ಜನವರಿ 31 ರಂದು ಉಡುಪಿ ನಗರ ಸಾರಿಗೆ ಬಸ್ ನಿಲ್ದಾಣ ಉದ್ಘಾಟನೆ -Vishwanews24
ಜನವರಿ 31 ರಂದು ಉಡುಪಿ ನಗರ ಸಾರಿಗೆ ಬಸ್ ನಿಲ್ದಾಣ ಉದ್ಘಾಟನೆ -Vishwanews24
ಉಡುಪಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮಂಗಳೂರು ವಿಭಾಗ, ನಗರ ಭೂ ಸಾರಿಗೆ ನಿರ್ದೇಶನಾಲಯದ ಸಹಯೋಗದೊಂದಿಗೆ ನಿರ್ಮಿಸಿರುವ ಉಡುಪಿ ನಗರ ಸಾರಿಗೆ ಬಸ್ ನಿಲ್ದಾಣದ ಉದ್ಘಾಟನಾ ಸಮಾರಂಭವು ಜನವರಿ 31 ರಂದು ಬೆಳಗ್ಗೆ 10.30 ಕ್ಕೆ ಉಡುಪಿ ನಗರ ಸಾರಿಗೆ ಬಸ್ ನಿಲ್ದಾಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸಂಗಪ್ಪ ಸವದಿ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾಟಿಪಳ್ಳ ಯುವಕನಿಗೆ ಚೂರಿ ಇರಿತ ಪ್ರಕರಣ : ಮೂವರು ಆರೋಪಿಗಳ ಬಂಧನ -Vishwanews24
ವಿಧಾನ ಪರಿಷತ್ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ, ಗೃಹ, ಕಾನೂನು ಮತ್ತು ಸಂಸದೀಯ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ, ಮುಜರಾಯಿ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕ.ರಾ.ರ.ಸಾ.ನಿಗಮದ ಅಧ್ಯಕ್ಷ ಎಂ.ಚಂದ್ರಪ್ಪ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
