ಮಂಗಳೂರು : ಭಾರತೀಯರ ಶತಮಾನದ ಕನಸು ನನಸಾಗುತ್ತಿದೆ, ಸುದೀರ್ಘ ಹೋರಾಟದ ಬಳಿಕ ಆಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣವಾಗುತ್ತಿದೆ. ಮಕರಸಂಕ್ರಾಂತಿ ಮುಗಿಯುತ್ತಿದ್ದಂತೆ ರಾಮದೇವರ ಪ್ರಾಣ ಪ್ರತಿಷ್ಠೆಯಾಗಲಿದೆ ಎಂದು ಉಡುಪಿ ಪೇಜಾವರ ಮಠಾಧೀಶರಾದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಸ್ವಾಮೀಜಿ ಜನವರಿ 22ರ ಅಭಿಜಿತ್ ಮುಹೂರ್ತದಲ್ಲಿ ರಾಮದೇವರ ಪ್ರಾಣ ಪ್ರತಿಷ್ಠೆಯಾಗಲಿದ್ದು ಪ್ರಧಾನಿ ಮೋದಿ ಮಂದಿರವನ್ನು ಲೋಕಾರ್ಪಣೆ ಮಾಡಲಿದ್ದಾರೆ ಆದ್ರೆ ಆದಿನ ಎಲ್ಲರಿಗೂ ಬರಲು ಅವಕಾಶ ಇರೋದಿಲ್ಲ. ಹೀಗಾಗಿ ಎಲ್ಲರೂ ಊರ ರಾಮಮಂದಿರದಲ್ಲಿ ಬೃಹತ್ ಪರದೆಯ ಮೂಲಕ ಕಾರ್ಯಕ್ರಮ ವೀಕ್ಷಣೆ ಮಾಡಬೇಕು. ಮತ್ತು ಮಂದಿರದಲ್ಲಿ ಪೂಜೆ ಭಜನೆ ಪ್ರಸಾದ ವಿತರಣೆ ಮಾಡಬೇಕು. ಪ್ರಾಣ ಪ್ರತಿಷ್ಠೆ ಆದ ಬಳಿಕ ಮಂಡಲ ಉತ್ಸವ ನಡೆಯುತ್ತದೆ ಬಳಿಕ ನಿತ್ಯ ಅಭಿಷೇಕ ಸೇರಿದಂತೆ ವಿವಿಧ ಪೂಜೆ ಪುನಸ್ಕಾರಗಳು ನಡೆಯಲಿದೆ. ಜನವರಿ 23ರಿಂದ ಮಾರ್ಚ್ 10ರವರಗೆ ಉತ್ಸವ ನಡೆಯುತ್ತದೆ. ಆ ಸಂಧರ್ಭದಲ್ಲಿ ಎಲ್ಲರೂ ಬಂದು ಪೂಜೆ ಸಲ್ಲಿಸಬಹುದಾಗಿದ್ದು ರಾಮ ಮಂದಿರದಲ್ಲಿ ಸೇವಾ ರೂಪದ ಪಟ್ಟಿ ಇರೋದಿಲ್ಲ ವೆಂದ ಸ್ವಾಮೀಜಿ ರಾಮಭಕ್ತಿ ಬೇರೆ ಅಲ್ಲ,ದೇಶ ಭಕ್ತಿ ಬೇರೆ ಅಲ್ಲ, ರಾಮ ಸೇವೆ ಮಾಡುವ ಇಚ್ಛೆಯವರು ದೇಶಸೇವೆ ಮಾಡೋಣ ಎಂದು ಕರೆ ನೀಡಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…