Featured

ಜನವಿರೋಧಿ ಕಾಂಗ್ರೆಸ್ ಸರಕಾರ ಬುಡಸಮೇತ ಕಿತ್ತು ಹಾಕುವ ಸಂಕಲ್ಪ :  ವಿಜಯೇಂದ್ರ – vishwanews24

ಜನವಿರೋಧಿ ಕಾಂಗ್ರೆಸ್ ಸರಕಾರ ಬುಡಸಮೇತ ಕಿತ್ತು ಹಾಕುವ ಸಂಕಲ್ಪ :  ವಿಜಯೇಂದ್ರ

ಹಾಸನ :ಜನವಿರೋಧಿ, ಬಡವರ ವಿರೋಧಿ, ರೈತ ವಿರೋಧಿ ಕಾಂಗ್ರೆಸ್ ಸರಕಾರವನ್ನು ಬುಡಸಮೇತ ಕಿತ್ತು ಹಾಕುವ ಸಂಕಲ್ಪ ಮಾಡಿ ಮೈಸೂರು, ಮಂಡ್ಯದ ಮೂಲಕ ಜನಾಕ್ರೋಶ ಯಾತ್ರೆಯು ಹಾಸನಕ್ಕೆ ತಲುಪಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ ‘ಜನಾಕ್ರೋಶ ಯಾತ್ರೆ’ಯು ಹಾಸನದ ಹಳೇ ಜಿಲ್ಲಾಧಿಕಾರಿ ಕಚೇರಿಯಿಂದ ಪ್ರಾರಂಭಗೊಂಡಿತು. ನಂತರ ಎನ್.ಆರ್ ವೃತ್ತದ ಮಾರ್ಗವಾಗಿ ಮಹಾವೀರ ವೃತ್ತದ ಬಳಿ ಬಹಿರಂಗ ಪ್ರತಿಭಟನಾ ಸಮಾವೇಶ ನಡೆಸಲಾಯಿತು. ‘ಈ ಜನಾಕ್ರೋಶ ಯಾತ್ರೆಗೆ ವರುಣದೇವನೂ ಬಿಜೆಪಿಯವರಿಗೆ ಜಯವಾಗಲಿ ಎಂದು ಆಶೀರ್ವಾದ ಮಾಡಿದ್ದಾರೆ’ ಎಂದು ವಿಜಯೇಂದ್ರ ಅವರು ವಿಶ್ಲೇಷಿಸಿದರು.

ಅಭಿವೃದ್ಧಿ ಮಾಡುತ್ತೇವೆ; ಜನಪರ ಸರಕಾರ ಕೊಡುವುದಾಗಿ ತಿಳಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ಸಿನ ಸರಕಾರ ಬಂದಾಗಿನಿಂದ 50 ಕ್ಕೂ ಹೆಚ್ಚು ಜನಸಾಮಾನ್ಯರು ಬಳಸುವ ಅಗತ್ಯ ವಸ್ತುಗಳ ಬೆಲೆಯನ್ನು ಏರಿಸಿದ್ದಾರೆ ಎಂದು ಟೀಕಿಸಿದರು.

ಈ ಸರಕಾರ ಬೀಳಿಸಲು ಕಾಂಗ್ರೆಸ್ ಶಾಸಕರೇ ಸಾಕು..ಸರಕಾರ ಮನಬಂದಂತೆ- ಜನವಿರೋಧಿಯಾಗಿ ವರ್ತಿಸುತ್ತಿದೆ. ಈ ಸರಕಾರದ ಕಿವಿ ಹಿಂಡುವ ಕಾರ್ಯವನ್ನು ವಿಪಕ್ಷದ ನೆಲೆಯಲ್ಲಿ ಮಾಡುತ್ತಿದ್ದೇವೆ ಎಂದು ವಿಜಯೇಂದ್ರ ಅವರು ವಿವರಿಸಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

22 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago