ಜನರ ವಿಶ್ವಾಸವಿಲ್ಲದ ಮೈತ್ರಿ ಸರ್ಕಾರಕ್ಕೆ ಆಯಸ್ಸು ಇಲ್ಲ : ಬಿ.ಎಸ್. ಯಡಿಯೂರಪ್ಪ

Featured, ರಾಜ್ಯ ನ್ಯೂಸ್

ಬೆಂಗಳೂರು : ಜನರ ವಿಶ್ವಾಸವಿಲ್ಲದ ಈ ಸರ್ಕಾರಕ್ಕೆ ಆಯಸ್ಸು ಇಲ್ಲ. ಈ ಸರ್ಕಾರ ಪ್ರಣಾಳಿಕೆಯಲ್ಲಿ ನೀಡಿದ ರೈತರ ಸಾಲ ಸಂಪೂರ್ಣ ಮನ್ನಾ ಮಾಡದಿದ್ದರೆ ಅಧಿಕಾರಕ್ಕಾಗಿ ಅಪವಿತ್ರ ಮೈತ್ರಿ ಮಾಡಿಕೊಂಡ ಸರ್ಕಾರದ ಮರ್ಯಾದೆ ಹರಾಜು ಹಾಕುತ್ತೇವೆ ಎಂದು ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಗುಡುಗಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಬಿಎಸ್ ವೈ, ಚುನಾವಣಾ ನೀತಿ ಸಂಹಿತೆ ಜಾರಿಯಾದ ಮಾ. 28 ರಿಂದ ಸ್ಥಗಿತಗೊಂಡಿದ್ದ ಅಭಿವೃದ್ಧಿ ಕೆಲಸಗಳು ಪುನಾರಂಭ ಆಗಿಲ್ಲ. ಕಳೆದ ಮೂರುವರೆ ತಿಂಗಳಿಂದ ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸ್ತಬ್ದಗೊಂಡಿದೆ. ಅಧಿವೇಶನ ಅಂತ್ಯಗೊಳ್ಳುವ ಜು. 12 ರ ಬಳಿಕ ಪ್ರತಿಪಕ್ಷದ ಎಲ್ಲ 104 ಶಾಸಕರು ಜನರ ಮುಂದೆ ಹೋಗಿ ಸರ್ಕಾರದ ಮಾನ ಹರಾಜು ಹಾಕುತ್ತೇವೆ ಎಂದು ವಾಗ್ದಾಳಿ ನಡೆಸಿದರು.

37 ಶಾಸಕರ ಬಲವಿರುವ ಹೆಚ್.ಡಿ. ಕುಮಾರಸ್ವಾಮಿ ಅವರು ಸಿಎಂ ಆಗಿರುವುದು ಪ್ರಜಾತಂತ್ರ ವ್ಯವಸ್ಥೆಯ ಕಗ್ಗೊಲೆ.ಕೋಮುವಾದಿಗಳನ್ನು ಅಧಿಕಾರದಿಂದ ದೂರವಿಡಬೇಕು ಎಂಬ ಕಾರಣ ನೀಡಿ ಕಾಂಗ್ರೆಸ್ ನವರು ಜೆಡಿಎಸ್ ವರಿಷ್ಠರ ಕಾಲಿಗೆ ಬಿದ್ದು ಸರ್ಕಾರ ಮಾಡಿದ್ದು ದುರಂತ ಎಂದರು.