ಉಡುಪಿ: ಜನವರಿ ಅಂತ್ಯಕ್ಕೆ ಪಡುಬಿದ್ರಿ ಸೇತುವೆ, ಮಾರ್ಚ್ ಅಂತ್ಯಕ್ಕೆ ಕುಂದಾಪುರ ಸೇತುವೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಗುತ್ತಿಗೆದಾರರು ಭರವಸೆ ನೀಡಿದ್ದಾರೆ. ಕಾಮಗಾರಿ ಮುಗಿಸದಿದ್ದರೆ ಗುತ್ತಿಗೆ ಒಪ್ಪಂದವನ್ನು ರದ್ದುಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದರು.
ಮಂಗಳವಾರ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಚೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಸಭೆ ನಡೆಸಿ ನಿಗಧಿತ ಕಾಲಾವಧಿಯಲ್ಲಿ ಕಾಮಗಾರಿ ಮುಗಿಸುವಂತೆ ಅಂತಿಮ ಸೂಚನೆ ನೀಡಲಾಗಿದೆ. ಸೂಚನೆ ಪಾಲಿಸದಿದ್ದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.
ಶೇ 75ರಷ್ಟು ಕಾಮಗಾರಿ ಮುಗಿದರೆ ಟೋಲ್ ಸಂಗ್ರಹಿಸಬಹುದು ಎಂಬ ನಿಯಮವಿದೆ. ಆದರೆ ಬಾಕಿ ಶೇ 25ರಷ್ಟು ಕಾಮಗಾರಿಯನ್ನು ನಿರ್ಧಿಷ್ಟ ಅವಧಿಯಲ್ಲಿ ಮುಕ್ತಾಯಗೊಳಿಸದಿದ್ದರೆ ಟೋಲ್ ಸಂಗ್ರಹಿಸುವ ಅರ್ಹತೆಯನ್ನು ಗುತ್ತಿಗೆ ಪಡೆದ ಕಂಪೆನಿ ಕಳೆದುಕೊಳ್ಳಲಿದೆ. ಇದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಎಚ್ಚರಿಕೆ ನೀಡಿದರು.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…