ಹೊಸದಿಲ್ಲಿ: ಜನರ ಅಚ್ಚುಮೆಚ್ಚಿನ ನಾಯಕ ವಿಚಾರದಲ್ಲಿ ಪ್ರಧಾನಿ ಮೋದಿ ಅವರು ಅಮೆರಿಕದ ಅಧ್ಯಕ್ಷ ಜೋ ಬೈಡೆನ್, ಜರ್ಮನಿ ಚಾನ್ಸೆಲರ್ ಏಂಜೆಲಾ ಮರ್ಕೆಲ್ ಅವರನ್ನೂ ಮೀರಿಸಿದ್ದಾರೆ.
2019ಕ್ಕೆ ಹೋಲಿಸಿದರೆ ಈಗ ಪ್ರಧಾನಿ ಮೋದಿ ಅವರ “ಒಪ್ಪಿಗೆ’ಯ ಅಂತರ ಕಡಿಮೆಯಾಗಿದೆ. ಆಗ ಭಾರತದಲ್ಲಿ ಮೋದಿ ನಾಯಕತ್ವವನ್ನು ಶೇ. 82ರಷ್ಟು ಮಂದಿ ಒಪ್ಪಿಕೊಂಡಿದ್ದರು. ಶೇ. 11ರಷ್ಟು ಮಾತ್ರ ಅಸಮಾಧಾನ ಹೊಂದಿದ್ದರು.
ಈಗ ಶೇ. 66ರಷ್ಟು ಮಂದಿ ಮೋದಿ ಅವರ ನಾಯಕತ್ವದ ಬಗ್ಗೆ ಮೆಚ್ಚುಗೆ ಹೊಂದಿದ್ದಾರೆ. ಶೇ. 28ರಷ್ಟು ಮಂದಿ ಅತೃಪ್ತಿ ಹೊಂದಿದ್ದಾರೆ. ಆದರೂ ಜಾಗತಿಕ ಮಟ್ಟದ ಎಲ್ಲ ನಾಯಕರಿಗಿಂತ ಮೋದಿ ಮುಂದಿದ್ದಾರೆ.
ಅಮೆರಿಕದ ಮಾರ್ನಿಂಗ್ ಕನ್ಸಲ್ಟ್ ಎಂಬ ಸಂಸ್ಥೆ 13 ದೇಶಗಳಲ್ಲಿ ಈ ಸಮೀಕ್ಷೆ ನಡೆಸಿದೆ. ತಮ್ಮ ನಾಯಕರ ಬಗ್ಗೆ ಅಲ್ಲಿನ ಜನ ಹೊಂದಿರುವ ಅಭಿಪ್ರಾಯಗಳನ್ನು ಕ್ರೋಡೀಕರಿಸಿದೆ. ಭಾರತದಲ್ಲಿ 2,126 ಮಂದಿಯನ್ನು ಮಾತನಾಡಿಸಿದೆ.
ಇಟಲಿ ಪ್ರಧಾನಿ ಮಾರಿಯೋ ಡ್ರಾ (ಶೇ.65), ಮೆಕ್ಸಿಕೋ ಅಧ್ಯಕ್ಷ ಆಂಡ್ರೆಸ್ ಮ್ಯಾನ್ಯುವಲ್ ಲೋಪಸ್ ಒಬ್ರೆ ಡಾರ್ (ಶೇ.63), ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ (ಶೇ.54), ಜರ್ಮನಿಯ ಚಾನ್ಸೆಲರ್ ಏಂಜೆಲಾ ಮರ್ಕೆಲ್ (ಶೇ.53), ಅಮೆರಿಕ ಅಧ್ಯಕ್ಷ ಜೋ ಬೈಡೆನ್ (ಶೇ.53), ಕೆನಡಾ ಪ್ರಧಾನಿ ಜಸ್ಟಿನ್ ತ್ರುದೌ (ಶೇ.48), ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ (ಶೇ.44), ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಜೋ ಇನ್ (ಶೇ.37), ಸ್ಪೈನ್‌ನ ಪೆಡ್ರೋ ಸಾಂಕೋಝ್ (ಶೇ.36), ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸಾ ನೋರೋ (ಶೇ.35), ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುವೆಲ್ ಮ್ಯಾಕ್ರನ್ (ಶೇ.35) ಜನರಿಂದ “ಒಪ್ಪಿಗೆ’ ಪಡೆದಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…