ಮಂಗಳೂರು:ಕರಾವಳಿ ಭಾಗದ ಜಾನಪದ ಕ್ರೀಡೆಯಾದ ಕಂಬಳವನ್ನು ಈ ಬಾರಿ ಕೋವಿಡ್ ಮಾರ್ಗಸೂಚಿಗಳನ್ನು ಚಾಚು ತಪ್ಪದೆ ಅನುಸರಿಸುವುದರೂಂದಿಗೆ ಆಯೋಜಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಸ್ತುತ ಸಾಲಿನ ಕಂಬಳ ಕ್ರೀಡೆಯನ್ನು ಜಿಲ್ಲೆಯಲ್ಲಿ ಆಯೋಜಿಸುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಂಬಳಕ್ಕೆ ನೂರಾರು ವರ್ಷದ ಇತಿಹಾಸವಿದ್ದು ರಾಜಮಹಾರಾಜರುಗಳು ಪ್ರೋತ್ಸಾಹ ನೀಡಿದ್ದಾರೆ ಎಂದ ಅವರು ಈ ಬಾರಿ ಕೋವಿಡ್ ಸೋಂಕಿನಿಂದಾಗಿ ರೈತರು ಜನವರಿ ಅಂತ್ಯವಾದರೂ ಪ್ರಾರಂಭಿಸಿಲ್ಲ. ಆಯೋಜಕರು ಕೋವಿಡ್ ಮಾರ್ಗಸೂಚಿಗಳನ್ನು ಚಾಚೂತಪ್ಪದೆ ಪಾಲಿಸುವುದರೊಂದಿಗೆ ಜನವರಿ 30 ರಿಂದ ಜಿಲ್ಲೆಯಲ್ಲಿ 10 ಕಂಬಳ ಕಾರ್ಯಕ್ರಮವನ್ನು ಏರ್ಪಡಿಸಬಹುದಾಗಿದೆ ಎಂದರು .
ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ .ವಿ ಮಾತನಾಡಿ, ಕೋವಿಡ್ ಸಂದರ್ಭವಾದ ಈ ದಿನಗಳಲ್ಲಿ ಅತಿ ಹೆಚ್ಚು ಜಾಗ್ರತೆ ವಹಿಸಬೇಕು, ಹೆಚ್ಚು ಜನರು ಸೇರಿದಂತೆ ಕ್ರಮವಹಿಸಬೇಕು. ರಾತ್ರಿ ಹತ್ತು ಗಂಟೆಯ ಒಳಗಾಗಿ ಕಂಬಳ ಕಾರ್ಯಕ್ರಮವನ್ನು ಪೂರ್ಣಗೊಳಿಸಬೇಕು. ಕಾರ್ಯಕ್ರಮಕ್ಕೆ ವಯಸ್ಸಾದವರು ಮತ್ತು ಮಕ್ಕಳು ಭಾಗವಹಿಸದಂತೆ ಎಚ್ಚರವಹಿಸಬೇಕು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ಸೂಚಿಸಿದರು
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…