ಬೆಂಗಳೂರು: ಜನವರಿ 24 ಅಂದರೆ ನಾಳೆ ರಾಜ್ಯಾದ್ಯಂತ ಕೇಬಲ್ ಟಿವಿ ಸ್ಥಗಿತಗೊಳಿಸಲು ಕೇಬಲ್ ಆಪರೇಟರ್‌ಗಳು ನಿರ್ಧರಿಸಿದ್ದಾರೆ. ಟ್ರಾಯ್ ಹೊಸ ದರ ನಿಗದಿ ನಿಯಮವನ್ನು ಖಂಡಿಸಿ ರಾಜ್ಯ ಕೇಬಲ್ ಆಪರೇಟರ್ಸ್ ಅಸೋಸಿಯೇಷನ್ ಈ ನಿರ್ಧಾರ ಕೈಗೊಂಡಿದೆ.
ಕೇಬಲ್ ಆಪರೇಟರ್ಸ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಪ್ಯಾಟ್ರಿಕ್ ರಾಜು ಮಾತನಾಡಿ, ಗ್ರಾಹಕರು ಮತ್ತು ಕೇಬಲ್ ಆಪರೇಟರ್ ಗಳ ಹಿತದೃಷ್ಟಿಯಿಂದ ದಕ್ಷಿಣ ಭಾರತದಾದ್ಯಂತ ಕೇಬಲ್ ಟಿವಿ ಬಂದ್ ಮಾಡಲು ತೀರ್ಮಾನಿಸಲಾಗಿದೆ. ಹಾಗಾಗಿ ಕರ್ನಾಟಕದಲ್ಲೂ ಕೇಬಲ್ ಟಿವಿಗಳು ಬಂದ್ ಆಗಲಿವೆ ಎಂದು ತಿಳಿಸಿದರು.
ದಕ್ಷಿಣ ಭಾರತ ಮಾತ್ರವಲ್ಲದೇ ಉತ್ತರ ಭಾರತದ ಹಲವಾರು ರಾಜ್ಯಗಳಲ್ಲಿ ಜನವರಿ 24 ರಂದು ಕೇಬಲ್ ಟಿವಿ ಆಪರೇಟಿಂಗ್ ಸಿಸ್ಟಂ ಸ್ಥಗಿತಗೊಳಿಸಲಾಗುತ್ತಿದೆ. ಈ ಬಗ್ಗೆ ಈಗಾಗಲೇ ಗ್ರಾಹಕರಿಗೆ ಮಾಧ್ಯಮಗಳ ಮೂಲಕ ಮಾಹಿತಿ ನೀಡಲಾಗಿದೆ. ಒಂದು ದಿನದ ಮಟ್ಟಿಗೆ ಸಾಂಕೇತಿಕವಾಗಿ ಟಿವಿ ಚಾನಲ್ ಬಂದ್ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಕೂಡಲೇ ಈ ನೀತಿಯನ್ನು ಹಿಂಪಡೆಯಬೇಕು ಇಲ್ಲವಾದರೆ ಟಿವಿ ಆಪರೇಟರ್ ಗಳು ಉಗ್ರ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಹೇಳಿದ್ದಾರೆ.
ಹಾಗಾಗಿ ರಾಜ್ಯ ಕೇಬಲ್ ಆಪರೇಟರ್ಸ್ ಅಸೋಸಿಯೇಷನ್ ನಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಜನವರಿ 24 ರಂದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯ ವರೆಗೆ ಕೇಬಲ್ ಸ್ಥಗಿತಗೊಳಿಸಲು ಒಮ್ಮತದ ತೀರ್ಮಾನ ಕೈಗೊಂಡಿದ್ದೇವೆ ಎಂದು ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…