ಹೆಜಮಾಡಿ : ಕರಾವಳಿ ಭಾಗದ ಮೀನುಗಾರರ ಬಹು ದಶಕಗಳ ಬೇಡಿಕೆಯಾಗಿದ್ದ ಹೆಜಮಾಡಿ ಬಂದರು ಕಾಮಗಾರಿಗೆ 180.84ಕೋಟಿ ಮಂಜೂರು ಮಾಡಿ, ಜನವರಿ 19ರಂದು ಕಾಮಗಾರಿಯ ಶಿಲಾನ್ಯಾಸ ನೆರವೇರಿಸಲು ಜಿಲ್ಲೆಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ರವರನ್ನು ಸಮಸ್ತ ಮೀನುಗಾರರ ಪರವಾಗಿ ಸ್ವಾಗತಿಸುವುದಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಶ್ರೀ ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ.
ಕೊರೋನ ಸಂದರ್ಭದಲ್ಲಿಯೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಗಡಿ ಪ್ರದೇಶವಾದ ಹೆಜಮಾಡಿ ಬಂದರಿಗೆ ೧೮೦.೮೪ ಕೋಟಿ ಮೊತ್ತವನ್ನು ಮಂಜೂರು ಮಾಡಿ ಕರಾವಳಿ
ಮೀನುಗಾರಿಕೆಯ ಅಭಿವೃದ್ಧಿ ಬಗ್ಗೆ ರಾಜ್ಯ ಹಾಗೂ ಕೇಂದ್ರ ಸರಕಾರ ತಮ್ಮ ಕಳಕಳಿ ಹಾಗೂ ಬದ್ಧತೆಯನ್ನು ಪ್ರದರ್ಶಿಸಿದೆ.
ಕರಾವಳಿ ಕರ್ನಾಟಕದ ಆರ್ಥಿಕತೆಯಲ್ಲಿ ಮಹತ್ವದ ಪಾತ್ರವಹಿಸಿರುವ ಮೀನುಗಾರಿಕೆಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಈ ಅವಳಿ ಜಿಲ್ಲೆಗಳ ಉತ್ಪನ್ನವಾಗಿ ಸಾಗರೋತ್ಪನ್ನವನ್ನು ಆಯ್ಕೆ ಮಾಡುವ ಮೂಲಕ ಮೀನುಗಾರಿಕೆಯ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಹೆಜಮಾಡಿ ಬಂದರು ಅಭಿವೃದ್ಧಿಯ ಮೂಲಕ ಸರಕಾರ ಅವಿಭಜಿತ ದಕ್ಷಿಣ
ಕನ್ನಡ ಜಿಲ್ಲೆಗೆ ಮೀನುಗಾರಿಕೆ ಅಭಿವೃದ್ಧಿಗೆ ಸರಕಾರ ವಿಶೇಷ ಪ್ರೋತ್ಸಾಹ ನೀಡಿದಂತಾಗಿದೆ.
ಈ ಕಾಮಗಾರಿಯ ಮಂಜೂರಾತಿಗೆ ವಿಶೇಷ ಆಸಕ್ತಿ ವಹಿಸಿದ ಪ್ರಧಾನಿ ಶ್ರೀ ನರೇಂದ್ರ ಮೋದಿ, ಕೇಂದ್ರ ಬಂದರು ಸಚಿವರಾದ ಶ್ರೀ ನಿತಿನ್ ಗಡ್ಕರಿ, ಕೇಂದ್ರ ಮೀನುಗಾರಿಕಾ ಸಚಿವರಾದ ಶ್ರೀ ಗಿರಿರಾಜ್ ಸಿಂಗ್, ಮುಖ್ಯ ಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ, ಮೀನುಗಾರಿಕೆ ಮತ್ತು ಬಂದರು ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಸವರಾಜ ಬೊಮ್ಮಾಯಿ, ಸಂಸದರಾದಶ್ರೀ ನಳಿನ್ ಕುಮಾರ್ ಕಟೀಲು, ಶೋಭಾ ಕರಂದ್ಲಾಜೆ, ಮೀನುಗಾರ ಮುಖಂಡರಾದ ನಾಡೋಜ ಡಾ| ಜಿ. ಶಂಕರ್, ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಶ್ರೀ ಜಯ ಸಿ ಕೋಟ್ಯಾನ್ ಹಾಗೂ ಕರಾವಳಿ ಭಾಗದ ಎಲ್ಲಾ ಶಾಸಕರಿಗೆ ಸಮಸ್ತ ಮೀನುಗಾರರ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…