Featured

ಜನರು ತಮ್ಮ ಸುರಕ್ಷತೆಯನ್ನು ತಾವೇ ನೋಡಿಕೊಳ್ಳಬೇಕು, ಮೋದಿ ಸರ್ಕಾರ ಆಸ್ತಿ ಮಾರಾಟದಲ್ಲಿ ಬ್ಯೂಸಿ ಆಗಿದ್ದಾರೆ : ರಾಹುಲ್‍ಗಾಂಧಿ -Vishwanews24

ಜನರು ತಮ್ಮ ಸುರಕ್ಷತೆಯನ್ನು ತಾವೇ ನೋಡಿಕೊಳ್ಳಬೇಕು, ಮೋದಿ ಸರ್ಕಾರ ಆಸ್ತಿ ಮಾರಾಟದಲ್ಲಿ ಬ್ಯೂಸಿ ಆಗಿದ್ದಾರೆ : ರಾಹುಲ್‍ಗಾಂಧಿ -Vishwanews24

ನವದೆಹಲಿ : ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ, ಕೇಂದ್ರ ಸರ್ಕಾರ ತನ್ನ ಆಸ್ತಿಗಳನ್ನು ಮಾರಾಟ ಮಾಡುವುದರಲ್ಲಿ ಬ್ಯೂಸಿಯಾಗಿದ್ದು, ಜನರು ತಮ್ಮ ಸುರಕ್ಷತೆಯನ್ನು ತಾವೇ ನೋಡಿಕೊಳ್ಳಬೇಕು ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‍ಗಾಂಧಿ ಹೇಳಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ಕಳೆದ 24 ಗಂಟೆಗಳಲ್ಲಿ ಕೋವಿಡ್‍ನ ಸೋಂಕು ಆತಂಕಕಾರಿಯಾಗಿ ಹೆಚ್ಚುತ್ತಿದೆ. ಮುಂದಿನ ಅಲೆಯನ್ನು ನಿಯಂತ್ರಿಸಲು ಮತ್ತು ಗಂಭೀರ ಪರಿಸ್ಥಿತಿಯನ್ನು ನಿಭಾಯಿಸಲು ಲಸಿಕಾ ಅಭಿಯಾನ ತೀವ್ರವಾಗಿ ಹೆಚ್ಚಾಗಬೇಕಿತ್ತು. ಆದರೆ ಕೇಂದ್ರ ಸರ್ಕಾರ ಮಾರಾಟದಲ್ಲಿ ಬ್ಯೂಸಿಯಾಗಿದೆ. ಹಾಗಾಗಿ ಜನ ತಮ್ಮ ರಕ್ಷಣೆಯನ್ನು ತಾವೇ ಮಾಡಿಕೊಳ್ಳಬೇಕು, ಎಚ್ಚರವಾಗಿರಬೇಕು ಎಂದು ಉಲ್ಲೇಖಿಸಿದ್ದಾರೆ.

ನಿನ್ನೆ ಒಂದೇ ದಿನದಲ್ಲಿ ದೇಶದಲ್ಲಿನ ಕೊರೊನಾ ಪ್ರಕರಣಗಳ ಸಂಖ್ಯೆ 46,164ಕ್ಕೆ ಹೆಚ್ಚಾಗಿದೆ. 607 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಒಟ್ಟು 4,36,365 ಮಂದಿ ಸಾವನ್ನಪ್ಪಿದರೆ, ಸೋಂಕಿನ ಸಂಖ್ಯೆ 3,25,58,530ಕ್ಕೆ ಹೆಚ್ಚಾಗಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ 3,33,725ಕ್ಕೆ ಏರಿಕೆಯಾಗಿದೆ.

70 ವರ್ಷಗಳಿಂದ ಸಂಪಾದಿಸಲಾಗಿದ್ದ ಆಸ್ತಿಗಳನ್ನು ಬಿಜೆಪಿ ಸರ್ಕಾರ ಮಾರಾಟ ಮಾಡುತ್ತಿದೆ ಎಂದು ಪೈಪ್‍ಲೈನ್ ಯೋಜನೆಯ ಖಾಸಗೀಕರಣವನ್ನು ಉಲ್ಲೇಖಿಸಿ ರಾಹುಲ್‍ಗಾಂಧಿ ಟೀಕೆ ಮಾಡಿದರು.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

5 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

5 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

6 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

6 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

7 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

7 hours ago