Featured

ಜನವರಿ 19 ರಂದು ಹೆಜಮಾಡಿ ಬಂದರು ಕಾಮಗಾರಿಗೆ ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ಶಿಲಾನ್ಯಾಸ : ಸಮಸ್ತ ಮೀನುಗಾರರ ಪರವಾಗಿ ಸ್ವಾಗತ ಯಶ್‌ಪಾಲ್ ಸುವರ್ಣ  -Vishwanews24

ಜನವರಿ 19 ರಂದು ಹೆಜಮಾಡಿ ಬಂದರು ಕಾಮಗಾರಿಗೆ ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ಶಿಲಾನ್ಯಾಸ : ಸಮಸ್ತ ಮೀನುಗಾರರ ಪರವಾಗಿ ಸ್ವಾಗತ ಯಶ್‌ಪಾಲ್ ಸುವರ್ಣ  -Vishwanews24

ಹೆಜಮಾಡಿ : ಕರಾವಳಿ ಭಾಗದ ಮೀನುಗಾರರ ಬಹು ದಶಕಗಳ ಬೇಡಿಕೆಯಾಗಿದ್ದ ಹೆಜಮಾಡಿ ಬಂದರು ಕಾಮಗಾರಿಗೆ 180.84ಕೋಟಿ ಮಂಜೂರು ಮಾಡಿ, ಜನವರಿ 19ರಂದು ಕಾಮಗಾರಿಯ ಶಿಲಾನ್ಯಾಸ ನೆರವೇರಿಸಲು ಜಿಲ್ಲೆಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ರವರನ್ನು ಸಮಸ್ತ ಮೀನುಗಾರರ ಪರವಾಗಿ ಸ್ವಾಗತಿಸುವುದಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಶ್ರೀ  ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ.

ಕೊರೋನ ಸಂದರ್ಭದಲ್ಲಿಯೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಗಡಿ ಪ್ರದೇಶವಾದ ಹೆಜಮಾಡಿ ಬಂದರಿಗೆ ೧೮೦.೮೪ ಕೋಟಿ ಮೊತ್ತವನ್ನು ಮಂಜೂರು ಮಾಡಿ ಕರಾವಳಿ
ಮೀನುಗಾರಿಕೆಯ ಅಭಿವೃದ್ಧಿ ಬಗ್ಗೆ ರಾಜ್ಯ ಹಾಗೂ ಕೇಂದ್ರ ಸರಕಾರ ತಮ್ಮ ಕಳಕಳಿ ಹಾಗೂ ಬದ್ಧತೆಯನ್ನು ಪ್ರದರ್ಶಿಸಿದೆ.

ಕರಾವಳಿ ಕರ್ನಾಟಕದ ಆರ್ಥಿಕತೆಯಲ್ಲಿ ಮಹತ್ವದ ಪಾತ್ರವಹಿಸಿರುವ ಮೀನುಗಾರಿಕೆಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಈ ಅವಳಿ ಜಿಲ್ಲೆಗಳ ಉತ್ಪನ್ನವಾಗಿ ಸಾಗರೋತ್ಪನ್ನವನ್ನು ಆಯ್ಕೆ ಮಾಡುವ ಮೂಲಕ ಮೀನುಗಾರಿಕೆಯ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಹೆಜಮಾಡಿ ಬಂದರು ಅಭಿವೃದ್ಧಿಯ ಮೂಲಕ ಸರಕಾರ ಅವಿಭಜಿತ ದಕ್ಷಿಣ
ಕನ್ನಡ ಜಿಲ್ಲೆಗೆ ಮೀನುಗಾರಿಕೆ ಅಭಿವೃದ್ಧಿಗೆ ಸರಕಾರ ವಿಶೇಷ ಪ್ರೋತ್ಸಾಹ ನೀಡಿದಂತಾಗಿದೆ.

ಈ ಕಾಮಗಾರಿಯ ಮಂಜೂರಾತಿಗೆ ವಿಶೇಷ ಆಸಕ್ತಿ ವಹಿಸಿದ ಪ್ರಧಾನಿ ಶ್ರೀ ನರೇಂದ್ರ ಮೋದಿ, ಕೇಂದ್ರ ಬಂದರು ಸಚಿವರಾದ ಶ್ರೀ ನಿತಿನ್ ಗಡ್ಕರಿ, ಕೇಂದ್ರ ಮೀನುಗಾರಿಕಾ ಸಚಿವರಾದ ಶ್ರೀ ಗಿರಿರಾಜ್ ಸಿಂಗ್, ಮುಖ್ಯ ಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ, ಮೀನುಗಾರಿಕೆ ಮತ್ತು ಬಂದರು ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಸವರಾಜ ಬೊಮ್ಮಾಯಿ, ಸಂಸದರಾದಶ್ರೀ ನಳಿನ್ ಕುಮಾರ್ ಕಟೀಲು, ಶೋಭಾ ಕರಂದ್ಲಾಜೆ, ಮೀನುಗಾರ ಮುಖಂಡರಾದ ನಾಡೋಜ ಡಾ| ಜಿ. ಶಂಕರ್, ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಶ್ರೀ ಜಯ ಸಿ ಕೋಟ್ಯಾನ್ ಹಾಗೂ ಕರಾವಳಿ ಭಾಗದ ಎಲ್ಲಾ ಶಾಸಕರಿಗೆ ಸಮಸ್ತ ಮೀನುಗಾರರ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago