Featured

ಜನವರಿಯಿಂದ ಕರಾವಳಿ ಜಿಲ್ಲೆಗಳಲ್ಲಿ ಪಡಿತರದಲ್ಲಿ ಕುಚಲಕ್ಕಿ ಲಭ್ಯ – Vishwanews24

ಜನವರಿಯಿಂದ ಕರಾವಳಿ ಜಿಲ್ಲೆಗಳಲ್ಲಿ ಪಡಿತರದಲ್ಲಿ ಕುಚಲಕ್ಕಿ ಲಭ್ಯ

ಬೆಂಗಳೂರು: ಬೆಂಬಲ ಬೆಲೆಯಡಿ ಕುಚಲಕ್ಕಿ ಖರೀದಿಗೆ ರಾಜ್ಯ ಸರಕಾರ ತೀರ್ಮಾನಿಸಿದ್ದು, ಜನವರಿಯಿಂದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪಡಿತರದಲ್ಲಿ ಲಭ್ಯವಾಗಲಿದೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿಯ ಮೂರೂ ಜಿಲ್ಲೆಗಳ 6.20 ಲಕ್ಷ ಪಡಿತರ ಚೀಟಿದಾರರಿಗೆ ಜನವರಿಯಿಂದ ಕೆಂಪು ಕುಚಲಕ್ಕಿಯನ್ನು ವಿತರಿಸಲಾಗುವುದು. ಎರಡು ಕೆ.ಜಿ. ಸಾಮಾನ್ಯ ಅಕ್ಕಿ, ಮೂರು ಕೆ.ಜಿ. ಕುಚಲಕ್ಕಿ ನೀಡಲಾಗುತ್ತದೆ ಎಂದರು.

ಬೆಂಗಳೂರು : ದ.ಭಾರತದ ಮೊಟ್ಟ ಮೊದಲ ‘ವಂದೇ ಭಾರತ್’ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ – Vishwanews24

ಕುಚಲಕ್ಕಿಯನ್ನು ಪಡಿತರ ಮೂಲಕ ಪೂರೈಸಬೇಕೆಂದು ಮೂರೂ ಜಿಲ್ಲೆಗಳ ಜನರು ಆಗ್ರಹಿಸಿದ್ದು, ಇದಕ್ಕೆ ಈಗ ಮುಖ್ಯಮಂತ್ರಿ ಒಪ್ಪಿದ್ದಾರೆ ಎಂದರು.

ಡಿಸೆಂಬರ್‌ನಲ್ಲಿ ಕುಚಲಕ್ಕಿ ಭತ್ತ (ಜಯ, ಎಂಒ4, ಅಭಿಲಾಷಾ, ಜ್ಯೋತಿ ತಳಿ) ಬೆಂಬಲ ಬೆಲೆಯಲ್ಲಿ ಖರೀದಿಸಲಾಗುತ್ತದೆ. ಅದಕ್ಕೆ ಹೆಚ್ಚುವರಿ ಮೊತ್ತ ಕೊಡಲು ರಾಜ್ಯ ಸರಕಾರ ಸಮ್ಮತಿಸಿದೆ ಎಂದರು.

ಈಗ ಕೇಂದ್ರ ಸರಕಾರ ಭತ್ತಕ್ಕೆ ಬೆಂಬಲ ಬೆಲೆಗೆ ಪ್ರತಿ ಕ್ವಿಂಟಾಲ…ಗೆ 2,040 ರೂ. ಕೊಡುತ್ತಿದೆ. ನಾವು ಕುಚಲಕ್ಕಿ ಭತ್ತಕ್ಕೆ 500 ರೂ. ಹೆಚ್ಚುವರಿಯಾಗಿ ಸೇರಿಸಿ ಒಟ್ಟು 2,540 ರೂ. ಬೆಲೆಗೆ ಖರೀದಿಸುತ್ತೇವೆ. 13 ಲಕ್ಷ ಕ್ವಿಂಟಾಲ… ಭತ್ತ ಖರೀದಿಯ ಗುರಿ ಇದೆ. ಇದಕ್ಕೆ 132 ಕೋಟಿ ರೂ.ವೆಚ್ಚವಾಗಲಿದೆ. ಬೆಂಬಲ ಬೆಲೆ ನೀಡಿ ಖರೀದಿ ಮಾಡಿದ ಭತ್ತವನ್ನು ಸ್ಥಳೀಯವಾಗಿಯೇ ಸಂಸ್ಕರಿಸುವುದಾಗಿ ತಿಳಿಸಿದರು.

ಉಡುಪಿ: ಕರ್ತವ್ಯಲೋಪ -ಬೈಂದೂರು BEO ಮಂಜುನಾಥ್‌ ಅಮಾನತು ಮಾಡಿದ ಸರ್ಕಾರ – Vishwanews24

ಆತ್ಮರಕ್ಷಣೆ ಕಲೆ ಸಂಬಂಧ ಸಮವಸ್ತ್ರ ಖರೀದಿಗೆ ಹೆಚ್ಚುವರಿ ಹಣದ ಅಗತ್ಯ ಇದೆ. ಈಗಾಗಲೇ ಕರಾಟೆ ಕಲಿಯುವ ವಿದ್ಯಾರ್ಥಿನಿಯರಿಗೆ ಸಮವಸ್ತ್ರಕ್ಕಾಗಿ 176 ಕೋಟಿ ರೂ. ಬಾಕಿ ಇತ್ತು. ಅದನ್ನು ಪಾವತಿಸಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

10 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

12 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

12 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

13 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

13 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

13 hours ago