ಪಾಟ್ನಾ, : ”ಜನಸಂಖ್ಯೆ ನಿಯಂತ್ರಣಕ್ಕೆ ಕೇವಲ ಕಾನೂನು ರೂಪಿಸುವುದರಿಂದ ಯಾವ ಪ್ರಯೋಜನವೂ ಇಲ್ಲ; ಈ ಗುರಿಯನ್ನು ತಲುಪಬೇಕಾದರೆ ಮಹಿಳೆಯರಿಗೆ ಸೂಕ್ತ ಶಿಕ್ಷಣ ನೀಡಿ ಅರಿವು ಮೂಡಿಸುವುದು ಅಗತ್ಯ” ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರತಿಪಾದಿಸಿದ್ದಾರೆ.
‘ಜನತಾ ಕೀ ದರ್ಬಾರ್ ಮೇ ಮುಖ್ಯಮಂತ್ರಿ’ ಕಾರ್ಯಕ್ರಮದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ರಾಜ್ಯಗಳು ಏನು ಮಾಡುತ್ತಿವೆ ಎಂಬ ಬಗ್ಗೆ ನಾನು ತಲೆಕೆಡಿಸಿಕೊಂಡಿಲ್ಲ. “ಈ ವಿಚಾರದಲ್ಲಿ ನನ್ನ ನಿಲುವು ಸ್ಪಷ್ಟ. ಬಹುಶಃ ಇದು ಬೇರೆ ರಾಜ್ಯಗಳಿಂತ ಭಿನ್ನವಾಗಿರಬಹುದು” ಎಂದು ಸ್ಪಷ್ಟಪಡಿಸಿದರು. ಉತ್ತರ ಪ್ರದೇಶದಲ್ಲಿ ಆದಿತ್ಯನಾಥ್ ಸರಕಾರ ಕರಡು ಮಸೂದೆ ಸಿದ್ಧಪಡಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಮಿತ್ರಪಕ್ಷವಾಗಿರುವ ಜೆಡಿಯು ಪಕ್ಷದ ಅಭಿಪ್ರಾಯ ಭಿನ್ನವಾಗಿರುವುದು ಇದರಿಂದ ಸ್ಪಷ್ಟವಾಗಿ ತಿಳಿದುಬಂದಿದೆ.
ಒಂದು ಸಮೀಕ್ಷೆ ಪ್ರಕಾರ ಬಿಹಾರದಲ್ಲಿ ಜನನ ದರ ರಾಷ್ಟ್ರೀಯ ಸರಾಸರಿಗಿಂತ ಕಡಿಮೆ ಇದೆ. ಬಿಹಾರದಲ್ಲಿ ಮಹಿಳೆಯರಿಗೆ ಇಂಟರ್‌ಮೀಡಿಯೇಟ್ ಹಂತದವರೆಗೆ ಶಿಕ್ಷಣ ನೀಡಿದಾಗ ಜನನ ಪ್ರಮಾಣ 1.6% ಇದ್ದು ದೇಶದಲ್ಲಿ ಇದು 1.7% ಇದೆ. ಈ ಹಿಂದೆ ಮಹಿಳೆಯರು ಮೆಟ್ರಿಕ್ಯುಲೇಶನ್ ಶಿಕ್ಷಣ ಪಡೆಯುತ್ತಿದ್ದಾಗ ಜನನ ಪ್ರಮಾಣ 2% ಇತ್ತು ಎಂದು ನಿತೀಶ್ ಹೇಳಿದರು.
ರಾಜ್ಯದಲ್ಲಿ ಜನನ ದರ 4% ಕೂಡಾ ಇತ್ತು. ಅದನ್ನು 3%ಗೆ ಇಳಿಸಲಾಯಿತು. ಇದು ಬಿಹಾರ ಸರಕಾರದ ಯೋಜನೆಗಳ ಪರಿಣಾಮ. 2040ರ ವೇಳೆಗೆ ದೇಶದಲ್ಲಿ ಜನನ ಪ್ರಮಾಣ ಇಳಿಮುಖವಾಗಲಿದೆ ಎಂದು ಅವರು ಭವಿಷ್ಯ ನುಡಿದರು
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…
ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…
NEET (UG) Re-Exam 2026: ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…
NEET (UG) Re-Exam 2026: ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…
ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್…