ಬೆಂಗಳೂರು :ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಪ್ರಾಸಿಕ್ಯೂಷನ್‌ಗೆ ನೀಡಿದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾ.ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ವಜಾಗೊಳಿಸಿದ ಬೆನ್ನಲ್ಲೇ ಸಿಎಂ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ.ಆದೇಶ ಪ್ರತಿ ಪಡೆದು ಓದಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ.ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17 ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ.ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದು ತಿಳಿಸಿದ್ದಾರೆ.
ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ ಎಸ್ ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ ನಿರಾಕರಿಸಿದ್ದರು.ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್ ಎಸ್ ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ.ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17 ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ.ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ.ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ ಎಂದಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…