ಲಕ್ನೋ: ಸರ್ಕಾರ ರಚನೆಗೂ ಮೊದಲು 2017ರಲ್ಲಿ ಬಿಜೆಪಿ ನೀಡಿದ ಭರವಸೆಗಳನ್ನು ಈಡೇರಿಸಿದೆ. ಏಕೆಂದರೆ ನಾವು ಜನರ ಸೇವೆಯೇ ನಿಜವಾದ ರಾಮ ರಾಜ್ಯ ಅಂತ ಪರಿಗಣಿಸಿದ್ದೇವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಭಾನುವಾರ ಮಥುರಾದಿಂದ ಜನ್ ವಿಶ್ವಾಸ್ ಯಾತ್ರೆಗೆ ಚಾಲನೆ ನಿಡಿದ ಅವರು, ಕಳೆದ ನಾಲ್ಕೂವರೆ ವರ್ಷಗಳಲ್ಲಿ ಸಮಾಜದ ಪ್ರತಿಯೊಂದು ವರ್ಗದ ಅಗಾಧ ಅಭಿವೃದ್ಧಿಗೆ ಬಿಜೆಪಿಯ ತುಷ್ಟೀಕರಣ ನೀತಿಯೇ ಕಾರಣ. ಬಡವರಿಗೆ 5 ಲಕ್ಷ ರೂ.ವರೆಗೆ ಉಚಿತ ವಸತಿ, ಶೌಚಾಲಯಗಳು ಮತ್ತು ವಿಮಾ ರಕ್ಷಣೆಯನ್ನು ಒದಗಿಸುವ ಕಾರ್ಯವೇ ನಿಜವಾದ ರಾಮರಾಜ್ಯವಾಗಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರು ಪ್ರಯಾಗರಾಜ್‍ನಲ್ಲಿ ಕಾರ್ಮಿಕರ ಪಾದಗಳನ್ನು ತೊಳೆದರು, ಕಾಶಿಯಲ್ಲಿ ಕಾರ್ಮಿಕರ ಮೇಲೆ ಗುಲಾಬಿ ಹೂವನ್ನು ಸುರಿಸಿದರು ಮತ್ತು ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ದೇವರಿಗೆ ನಮನ ಸಲ್ಲಿಸಿದ್ದು, ಐತಿಹಾಸಿಕ ಘಟನೆಗೆ ಸಾಕ್ಷಿಯಾಗಿದೆ ಎಂದು ಹೇಳಿದರು.
ಮಥುರಾ, ವೃಂದಾವನ, ಗೋವರ್ಧನ್, ನಂದಗಾಂವ್, ಬರ್ಸಾನಾ, ಗೋಕುಲ್ ಮತ್ತು ಬಲ್ದಿಯೊಗೆ ರಾಮಮಂದಿರ ನಿರ್ಮಾಣ ಸೇರಿದಂತೆ ವಿವಿಧ ತೀರ್ಥಕ್ಷೇತ್ರಗಳ ಅಭಿವೃದ್ಧಿಗೆ ಸಮಾಜವಾದಿ ಪಕ್ಷ, ಬಹುಜನ ಸಮಾಜ ಪಕ್ಷ ಅಥವಾ ಕಾಂಗ್ರೆಸ್ ಪಕ್ಷ ವಿಶೇವಾದ ಸ್ಥಾನಮಾನ ನೀಡುತ್ತದೆಯೇ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಮರಾಠಿಗರ ಮೇಲೆ ದಾಳಿ ನಡೆಯುತ್ತಿದೆ – ಸುಳ್ಳು ಆರೋಪ ಹೊರಿಸಿದ ಉದ್ಧವ್ ಠಾಕ್ರೆ
ಕೋವಿಡ್-19 ಸಮಯದಲ್ಲಿ ಕೂಡ ಅಯೋಧ್ಯೆ ಮತ್ತು ಕಾಶಿ ವಿಶ್ವನಾಥ ಕಾರಿಡಾರ್, ಬಡವರಿಗೆ ಉಚಿತ ಪಡಿತರವನ್ನು ವಿಸ್ತರಣೆ ಹೀಗೆ ಹಲವಾರು ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿತು. ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸುವ ಮೂಲಕ ಡಾ.ಶ್ಯಾಮ ಪ್ರಸಾದ್ ಮುಖರ್ಜಿಯವರ ಒಂದು ದೇಶ, ಒಂದು ಧ್ವಜ ಮತ್ತು ಒಂದು ಸಂವಿಧಾನದ ಕನಸನ್ನು ನನಸುಗೊಳಿಸಿದ್ದಾರೆ ಎಂದರು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…