ಜನರ ಆರೋಗ್ಯದ ದೃಷ್ಟಿ ಹಾಗೂ ಅವರಿಗೆ ತೊಂದರೆ ಅಗಬಾರದೆಂಬ ಉದ್ದೇಶದಿಂದ`ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ’ ತಾತ್ಕಲಿಕ ಸ್ಥಗಿತ :  ಸಿದ್ದರಾಮಯ್ಯ – Vishwanews24

Featured, ರಾಜ್ಯ ನ್ಯೂಸ್

ಜನರ ಆರೋಗ್ಯದ ದೃಷ್ಟಿ ಹಾಗೂ ಅವರಿಗೆ ತೊಂದರೆ ಅಗಬಾರದೆಂಬ ಉದ್ದೇಶದಿಂದ`ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ’ ತಾತ್ಕಲಿಕ ಸ್ಥಗಿತ :  ಸಿದ್ದರಾಮಯ್ಯ – Vishwanews24

ರಾಮನಗರ : ಜನರ ಆರೋಗ್ಯದ ದೃಷ್ಟಿಯಿಂದ, ಜನರಿಗೆ ತೊಂದರೆ ಅಗಬಾರದೆಂಬ ಉದ್ದೇಶದಿಂದ ಮೇಕೆದಾಟು ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಿದ್ದೇವೆ. ಕೊರೊನಾ ವೈರಸ್ ಕಡಿಮೆಯಾದ ಬಳಿಕ ಇಲ್ಲಿಂದಲೇ ಮತ್ತೆ ಪಾದಯಾತ್ರೆ ಆರಂಭಿಸುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್ ನಾಯಕರು ಇಂದು ಮೇಕೆದಾಟು ಪಾದಯಾತ್ರೆ ಕುರಿತಂತೆ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಂಡಿದ್ದು, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 5 ನೇ ದಿನಕ್ಕೆ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯನ್ನು ನಿಲ್ಲಿಸಿದೆ.

ಕಾಂಗ್ರೆಸ್ ಪಕ್ಷದ ಮೇಕೆದಾಟು ಪಾದಯಾತ್ರೆ ರದ್ದು – VIshwanews24

ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ನಾವೆಲ್ಲ ಚರ್ಚಿಸಿ ನಿರ್ಧಾರ ತೆಗೆದುಕೊಂಡಿದ್ದೇವೆ. ಸಂಗಮದಿಂದ ರಾಮನಗರದವರೆಗೂ ಯಶಸ್ವಿಯಾಗಿ ಪಾದಯಾತ್ರೆ ಮಾಡಿದ್ದೇವೆ. ಇವತ್ತು ರಾಮನಗರದಿಂದ ಪಾದಯಾತ್ರೆ ಇತ್ತು. ರಾಜ್ಯದಲ್ಲಿ ಕೊರೊನಾ ಕೇಸ್ ಹೆಚ್ಚಾಗುತ್ತಿದೆ. ನಿನ್ನೆ 15 ಸಾವಿರ ಕ್ಕೂ ಹೆಚ್ಚು ಮಂದಿಗೆ ಕೊರೊನಾಸೋಂಕು ದೃಢಪಟ್ಟಿದೆ. ನಮಗೂ ನಮ್ಮದೇ ಆದ ಜವಾಬ್ದಾರಿ ಇದೆ ಎಂದರು.

ಕೊರೊನಾ ಹೆಚ್ಚಾಗಲು ಕಾಂಗ್ರೆಸ್ ಕಾರಣ ಅಲ್ಲ. ಕೊರೊನಾ ಹೆಚ್ಚಾಗಲು ಬಿಜೆಪಿಯೇ ಕಾರಣ, ಕೇಸ್ ಹೆಚ್ಚಾದ್ರು ಸಿಎಂ ನಡೆಸೋದು ನಿಲ್ಲಿಸಿಲ್ಲ.ಬಿಜೆಪಿಯವರು ರ್ಯಾಲಿಗಳನ್ನು ನಡೆಸಿದ್ರು. ಎಂಎಲ್ಸಿ ಪ್ರಮಾಣ ವಚನ ಕಾರ್ಯಕ್ರಮದಲ್ಲಿ 4 ಸಾವಿರ ಜನರನ್ನು ಸೇರಿಸಿ ಕಾರ್ಯಕ್ರಮ ಮಾಡಿದ್ರು. ಹೊನ್ನಾಳಿ ಶಾಸಕ ರೇಣುಕಾಚಾರ್ಯ ಸಮಾರಂಭ ಮಾಡಿದ್ದಾರೆ. ಅವರ ಮೇಲೆ ಏಕೆ ಕೇಸ್ ದಾಖಲಿಸಲಿಲ್ಲ? ಆರಗ ಜ್ಞಾನೇಂದ್ರ ಕ್ಷೇತ್ರದಲ್ಲೂ ಜಾತ್ರೆ ನಡೆದಿತ್ತು ಆದರೆ ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆ ತಡೆಯೋದು ಸರ್ಕಾರದ ಉದ್ದೇಶವಾಗಿತ್ತು ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಂಗಳೂರು: ಮೊಬೈಲ್ ಕದ್ದು ಪರಾರಿಯಾಗುತ್ತಿದ್ದ ಕಳ್ಳನನ್ನು ಸಿನಿಮೀಯಾ ಶೈಲಿಯಲ್ಲಿ ಚೇಸ್ ಮಾಡಿ ಹಿಡಿದ ಪೊಲೀಸರು – VIshwanews24

Leave a Reply