ಜನರು ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆದ ನಂತರ ಸರ್ಕಾರವನ್ನು ದೂರುವ ಕೆಲಸ ಮಾಡುತ್ತಿದ್ದಾರೆ : ಖರ್ಗೆ ಬೇಸರ  – vishwanews24

Featured, ರಾಜ್ಯ ನ್ಯೂಸ್

ಗ್ಯಾರಂಟಿ ಯೋಜನೆಗಳಿಂದಾಗಿ ಸರ್ಕಾರದ ಬೊಕ್ಕಸ ಖಾಲಿ ಆಗಿಲ್ಲ ..

ಸಿದ್ದರಾಮಯ್ಯ ಇದ್ದಾಗ ಲಕ್ಷ್ಮೀ ಕಾಲುಕುಂಟಿಕೊಂಡು ಬಿದ್ದಿರುತ್ತಾಳೆ: ಖರ್ಗೆ

ಮೈಸೂರು ಕರ್ನಾಟಕ ಕಾಂಗ್ರೆಸ್ ಸರ್ಕಾರವು ಉಚಿತ ಗ್ಯಾರಂಟಿ ಯೋಜನೆಗಳನ್ನು ಸಾಮಾನ್ಯ ಜನರಿಗಾಗಿ ಮಾಡಿದೆ. ಆದರೂ, ಜನರು ಅವುಗಳ ಪ್ರಯೋಜನ ಪಡೆದ ನಂತರ ಸರ್ಕಾರವನ್ನು ದೂರುವ ಕೆಲಸ ಮಾಡುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೇಸರ ವ್ಯಕ್ತಪಡಿಸಿದರು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ನಮಗಾಗಿ ನಾವು ಮಾಡಿಲ್ಲ. ಜನಸಾಮಾನ್ಯರಿಗಾಗಿ ಮಾಡಿದ್ದೇವೆ. ನೀವೆಲ್ಲ ಇದರ ಪ್ರಯೋಜನ ಪಡೆಯುತ್ತಿದ್ದೀರಿ. ಎಲ್ಲ ಪಕ್ಷದವರು ಪ್ರಯೋಜನ ಪಡೆಯುತ್ತಾರೆ. ಆಮೇಲೆ, ಅಭಿವೃದ್ಧಿ ಆಗುತ್ತಿಲ್ಲ. ರಾಜ್ಯ ಬರ್ಬಾದ್ ಆಗುತ್ತಿದೆ ಎಂದು ಟೀಕಿಸುತ್ತಾರೆ. ನಮ್ಮ ಪಕ್ಷದವರೇ ಕೆಲವರು ಆಗಾಗ ನನ್ನನ್ನು ಭೇಟಿಯಾದಾಗ ಹೀಗೆ ಹೇಳುತ್ತಿರುತ್ತಾರೆ ಎಂದರು.

ಧರ್ಮಸ್ಥಳ ಪ್ರಕರಣ : ಅಗತ್ಯ ಬಿದ್ದರೆ ಉನ್ನತ ತನಿಖೆ ನಡೆಸಲಾಗುವುದು : ಗೃಹ ಸಚಿವ ಜಿ.ಪರಮೇಶ್ವರ್‌ – vishwanews24

ಗ್ಯಾರಂಟಿ ಯೋಜನೆಗಳನ್ನು ನಾವು ಕಾಂಗ್ರೆಸ್​​ನವರಿಗಷ್ಟೇ ನೀಡುತ್ತಿಲ್ಲ. ಎಲ್ಲ ವರ್ಗದ ಜನ, ಎಲ್ಲ ಪಕ್ಷದವರು ಅದರ ಪ್ರಯೋಜನ ಪಡೆಯುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಂದಾಗಿ ಸರ್ಕಾರದ ಬೊಕ್ಕಸ ಖಾಲಿ ಆಗಿಲ್ಲ ಎಂದು ಖರ್ಗೆ ಹೇಳಿದರು.

ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ದಿವಾಳಿಯಾಗಿದೆ ಎಂಬ ಪ್ರತಿಪಕ್ಷದವರ ಆರೋಪ ಸುಳ್ಳಿನಿಂದ ಕೂಡಿದೆ. ಸರ್ಕಾರದಲ್ಲಿ ದುಡ್ಡಿಲ್ಲ ಎಂದಾದರೆ, ಶಾಸಕರಿಗೆ 50 ಕೋಟಿ ರೂಪಾಯಿ ಅನುದಾನ ಬಿಡುಗಡೆ ಹೇಗೆ ಸಾಧ್ಯ ಎಂದು ಖರ್ಗೆ ಪ್ರಶ್ನಿಸಿದರು. ಅದೃಷ್ಟವಶಾತ್, ಸಿದ್ದರಾಮಯ್ಯ ಮುಖ್ಯಮಂತ್ರಿ ಆದಾಗ ಕರ್ನಾಟಕದಲ್ಲಿ ದುಡ್ಡಿಗೆ ಬರ ಉಂಟಾಗುವುದಿಲ್ಲ. ಲಕ್ಷ್ಮೀ ಕಾಲು ಕುಂಟಿಕೊಂಡು ಬಿದ್ದಿರುತ್ತಾಳೆ. ಆದರೆ ಬಿಜೆಪಿ ಅಧಿಕಾರಕ್ಕೆ ಬಂದರೆ, ಸರ್ಕಾರದಲ್ಲಿ ಹಣ ಇರುವುದಿಲ್ಲ ಎಂದು ಖರ್ಗೆ ಟೀಕಿಸಿದರು.

ಉಡುಪಿ:ಮಳೆ ಹಾನಿ ಕಾಮಗಾರಿಗಳಿಗೆ ₹50 ಕೋಟಿ ರೂ. ವಿಶೇಷ ಅನುದಾನ ನೀಡುವಂತೆ ಸಿಎಂ ಗೆ ಯಶ್ಪಾಲ್ ಸುವರ್ಣ ಮನವಿ – vishwanews24

 

Leave a Reply