ಜನವಸತಿ ಪ್ರದೇಶಕ್ಕೆ ನುಗ್ಗಿದ ಸಮುದ್ರದ ನೀರು ; ಎಂಆರ್‌ಪಿಎಲ್ ನ ಅಧಿಕಾರಿಗಳ ನಿರ್ಲಕ್ಷ್ಯ ; ಸ್ಥಾವರದ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕೆಂದು ಸ್ಥಳೀಯರ ಒತ್ತಾಯ -Vishwanews24

ಜನವಸತಿ ಪ್ರದೇಶಕ್ಕೆ ನುಗ್ಗಿದ ಸಮುದ್ರದ ನೀರು ;

ಎಂಆರ್‌ಪಿಎಲ್ ನ ಅಧಿಕಾರಿಗಳ ನಿರ್ಲಕ್ಷ್ಯ ;

ಸ್ಥಾವರದ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕೆಂದು ಸ್ಥಳೀಯರ ಒತ್ತಾಯ -Vishwanews24

ಮಂಗಳೂರು: ನಗರದ ಪಣಂಬೂರು ಸಮೀಪದ ತಣ್ಣೀರುಬಾವಿ ಎಂಬಲ್ಲಿ ಸಮುದ್ರದ ನೀರು ದಡಕ್ಕೆ ನುಗ್ಗಿದ್ದು ಸ್ಥಳೀಯರನ್ನು ಆತಂಕಕ್ಕೀಡು ಮಾಡಿದೆ.

ಎಂಆರ್‌ಪಿಎಲ್ ಪೆಟ್ರೋಲಿಯಂ ಕಂಪನಿಗೆ ಕಡಲಿನ ಉಪ್ಪು ನೀರನ್ನು ಸಿಹಿ ನೀರನ್ನಾಗಿಸುವ ಘಟಕ ಈ ಪ್ರದೇಶದಲ್ಲಿ ನಿರ್ಮಾಣವಾಗುತ್ತಿದೆ. ಹೀಗಾಗಿ ಸಮುದ್ರದ ನೀರನ್ನು ಪೈಪ್ ಮೂಲಕ ಸ್ಥಾವರಕ್ಕೆ ತರುವ ಕಾಮಗಾರಿ ನಡೆಯುತ್ತಿದ್ದು, ಪೈಪ್ ಅಳವಡಿಸಲು ಸಮುದ್ರ ತೀರದ ಮರಳನ್ನು ತೆಗೆಯಲಾಗಿದೆ.

ಇದೀಗ ಕಡಲಿನ ಅಬ್ಬರ ಹೆಚ್ಚಾಗಿದ್ದರಿಂದ ಸಮುದ್ರದ ನೀರು ಮರಳು ತೆಗೆದ ಪ್ರದೇಶದಿಂದ ಜನ ವಸತಿ ಸ್ಥಳಕ್ಕೆ ನುಗ್ಗಿ ಬಂದಿದೆ.ಸಮುದ್ರದ ಅಲೆಗಳ ಅಬ್ಬರ ಹೆಚ್ಚಾದರೆ ಇನ್ನೂ ತೊಂದರೆಗಳಾಗಬಹುದು ಅನ್ನೋ ಹಿನ್ನೆಲೆಯಲ್ಲಿ ಸ್ಥಳೀಯ 15 ಕುಟುಂಬಗಳನ್ನು ಜಿಲ್ಲಾಡಳಿತ ಸ್ಥಳಾಂತರಿಸಿದೆ. ಎಂಆರ್‌ಪಿಎಲ್ ನ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಈ ಘಟನೆ ನಡೆದಿದೆ. ಹೀಗಾಗಿ ಇಲ್ಲಿ ಸ್ಥಾವರದ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಮಂಗಳೂರು ತಹಶೀಲ್ದಾರ್, ಶಾಸಕ ಡಾ.ವೈ ಭರತ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

22 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

22 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago