ಶಿವಮೊಗ್ಗ: “ಮೋದಿ ಹಾಗೂ ಅಮಿತ್ ಶಾ ಅವರನ್ನು ರಾಷ್ಟ್ರದ ಜನರು ಎರಡು ಕಣ್ಣುಗಳಂತೆ ನೋಡುತ್ತಿದ್ದಾರೆ” ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರಪ್ಪ ಹೇಳಿದ್ದಾರೆ.
ನಗರದ ಬಸ್ ನಿಲ್ದಾಣದಲ್ಲಿ ಶುಕ್ರವಾರ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ಧರ್ಮದ ವಿಷಯದಲ್ಲಿ ಮುಸಲ್ಮಾನರು ಪಾಕಿಸ್ತಾನಕ್ಕೆ ಹೋಗಲಿ, ಹಿಂದೂಗಳು ಭಾರತದಲ್ಲಿರಲಿ ಎಂದು ಅಂಬೇಡ್ಕರ್ ಅವರೇ ಹೇಳಿದ್ದರು, ಆದರೆ ಮೋದಿಯವರು ದೇಶದಲ್ಲಿರುವ ಮುಸಲ್ಮಾನರನ್ನು ಜೊತೆಗೆ ತೆಗೆದುಕೊಂಡು ಹೋಗುವ ಕಾರ್ಯವನ್ನು ಮಾಡುತ್ತಿದ್ದಾರೆ” ಎಂದು ಹೇಳಿದರು.
“ಮೋದಿಯವರು ರಾಷ್ಟ್ರದ ಹಿತದೃಷ್ಟಿಯಿಂದ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಪೌರತ್ವ ಕಾಯ್ದೆಯಿಂದ ಮುಸಲ್ಮಾನರಿಗೆ ಯಾವುದೇ ತೊಂದರೆ ಇಲ್ಲ. ಚುನಾವಣೆಯಲ್ಲಿ ಸೋಲುಂಡ ಕಾಂಗ್ರೆಸ್ಸಿಗರ ಕುತಂತ್ರ ಈ ದೇಶದಲ್ಲಿ ನಡೆಯುತ್ತಿದೆ. ಎಷ್ಟೇ ಗೊಂದಲ ಸೃಷ್ಟಿ ಮಾಡಿದರೂ ಕಾಂಗ್ರೆಸ್ ಮತ್ತೆ ರಾಷ್ಟ್ರ ಹಾಗೂ ರಾಜ್ಯದಲ್ಲಿ ಅಧಿಕಾರಕ್ಕೆ ಬಾರದು. ಇನ್ನು ಮುಂದೆಯೂ ಮೋದಿಯವರೇ ಪ್ರಧಾನಿಯಾಗಿರುತ್ತಾರೆ” ಎಂದರು.
“ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಸಂದರ್ಭ ಪೌರತ್ವ ಕಾಯ್ದೆಯನ್ನು ಜಾರಿಗೆ ತರಲು ಮುಂದಾಗಿದ್ದರೂ ಸಹ ಸಾಧ್ಯವಾಗಿಲ್ಲ. ಈ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ಮೋದಿಯವರು ಉತ್ತಮ ಕೆಲಸ ಮಾಡಿದ್ದಾರೆ” ಎಂದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…