ಬೆಂಗಳೂರು,: ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ ಹಿನ್ನಲೆ ರಾಜ್ಯಸರಕಾರ ನಿರ್ಬಂಧಗಳನ್ನು ಸಡಿಲಗೊಳಿಸಿದ್ದು, ರಾಜ್ಯಾದ್ಯಂತ ಜನವರಿ 31 ರಿಂದ ನೈಟ್ ಕರ್ಪ್ಯೂ ರದ್ದು ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಇನ್ನು ಮುಂದೆ ನೈಟ್ ಕರ್ಪ್ಯೂ ಇರಲ್ಲ, ಪಬ್ ಮತ್ತು ರೆಸ್ಟೋರೆಂಟ್, ಹೋಟೆಲ್ಗಳಿಗೆ ಶೇ. 100 ರಷ್ಟು ಅವಕಾಶ ನೀಡಲಾಗಿದೆ ಆದರೆ ಸಿನಿಮಾ ಥಿಯೇಟರ್, ಈಜು ಕೊಳಗಳಿಗೆ ಶೇ. 50 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಹೇಳಿದರು.
ಮಸೀದಿ, ಚರ್ಚ್,ದೇವಾಲಯಗಳಲ್ಲಿ ಎಲ್ಲ ಧಾರ್ಮಿಕ ಸೇವೆಗಳಿಗೆ ಮುಕ್ತ ಅವಕಾಶವಿದೆ. ಆದರೆ ಜಾತ್ರೆ, ಮೆರವಣಿಗೆ, ಧರಣಿ, ಪ್ರತಿಭಟನೆ, ಧಾರ್ಮಿಕ ಉತ್ಸವಗಳಿಗೆ ನಿರ್ಬಂಧ ಮುಂದುವರಿಸಲಾಗಿದ್ದು, ಮದುವೆಗಳಿಗೆ ಒಳಾಂಗಣದಲ್ಲಿ 200 ಜನರಿಗೆ, ಹೊರಾಂಗಣದಲ್ಲಿ 300 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದಿದ್ದಾರೆ.
ಇನ್ನು ಪ್ರವಾಸಿತಾಣಗಳ ಭೇಟಿಗೆ ಯಾವುದೇ ನಿರ್ಬಂಧ ವಿಧಿಸಿಲ್ಲ, ರಾಜ್ಯದ ಪ್ರವಾಸಿತಾಣಗಳು ಪ್ರವಾಸಿಗರಿಗೆ ಮುಕ್ತವಾಗಿರಲಿವೆ. ಸಫಾರಿ ಸೇರಿದಂತೆ ಎಲ್ಲಾ ಚಟುವಟಿಕೆಗೆ ಅವಕಾಶ ಇರಲಿದ್ದು, ಕೊವಿಡ್ ನಿಯಮ ಪಾಲಿಸಿ ಭೇಟಿ ನೀಡಬಹುದು ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…