಗುತ್ತದೆಂಬುದನ್ನು ಮನಗಂಡು ಅದನ್ನು ಜಾರಿಗೆ ತರಬೇಡಿ ಎಂದು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿತ್ತು. ರಮಾನಾಥ ರೈ ಅಂದಿನ ಪರಿಸರ ಮಂತ್ರಿಯಾಗಿದ್ದರು. ನಾನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದೆ. ಕಸ್ತೂರಿ ರಂಗನ್ ವರದಿ ಜಾರಿಯಾದರೆ ಚಿಕ್ಕಮಗಳೂರು ಜಿಲ್ಲೆಗೆ ಮಾರಕ ಎಂಬ ಅರಿವು ನಮಗಿತ್ತು. ಕೇಂದ್ರ ಸರ್ಕಾರ ಈ ಬಗ್ಗೆ ಚರ್ಚೆ ಮಾಡಲು ಎಲ್ಲ ಸಂಸದರ ಸಭೆ ಕರೆದಿತ್ತು. ಇಲ್ಲಿನ ಸಂಸದರು ಅಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ಮಾಡಬೇಡಿ ಎಂದು ಧ್ವನಿ ಎತ್ತಬೇಕಿತ್ತು. ಆದರೆ ಆ ಸಭೆಗೇ ಅವರು ಗೈರಾಗಿದ್ದಿದ್ದು ವಿಪರ್ಯಾಸವೇ ಸರಿ. ಇಲ್ಲಿನ ಜನರ ಜೀವನ್ಮರಣದ ಜತೆಗೆ ಅವರು ಚೆಲ್ಲಾಟವಾಡುತ್ತಿದ್ದಾರೆ ಎಂದು ಆರೋಪಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…