Featured

ಜನರ ಆಶೀರ್ವಾದವೇ ನನಗೆ ಶ್ರೀರಕ್ಷೆ ; ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ : ಸಿಎಂ ಸಿದ್ದರಾಮಯ್ಯ – vishwanews24

ಜನರ ಆಶೀರ್ವಾದವೇ ನನಗೆ ಶ್ರೀರಕ್ಷೆ ; ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು :ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಪ್ರಾಸಿಕ್ಯೂಷನ್‌ಗೆ ನೀಡಿದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾ.ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ವಜಾಗೊಳಿಸಿದ ಬೆನ್ನಲ್ಲೇ ಸಿಎಂ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ.ಆದೇಶ ಪ್ರತಿ ಪಡೆದು ಓದಿದ ಬಳಿಕ‌ ಪ್ರತಿಕ್ರಿಯೆ ನೀಡುತ್ತೇನೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ.ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17 ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ.ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದು ತಿಳಿಸಿದ್ದಾರೆ.

ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ ಎಸ್ ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ‌ ನಿರಾಕರಿಸಿದ್ದರು.ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್ ಎಸ್ ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ.ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17 ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ.ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ.ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ ಎಂದಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

28 minutes ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

40 minutes ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

55 minutes ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

4 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

4 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

4 hours ago