Featured

ಜನರ ಸೇವೆಗೆ ಮತ್ತು ಅವರ ರಕ್ಷಣೆಗೆ ಜೈಲಿಗೆ ಹೋಗಲು ಸಿದ್ಧ , ಈ ಬೆದರಿಕೆ ತಂತ್ರಗಳಿಗೆ ನಾನು ಬೆದರುವುದಿಲ್ಲ : ಶಾಸಕ ಹರೀಶ್ ಪೂಂಜಾ – Vishwanews24

ಬಡವರಿಗಾಗಿ ಇಂತಹ ನೂರು ಕೇಸು ಹಾಕಿಸಿಕೊಳ್ಳುವುದಕ್ಕೂ ಸಿದ್ಧ, ಜೈಲು ಸೇರಲೂ ತಯಾರಿದ್ದೇನೆ  :  ಶಾಸಕ ಹರೀಶ್ ಪೂಂಜಾ ಆಕ್ರೋಶ

ದಕ್ಷಿಣಕನ್ನಡ : ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳತಂಗಡಿ ತಾಲೂಕಿನಲ್ಲಿ ಮೀಸಲು ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣ ಮಾಡಲು ಪ್ರೀತಿಸುತ್ತಿದ್ದ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಅದನ್ನು ತಡಿದಾಗ ಶಾಸಕ ಹರೀಶ್ ಪೂಂಜಾ ಅವರು ಅಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಎಫ್ ಐ ಆರ್ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಶಾಸಕ ಹರೀಶ್ ಪೂಂಜ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಹಾಗೂ ಅರಣ್ಯ ಸಚಿವರು ನಿಮ್ಮ ಈ ಗಂಡುಬಿದರಿಕೆಗಳಿಗೆಲ್ಲ ನಾನು ಹೆದರುವುದಿಲ್ಲ ಎಂದು ಫೇಸ್ಬುಕ್ ನಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ನೋಡೇ ಬಿಡೋಣ. ನಾನು ಶಾಸಕನಾಗಿರುವುದು ನನ್ನ ಜನರ ಸೇವೆಗೆ ಮತ್ತು ಅವರ ರಕ್ಷಣೆಗೆ ಜೈಲಿಗೆ ಹೋಗಲು ಸಿದ್ಧ. ಬಾಲ್ಯದಿಂದಲೂ ಸುಭಾಷ್ ಚಂದ್ರ ಬೋಸ್ , ಸರ್ದಾರ್ ಪಟೇಲ್, ವೀರ ಸಾವರ್ಕರ್, ಭಗತ್ ಸಿಂಗ್ ಮುಂತಾದವರನ್ನು ಆದರ್ಶವಾಗಿ ಇಟ್ಟುಕೊಂಡು, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ (ABVP) ದಿನಗಳಿಂದ ಜನ ಸೇವೆ, ಜನರಿಗಾಗಿ ಸಂಘರ್ಷ ಮಾಡಿಕೊಂಡು ನಾಯಕನಾದವನು. ನಾನು ಜನರಿಂದ ಶಾಸಕನಾಗಿ ಜನರಿಗೋಸ್ಕರ ಇರುವವನು ಅದಕ್ಕಾಗಿ ಯಾವ ಬೆಲೆ ತೆರಲು ಸಿದ್ದ.

ನನ್ನ ವಿಧಾನಸಭಾ ಕ್ಷೇತ್ರದಲ್ಲಿ, ಅರಣ್ಯದ ಅಂಚಿನಲ್ಲಿ, ನೂರು ವರ್ಷಕ್ಕಿಂತಲೂ ಹಿಂದಿನಿಂದ ಕೃಷಿ ಚಟುವಟಿಕೆ ಮಾಡುತ್ತಾ ಬಂದಿದ್ದ ಕಳೆಂಜದ ದೇವಣ್ಣ ಗೌಡ ಅವರ ಕುಟುಂಬವನ್ನು ಒಕ್ಕಲೆಬ್ಬಿಸಲು ಯತ್ನಿಸಿದ ಅರಣ್ಯ ಇಲಾಖೆಯ ವಿರುದ್ಧ ಜಿಲ್ಲೆಯ ಭಾರತೀಯ ಜನತಾ ಪಕ್ಷದ ಶಾಸಕ ಮಿತ್ರರೊಂದಿಗೆ ಮತ್ತು ಕಾರ್ಯಕರ್ತರೊಂದಿಗೆ ಸೇರಿ ಪ್ರತಿಭಟಿಸಿ ಬಡ ಕುಟುಂಬವನ್ನು ಒಕ್ಕಲೆಬ್ಬಿಸುವುದರಿಂದ ತಡೆದಿದ್ದೇವು.

ನೂರಾರು ವರ್ಷಗಳಿಂದ ಬದುಕು ಕಟ್ಟಿಕೊಂಡಿದ್ದ ಮನೆಯವರ ಪರವಾಗಿ ನಾನೊಬ್ಬ ಜನಪ್ರತಿನಿಧಿಯಾಗಿ ಧ್ವನಿ ಎತ್ತಿದ್ದು ತಪ್ಪಾಯಿತೇ? ನನ್ನ ಕ್ಷೇತ್ರದ ಜನರ ಪರವಾಗಿ ಹೋರಾಡುವ ಹಕ್ಕು ನನಗಿಲ್ಲವೇ? ನನ್ನ ಜನ ನನ್ನಲ್ಲಿ ಸಮಸ್ಯೆ ಹೇಳಿಕೊಂಡಾಗ ಸುಮ್ಮನಿರಬೇಕೆ? ಹೀಗಾದರೆ ಸಾಮಾನ್ಯ ಜನರ ಗತಿಯೇನು? ಜನರ ಸಮಸ್ಯೆಗೆ ಧ್ವನಿಯಾದ ಒಬ್ಬ ಜನಪ್ರತಿನಿಧಿಯನ್ನು ಹೀಗೆಲ್ಲ ಕಾಡುವುದಾದರೆ ಜನಸಾಮಾನ್ಯರು ಕಾಂಗ್ರೆಸ್‌ ಸರ್ಕಾರದಡಿಯಲ್ಲಿ ಹೇಗೆ ಬದುಕಬೇಕು?

ಮಾನ್ಯ ಮುಖ್ಯಮಂತ್ರಿಗಳೇ, ಅರಣ್ಯ ಸಚಿವರೇ ನಿಮ್ಮ ಈ ಬೆದರಿಕೆ ತಂತ್ರಗಳಿಗೆ ನಾನು ಬೆದರುವುದಿಲ್ಲ. ಮತ್ತೆ ಹೇಳುತ್ತಿದ್ದೇನೆ ಬಡವರಿಗಾಗಿ ಇಂತಹ ನೂರು ಕೇಸು ಹಾಕಿಸಿಕೊಳ್ಳುವುದಕ್ಕೂ ಸಿದ್ಧನಿದ್ದೇನೆ, ಜೈಲು ಸೇರಲೂ ತಯಾರಿದ್ದೇನೆ ಎಂದು ಕಿಡಿ ಕಾರಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

1 day ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

1 day ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

1 day ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

1 day ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

1 day ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 day ago