ಜನವರಿ ಹಾಗೂ ಮಾರ್ಚ್ ಅಂತ್ಯಕ್ಕೆ ಪಡುಬಿದ್ರಿ ಹಾಗೂ ಕುಂದಾಪುರ ಮೇಲ್ಸೇತುವೆ ಕಾಮಗಾರಿ ಪೂರ್ಣ -Vishwanews24

Featured, ಉಡುಪಿ

ಉಡುಪಿ: ಜನವರಿ ಅಂತ್ಯಕ್ಕೆ ಪಡುಬಿದ್ರಿ ಸೇತುವೆ, ಮಾರ್ಚ್‌ ಅಂತ್ಯಕ್ಕೆ ಕುಂದಾಪುರ ಸೇತುವೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಗುತ್ತಿಗೆದಾರರು ಭರವಸೆ ನೀಡಿದ್ದಾರೆ. ಕಾಮಗಾರಿ ಮುಗಿಸದಿದ್ದರೆ ಗುತ್ತಿಗೆ ಒಪ್ಪಂದವನ್ನು ರದ್ದುಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್‌ ಎಚ್ಚರಿಕೆ ನೀಡಿದರು.

ಮಂಗಳವಾರ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಚೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಸಭೆ ನಡೆಸಿ ನಿಗಧಿತ ಕಾಲಾವಧಿಯಲ್ಲಿ ಕಾಮಗಾರಿ ಮುಗಿಸುವಂತೆ ಅಂತಿಮ ಸೂಚನೆ ನೀಡಲಾಗಿದೆ. ಸೂಚನೆ ಪಾಲಿಸದಿದ್ದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.

ಶೇ 75ರಷ್ಟು ಕಾಮಗಾರಿ ಮುಗಿದರೆ ಟೋಲ್ ಸಂಗ್ರಹಿಸಬಹುದು ಎಂಬ ನಿಯಮವಿದೆ. ಆದರೆ ಬಾಕಿ ಶೇ 25ರಷ್ಟು ಕಾಮಗಾರಿಯನ್ನು ನಿರ್ಧಿಷ್ಟ ಅವಧಿಯಲ್ಲಿ ಮುಕ್ತಾಯಗೊಳಿಸದಿದ್ದರೆ ಟೋಲ್‌ ಸಂಗ್ರಹಿಸುವ ಅರ್ಹತೆಯನ್ನು ಗುತ್ತಿಗೆ ಪಡೆದ ಕಂಪೆನಿ ಕಳೆದುಕೊಳ್ಳಲಿದೆ. ಇದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಎಚ್ಚರಿಕೆ ನೀಡಿದರು.‌