Featured

ಜನವರಿ 14ರಿಂದ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಮಣಿಪುರ To ಮುಂಬೈ ಭಾರತ್‌ ನ್ಯಾಯ ಯಾತ್ರೆ – vishwanews24

ಜನವರಿ 14ರಿಂದ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಮಣಿಪುರ To ಮುಂಬೈ ಭಾರತ್‌ ನ್ಯಾಯ ಯಾತ್ರೆ

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್‌ ಪಕ್ಷ ಇದೀಗ ದೇಶದ ಈಶಾನ್ಯ ಮತ್ತು ಪಶ್ಚಿಮ ರಾಜ್ಯಗಳನ್ನು ಸಂಪರ್ಕಿಸುವ ಯಾತ್ರೆ ರಾಹುಲ್‌ ಗಾಂಧಿ ಸಾರಥ್ಯದಲ್ಲಿ ನಡೆಯಲಿದೆ ಎಂದು ಕಾಂಗ್ರೆಸ್‌ ಘೋಷಿಸಿದೆ. ಜನವರಿ 14ರಿಂದ ಮಣಿಪುರದಿಂದ ಮುಂಬೈವರೆಗೆ “ಭಾರತ್‌ ನ್ಯಾಯ ಯಾತ್ರೆ ನಡೆಯಲಿದೆ.

ಮಣಿಪುರದಿಂದ ಮುಂಬೈವರೆಗಿನ ಸುಮಾರು 6,200 ಕಿಲೋ ಮೀಟರ್‌ ದೂರದ ಈ ಯಾತ್ರೆ ಜನವರಿ 14ರಿಂದ ಆರಂಭಗೊಳ್ಳಲಿದ್ದು, ಮಾರ್ಚ್‌ 20ರಂದು ಕೊನೆಗೊಳ್ಳಲಿದೆ ಎಂದು ವರದಿ ತಿಳಿಸಿದೆ.

ಕಳೆದ ವರ್ಷ ರಾಹುಲ್‌ ಗಾಂಧಿ ದಕ್ಷಿಣ ಮತ್ತು ಉತ್ತರದ ರಾಜ್ಯಗಳನ್ನು ಸಂಪರ್ಕಿಸುವ ಭಾರತ್‌ ಜೋಡೋ ಯಾತ್ರೆ ಕೈಗೊಂಡಿದ್ದು, ಇದರ ಪರಿಣಾಮ ದಕ್ಷಿಣದ ಎರಡು ರಾಜ್ಯಗಳಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಲಾಭ ತಂದುಕೊಟ್ಟಿರುವುದಾಗಿ ವರದಿ ವಿಶ್ಲೇಷಿಸಿದೆ.

ಭಾರತ್‌ ನ್ಯಾಯ ಯಾತ್ರೆಯ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್‌ ವಿರುದ್ಧ ವ್ಯಂಗ್ಯವಾಡಿರುವ ಬಿಜೆಪಿ, ಜನರು ಭಾರತ್‌ ಜೋಡೋ ಯಾತ್ರೆಯನ್ನು ತಿರಸ್ಕರಿಸಿರುವುದಾಗಿ ಟೀಕಿಸಿದೆ.

ಭಾರತ್‌ ನ್ಯಾಯ ಯಾತ್ರೆಗೆ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಅವರು ಇಂಫಾಲ್‌ ನಲ್ಲಿ ಹಸಿರು ನಿಶಾನೆ ಮೂಲಕ ಚಾಲನೆ ನೀಡಲಿದ್ದು, ರಾಹುಲ್‌ ಗಾಂಧಿ ನೇತೃತ್ವದ ಈ ಯಾತ್ರೆಯು 14 ರಾಜ್ಯಗಳ 85 ಜಿಲ್ಲೆಗಳಲ್ಲಿ ಹಾದು ಹೋಗಲಿದೆ ಎಂದು ವರದಿ ತಿಳಿಸಿದೆ.

ಕಾಂಗ್ರೆಸ್‌ ಪಕ್ಷದ ಭಾರತ್‌ ನ್ಯಾಯ ಯಾತ್ರೆಯು ಮಣಿಪುರ, ನಾಗಾಲ್ಯಾಂಡ್‌, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಬಿಹಾರ, ಒಡಿಶಾ, ಛತ್ತೀಸ್‌ ಗಢ್‌, ಉತ್ತರಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ್‌, ಗುಜರಾತ್‌ ಮತ್ತು ಮಹಾರಾಷ್ಟ್ರ ಒಳಗೊಂಡಿರುವುದಾಗಿ ತಿಳಿಸಿದೆ.

ಭಾರತ್‌ ನ್ಯಾಯ ಯಾತ್ರೆಯು ದೇಶದ ಜನರಿಗೆ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ನ್ಯಾಯವನ್ನು ಖಾತರಿಪಡಿಸುವುದಾಗಿದೆ ಎಂದು ಕಾಂಗ್ರೆಸ್‌ ಪಕ್ಷ ಹೇಳಿದೆ

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

3 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

3 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

3 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

3 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

3 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

3 days ago