Featured

ಜನಸಂಖ್ಯೆ ನಿಯಂತ್ರಣಕ್ಕೆ ಕೇವಲ ಕಾನೂನು ರೂಪಿಸುವುದರಿಂದ ಯಾವ ಪ್ರಯೋಜನವೂ ಇಲ್ಲ : ನಿತೀಶ್ ಕುಮಾರ್ – Vishwanews24

ಜನಸಂಖ್ಯೆ ನಿಯಂತ್ರಣಕ್ಕೆ ಕೇವಲ ಕಾನೂನು ರೂಪಿಸುವುದರಿಂದ ಯಾವ ಪ್ರಯೋಜನವೂ ಇಲ್ಲ : ನಿತೀಶ್ ಕುಮಾರ್ – Vishwanews24

2040ರ ವೇಳೆಗೆ ದೇಶದಲ್ಲಿ ಜನನ ಪ್ರಮಾಣ ಇಳಿಮುಖವಾಗಲಿದೆ..

ಈ ಗುರಿಯನ್ನು ತಲುಪಬೇಕಾದರೆ ಮಹಿಳೆಯರಿಗೆ ಸೂಕ್ತ ಶಿಕ್ಷಣ ನೀಡಿ ಅರಿವು ಮೂಡಿಸುವುದು ಅಗತ್ಯ..

ಪಾಟ್ನಾ, : ”ಜನಸಂಖ್ಯೆ ನಿಯಂತ್ರಣಕ್ಕೆ ಕೇವಲ ಕಾನೂನು ರೂಪಿಸುವುದರಿಂದ ಯಾವ ಪ್ರಯೋಜನವೂ ಇಲ್ಲ; ಈ ಗುರಿಯನ್ನು ತಲುಪಬೇಕಾದರೆ ಮಹಿಳೆಯರಿಗೆ ಸೂಕ್ತ ಶಿಕ್ಷಣ ನೀಡಿ ಅರಿವು ಮೂಡಿಸುವುದು ಅಗತ್ಯ” ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರತಿಪಾದಿಸಿದ್ದಾರೆ.

‘ಜನತಾ ಕೀ ದರ್ಬಾರ್ ಮೇ ಮುಖ್ಯಮಂತ್ರಿ’ ಕಾರ್ಯಕ್ರಮದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ರಾಜ್ಯಗಳು ಏನು ಮಾಡುತ್ತಿವೆ ಎಂಬ ಬಗ್ಗೆ ನಾನು ತಲೆಕೆಡಿಸಿಕೊಂಡಿಲ್ಲ. “ಈ ವಿಚಾರದಲ್ಲಿ ನನ್ನ ನಿಲುವು ಸ್ಪಷ್ಟ. ಬಹುಶಃ ಇದು ಬೇರೆ ರಾಜ್ಯಗಳಿಂತ ಭಿನ್ನವಾಗಿರಬಹುದು” ಎಂದು ಸ್ಪಷ್ಟಪಡಿಸಿದರು. ಉತ್ತರ ಪ್ರದೇಶದಲ್ಲಿ ಆದಿತ್ಯನಾಥ್ ಸರಕಾರ ಕರಡು ಮಸೂದೆ ಸಿದ್ಧಪಡಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಮಿತ್ರಪಕ್ಷವಾಗಿರುವ ಜೆಡಿಯು ಪಕ್ಷದ ಅಭಿಪ್ರಾಯ ಭಿನ್ನವಾಗಿರುವುದು ಇದರಿಂದ ಸ್ಪಷ್ಟವಾಗಿ ತಿಳಿದುಬಂದಿದೆ.

ಒಂದು ಸಮೀಕ್ಷೆ ಪ್ರಕಾರ ಬಿಹಾರದಲ್ಲಿ ಜನನ ದರ ರಾಷ್ಟ್ರೀಯ ಸರಾಸರಿಗಿಂತ ಕಡಿಮೆ ಇದೆ. ಬಿಹಾರದಲ್ಲಿ ಮಹಿಳೆಯರಿಗೆ ಇಂಟರ್‌ಮೀಡಿಯೇಟ್ ಹಂತದವರೆಗೆ ಶಿಕ್ಷಣ ನೀಡಿದಾಗ ಜನನ ಪ್ರಮಾಣ 1.6% ಇದ್ದು ದೇಶದಲ್ಲಿ ಇದು 1.7% ಇದೆ. ಈ ಹಿಂದೆ ಮಹಿಳೆಯರು ಮೆಟ್ರಿಕ್ಯುಲೇಶನ್ ಶಿಕ್ಷಣ ಪಡೆಯುತ್ತಿದ್ದಾಗ ಜನನ ಪ್ರಮಾಣ 2% ಇತ್ತು ಎಂದು ನಿತೀಶ್ ಹೇಳಿದರು.

ರಾಜ್ಯದಲ್ಲಿ ಜನನ ದರ 4% ಕೂಡಾ ಇತ್ತು. ಅದನ್ನು 3%ಗೆ ಇಳಿಸಲಾಯಿತು. ಇದು ಬಿಹಾರ ಸರಕಾರದ ಯೋಜನೆಗಳ ಪರಿಣಾಮ. 2040ರ ವೇಳೆಗೆ ದೇಶದಲ್ಲಿ ಜನನ ಪ್ರಮಾಣ ಇಳಿಮುಖವಾಗಲಿದೆ ಎಂದು ಅವರು ಭವಿಷ್ಯ ನುಡಿದರು

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago