Featured

ಜನರಿಗೆ ಮುಖ ತೋರಿಸಿಕೊಳ್ಳಲಾಗದೆ ಮೋದಿ ಮುಖ ನೋಡಿ ವೋಟು ಹಾಕಿ ಎಂದು ಶೋಭಾ ಕರಂದ್ಲಾಜೆ ಕೇಳುತ್ತಿರುವುದು ಹಾಸ್ಯಾಸ್ಪದ : ಪ್ರಮೋದ್ ಮಧ್ವರಾಜ್

ಚಿಕ್ಕಮಗಳೂರು, : ಜನರಿಗೆ ಮುಖ ತೋರಿಸಿಕೊಳ್ಳಲಾಗದೆ ಮೋದಿ ಮುಖ ನೋಡಿ ವೋಟು ಹಾಕಿ ಎಂದು ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಕೇಳುತ್ತಿರುವುದು ಹಾಸ್ಯಾಸ್ಪದ ಎಂದು ಜೆಡಿಎಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ವ್ಯಂಗ್ಯವಾಡಿದರು.

ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಕುಟುಂಬದ 60 ವರ್ಷದ ರಾಜಕೀಯ ಸೇವೆಯಲ್ಲಿ ಯಾರಿಂದಲೂ ನಯಾಪೈಸೆ ಲಂಚ ಪಡೆದಿಲ್ಲ. ಇದನ್ನು ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿಯೇ ಹೇಳುತ್ತೇನೆ. ನಾವು ಸಾಧ್ಯವಾದಾಗ ದಾನ – ಧರ್ಮ ಮಾಡಿದ್ದೇವೆ. ಯಾರ ಮುಂದೆಯೂ ಕೈಚಾಚದೆ ರಾಜಕೀಯದಲ್ಲಿ ಶುದ್ಧ ಹಸ್ತದಿಂದ ಸೇವೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಕಸ್ತೂರಿ ರಂಗನ್ ವರದಿ ಜಾರಿ ಸನ್ನಿಹಿತವಾಗಿದೆ. ಅದು ಬಂದರೆ ರಸ್ತೆ ನಿರ್ವಿುಸುವಂತಿಲ್ಲ. ಬೋರ್​ವೆಲ್ ಕೊರೆಯುವಂತಿಲ್ಲ. ಮನೆ ಕಟ್ಟುವ ಹಾಗಿಲ್ಲ. ಈ ರೀತಿ ಅರ್ಧ ಜಿಲ್ಲೆ ನಾಶವಾಗುತ್ತದೆಂಬುದನ್ನು ಮನಗಂಡು ಅದನ್ನು ಜಾರಿಗೆ ತರಬೇಡಿ ಎಂದು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿತ್ತು. ರಮಾನಾಥ ರೈ ಅಂದಿನ ಪರಿಸರ ಮಂತ್ರಿಯಾಗಿದ್ದರು. ನಾನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದೆ. ಕಸ್ತೂರಿ ರಂಗನ್ ವರದಿ ಜಾರಿಯಾದರೆ ಚಿಕ್ಕಮಗಳೂರು ಜಿಲ್ಲೆಗೆ ಮಾರಕ ಎಂಬ ಅರಿವು ನಮಗಿತ್ತು. ಕೇಂದ್ರ ಸರ್ಕಾರ ಈ ಬಗ್ಗೆ ಚರ್ಚೆ ಮಾಡಲು ಎಲ್ಲ ಸಂಸದರ ಸಭೆ ಕರೆದಿತ್ತು. ಇಲ್ಲಿನ ಸಂಸದರು ಅಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ಮಾಡಬೇಡಿ ಎಂದು ಧ್ವನಿ ಎತ್ತಬೇಕಿತ್ತು. ಆದರೆ ಆ ಸಭೆಗೇ ಅವರು ಗೈರಾಗಿದ್ದಿದ್ದು ವಿಪರ್ಯಾಸವೇ ಸರಿ. ಇಲ್ಲಿನ ಜನರ ಜೀವನ್ಮರಣದ ಜತೆಗೆ ಅವರು ಚೆಲ್ಲಾಟವಾಡುತ್ತಿದ್ದಾರೆ ಎಂದು ಆರೋಪಿಸಿದರು.

Vishwa News 24

Recent Posts

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

4 minutes ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

34 minutes ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

47 minutes ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago