Featured

ಜನರ ಅಚ್ಚುಮೆಚ್ಚಿನ ನಾಯಕ : ಜಾಗತಿಕ ನಾಯಕರನ್ನು ಹಿಂದಿಕ್ಕಿದ ಮೋದಿ, ಭಾರತದಲ್ಲಿ ಶೇ. 66ರಷ್ಟು ಮೆಚ್ಚುಗೆ -Vishwanews24

ಜನರ ಅಚ್ಚುಮೆಚ್ಚಿನ ನಾಯಕ : ಜಾಗತಿಕ ನಾಯಕರನ್ನು ಹಿಂದಿಕ್ಕಿದ ಮೋದಿ, ಭಾರತದಲ್ಲಿ ಶೇ. 66ರಷ್ಟು ಮೆಚ್ಚುಗೆ -Vishwanews24

ಹೊಸದಿಲ್ಲಿ: ಜನರ ಅಚ್ಚುಮೆಚ್ಚಿನ ನಾಯಕ ವಿಚಾರದಲ್ಲಿ ಪ್ರಧಾನಿ ಮೋದಿ ಅವರು ಅಮೆರಿಕದ ಅಧ್ಯಕ್ಷ ಜೋ ಬೈಡೆನ್‌, ಜರ್ಮನಿ ಚಾನ್ಸೆಲರ್‌ ಏಂಜೆಲಾ ಮರ್ಕೆಲ್‌ ಅವರನ್ನೂ ಮೀರಿಸಿದ್ದಾರೆ.

2019ಕ್ಕೆ ಹೋಲಿಸಿದರೆ ಈಗ ಪ್ರಧಾನಿ ಮೋದಿ ಅವರ “ಒಪ್ಪಿಗೆ’ಯ ಅಂತರ ಕಡಿಮೆಯಾಗಿದೆ. ಆಗ ಭಾರತದಲ್ಲಿ ಮೋದಿ ನಾಯಕತ್ವವನ್ನು ಶೇ. 82ರಷ್ಟು ಮಂದಿ ಒಪ್ಪಿಕೊಂಡಿದ್ದರು. ಶೇ. 11ರಷ್ಟು ಮಾತ್ರ ಅಸಮಾಧಾನ ಹೊಂದಿದ್ದರು.

ಈಗ ಶೇ. 66ರಷ್ಟು ಮಂದಿ ಮೋದಿ ಅವರ ನಾಯಕತ್ವದ ಬಗ್ಗೆ ಮೆಚ್ಚುಗೆ ಹೊಂದಿದ್ದಾರೆ. ಶೇ. 28ರಷ್ಟು ಮಂದಿ ಅತೃಪ್ತಿ ಹೊಂದಿದ್ದಾರೆ. ಆದರೂ ಜಾಗತಿಕ ಮಟ್ಟದ ಎಲ್ಲ ನಾಯಕರಿಗಿಂತ ಮೋದಿ ಮುಂದಿದ್ದಾರೆ.

ಅಮೆರಿಕದ ಮಾರ್ನಿಂಗ್‌ ಕನ್ಸಲ್ಟ್ ಎಂಬ ಸಂಸ್ಥೆ 13 ದೇಶಗಳಲ್ಲಿ ಈ ಸಮೀಕ್ಷೆ ನಡೆಸಿದೆ. ತಮ್ಮ ನಾಯಕರ ಬಗ್ಗೆ ಅಲ್ಲಿನ ಜನ ಹೊಂದಿರುವ ಅಭಿಪ್ರಾಯಗಳನ್ನು ಕ್ರೋಡೀಕರಿಸಿದೆ. ಭಾರತದಲ್ಲಿ 2,126 ಮಂದಿಯನ್ನು ಮಾತನಾಡಿಸಿದೆ.

ಇಟಲಿ ಪ್ರಧಾನಿ ಮಾರಿಯೋ ಡ್ರಾ (ಶೇ.65), ಮೆಕ್ಸಿಕೋ ಅಧ್ಯಕ್ಷ ಆಂಡ್ರೆಸ್‌ ಮ್ಯಾನ್ಯುವಲ್‌ ಲೋಪಸ್‌ ಒಬ್ರೆ ಡಾರ್‌ (ಶೇ.63), ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್‌ ಮಾರಿಸನ್‌ (ಶೇ.54), ಜರ್ಮನಿಯ ಚಾನ್ಸೆಲರ್‌ ಏಂಜೆಲಾ ಮರ್ಕೆಲ್‌ (ಶೇ.53), ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ (ಶೇ.53), ಕೆನಡಾ ಪ್ರಧಾನಿ ಜಸ್ಟಿನ್‌ ತ್ರುದೌ (ಶೇ.48), ಇಂಗ್ಲೆಂಡ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ (ಶೇ.44), ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್‌ ಜೋ ಇನ್‌ (ಶೇ.37), ಸ್ಪೈನ್‌ನ ಪೆಡ್ರೋ ಸಾಂಕೋಝ್ (ಶೇ.36), ಬ್ರೆಜಿಲ್‌ ಅಧ್ಯಕ್ಷ ಜೈರ್‌ ಬೋಲ್ಸಾ ನೋರೋ (ಶೇ.35), ಫ್ರಾನ್ಸ್‌ ಅಧ್ಯಕ್ಷ ಇಮ್ಯಾನ್ಯುವೆಲ್‌ ಮ್ಯಾಕ್ರನ್‌ (ಶೇ.35) ಜನರಿಂದ “ಒಪ್ಪಿಗೆ’ ಪಡೆದಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 days ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago