ದಕ್ಷಿಣಕನ್ನಡ : ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳತಂಗಡಿ ತಾಲೂಕಿನಲ್ಲಿ ಮೀಸಲು ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣ ಮಾಡಲು ಪ್ರೀತಿಸುತ್ತಿದ್ದ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಅದನ್ನು ತಡಿದಾಗ ಶಾಸಕ ಹರೀಶ್ ಪೂಂಜಾ ಅವರು ಅಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಎಫ್ ಐ ಆರ್ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಶಾಸಕ ಹರೀಶ್ ಪೂಂಜ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಹಾಗೂ ಅರಣ್ಯ ಸಚಿವರು ನಿಮ್ಮ ಈ ಗಂಡುಬಿದರಿಕೆಗಳಿಗೆಲ್ಲ ನಾನು ಹೆದರುವುದಿಲ್ಲ ಎಂದು ಫೇಸ್ಬುಕ್ ನಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ನೋಡೇ ಬಿಡೋಣ. ನಾನು ಶಾಸಕನಾಗಿರುವುದು ನನ್ನ ಜನರ ಸೇವೆಗೆ ಮತ್ತು ಅವರ ರಕ್ಷಣೆಗೆ ಜೈಲಿಗೆ ಹೋಗಲು ಸಿದ್ಧ. ಬಾಲ್ಯದಿಂದಲೂ ಸುಭಾಷ್ ಚಂದ್ರ ಬೋಸ್ , ಸರ್ದಾರ್ ಪಟೇಲ್, ವೀರ ಸಾವರ್ಕರ್, ಭಗತ್ ಸಿಂಗ್ ಮುಂತಾದವರನ್ನು ಆದರ್ಶವಾಗಿ ಇಟ್ಟುಕೊಂಡು, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ (ABVP) ದಿನಗಳಿಂದ ಜನ ಸೇವೆ, ಜನರಿಗಾಗಿ ಸಂಘರ್ಷ ಮಾಡಿಕೊಂಡು ನಾಯಕನಾದವನು. ನಾನು ಜನರಿಂದ ಶಾಸಕನಾಗಿ ಜನರಿಗೋಸ್ಕರ ಇರುವವನು ಅದಕ್ಕಾಗಿ ಯಾವ ಬೆಲೆ ತೆರಲು ಸಿದ್ದ.
ನನ್ನ ವಿಧಾನಸಭಾ ಕ್ಷೇತ್ರದಲ್ಲಿ, ಅರಣ್ಯದ ಅಂಚಿನಲ್ಲಿ, ನೂರು ವರ್ಷಕ್ಕಿಂತಲೂ ಹಿಂದಿನಿಂದ ಕೃಷಿ ಚಟುವಟಿಕೆ ಮಾಡುತ್ತಾ ಬಂದಿದ್ದ ಕಳೆಂಜದ ದೇವಣ್ಣ ಗೌಡ ಅವರ ಕುಟುಂಬವನ್ನು ಒಕ್ಕಲೆಬ್ಬಿಸಲು ಯತ್ನಿಸಿದ ಅರಣ್ಯ ಇಲಾಖೆಯ ವಿರುದ್ಧ ಜಿಲ್ಲೆಯ ಭಾರತೀಯ ಜನತಾ ಪಕ್ಷದ ಶಾಸಕ ಮಿತ್ರರೊಂದಿಗೆ ಮತ್ತು ಕಾರ್ಯಕರ್ತರೊಂದಿಗೆ ಸೇರಿ ಪ್ರತಿಭಟಿಸಿ ಬಡ ಕುಟುಂಬವನ್ನು ಒಕ್ಕಲೆಬ್ಬಿಸುವುದರಿಂದ ತಡೆದಿದ್ದೇವು.
ನೂರಾರು ವರ್ಷಗಳಿಂದ ಬದುಕು ಕಟ್ಟಿಕೊಂಡಿದ್ದ ಮನೆಯವರ ಪರವಾಗಿ ನಾನೊಬ್ಬ ಜನಪ್ರತಿನಿಧಿಯಾಗಿ ಧ್ವನಿ ಎತ್ತಿದ್ದು ತಪ್ಪಾಯಿತೇ? ನನ್ನ ಕ್ಷೇತ್ರದ ಜನರ ಪರವಾಗಿ ಹೋರಾಡುವ ಹಕ್ಕು ನನಗಿಲ್ಲವೇ? ನನ್ನ ಜನ ನನ್ನಲ್ಲಿ ಸಮಸ್ಯೆ ಹೇಳಿಕೊಂಡಾಗ ಸುಮ್ಮನಿರಬೇಕೆ? ಹೀಗಾದರೆ ಸಾಮಾನ್ಯ ಜನರ ಗತಿಯೇನು? ಜನರ ಸಮಸ್ಯೆಗೆ ಧ್ವನಿಯಾದ ಒಬ್ಬ ಜನಪ್ರತಿನಿಧಿಯನ್ನು ಹೀಗೆಲ್ಲ ಕಾಡುವುದಾದರೆ ಜನಸಾಮಾನ್ಯರು ಕಾಂಗ್ರೆಸ್ ಸರ್ಕಾರದಡಿಯಲ್ಲಿ ಹೇಗೆ ಬದುಕಬೇಕು?
ಮಾನ್ಯ ಮುಖ್ಯಮಂತ್ರಿಗಳೇ, ಅರಣ್ಯ ಸಚಿವರೇ ನಿಮ್ಮ ಈ ಬೆದರಿಕೆ ತಂತ್ರಗಳಿಗೆ ನಾನು ಬೆದರುವುದಿಲ್ಲ. ಮತ್ತೆ ಹೇಳುತ್ತಿದ್ದೇನೆ ಬಡವರಿಗಾಗಿ ಇಂತಹ ನೂರು ಕೇಸು ಹಾಕಿಸಿಕೊಳ್ಳುವುದಕ್ಕೂ ಸಿದ್ಧನಿದ್ದೇನೆ, ಜೈಲು ಸೇರಲೂ ತಯಾರಿದ್ದೇನೆ ಎಂದು ಕಿಡಿ ಕಾರಿದ್ದಾರೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…