Featured

ಜನವರಿ 31 ರಿಂದ ರಾಜ್ಯಾದ್ಯಂತ ನೈಟ್ ಕರ್ಪ್ಯೂ ರದ್ದು : ಆರ್.ಅಶೋಕ್ – Vishwanews24

ಜನವರಿ 31 ರಿಂದ ರಾಜ್ಯಾದ್ಯಂತ ನೈಟ್ ಕರ್ಪ್ಯೂ ರದ್ದು

ಮಸೀದಿ, ಚರ್ಚ್,ದೇವಾಲಯಗಳಲ್ಲಿ ಎಲ್ಲ ಧಾರ್ಮಿಕ ಸೇವೆಗಳಿಗೆ ಮುಕ್ತ ಅವಕಾಶ

ಸಿನಿಮಾ ಥಿಯೇಟರ್, ಈಜು ಕೊಳ​ಗಳಿಗೆ ಶೇ. 50 ಜನರಿಗೆ ಮಾತ್ರ ಅವಕಾಶ..

ಮದುವೆಗಳಿಗೆ ಒಳಾಂಗಣದಲ್ಲಿ 200 ಜನರಿಗೆ, ಹೊರಾಂಗಣದಲ್ಲಿ 300 ಜನರಿಗೆ ಮಾತ್ರ ಅವಕಾಶ..

ಜಾತ್ರೆ, ಮೆರವಣಿಗೆ, ಧರಣಿ, ಪ್ರತಿಭಟನೆ, ಧಾರ್ಮಿಕ ಉತ್ಸವಗಳಿಗೆ ನಿರ್ಬಂಧ ಮುಂದುವರಿಕೆ

ಬೆಂಗಳೂರು,: ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ ಹಿನ್ನಲೆ ರಾಜ್ಯಸರಕಾರ ನಿರ್ಬಂಧಗಳನ್ನು ಸಡಿಲಗೊಳಿಸಿದ್ದು, ರಾಜ್ಯಾದ್ಯಂತ ಜನವರಿ 31 ರಿಂದ ನೈಟ್ ಕರ್ಪ್ಯೂ ರದ್ದು ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಇನ್ನು ಮುಂದೆ ನೈಟ್ ಕರ್ಪ್ಯೂ ಇರಲ್ಲ, ಪಬ್ ಮತ್ತು ರೆಸ್ಟೋರೆಂಟ್, ಹೋಟೆಲ್​ಗಳಿಗೆ ಶೇ. 100 ರಷ್ಟು ಅವಕಾಶ ನೀಡಲಾಗಿದೆ ಆದರೆ ಸಿನಿಮಾ ಥಿಯೇಟರ್, ಈಜು ಕೊಳ​ಗಳಿಗೆ ಶೇ. 50 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಹೇಳಿದರು.

ಮಸೀದಿ, ಚರ್ಚ್,ದೇವಾಲಯಗಳಲ್ಲಿ ಎಲ್ಲ ಧಾರ್ಮಿಕ ಸೇವೆಗಳಿಗೆ ಮುಕ್ತ ಅವಕಾಶವಿದೆ. ಆದರೆ ಜಾತ್ರೆ, ಮೆರವಣಿಗೆ, ಧರಣಿ, ಪ್ರತಿಭಟನೆ, ಧಾರ್ಮಿಕ ಉತ್ಸವಗಳಿಗೆ ನಿರ್ಬಂಧ ಮುಂದುವರಿಸಲಾಗಿದ್ದು, ಮದುವೆಗಳಿಗೆ ಒಳಾಂಗಣದಲ್ಲಿ 200 ಜನರಿಗೆ, ಹೊರಾಂಗಣದಲ್ಲಿ 300 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದಿದ್ದಾರೆ.

ಇನ್ನು ಪ್ರವಾಸಿತಾಣಗಳ ಭೇಟಿಗೆ ಯಾವುದೇ ನಿರ್ಬಂಧ ವಿಧಿಸಿಲ್ಲ, ರಾಜ್ಯದ ಪ್ರವಾಸಿತಾಣಗಳು ಪ್ರವಾಸಿಗರಿಗೆ ಮುಕ್ತವಾಗಿರಲಿವೆ. ಸಫಾರಿ ಸೇರಿದಂತೆ ಎಲ್ಲಾ ಚಟುವಟಿಕೆಗೆ ಅವಕಾಶ ಇರಲಿದ್ದು, ಕೊವಿಡ್​ ನಿಯಮ ಪಾಲಿಸಿ ಭೇಟಿ ನೀಡಬಹುದು ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್​​ ಹೇಳಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

4 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

5 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

6 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

6 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

6 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

6 hours ago