ಚನ್ನಪಟ್ಟಣ, : “ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸಿರುವ ಮುಖ್ಯಮಂತ್ರಿ ಯಾರಾದರೂ ಇದ್ದರೆ ಅದು ಕುಮಾರಸ್ವಾಮಿ ಅವರು ಮಾತ್ರ. ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ದಿನ ಬರುತ್ತದೆ” ಎಂದು ನಂಜಾವಧೂತ ಸ್ವಾಮೀಜಿ ಭವಿಷ್ಯ ನುಡಿದರು.
ಚನ್ನಪಟ್ಟಣದ ದೊಡ್ಡಮಳೂರಿನಲ್ಲಿ ನಡೆದ ಬಮೂಲ್ ಉತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಕುಮಾರಸ್ವಾಮಿ ಅವರು ಅಧಿಕಾರದಲ್ಲಿ ಇದ್ದ ಸಂದರ್ಭ ಬಹಳ ಒಳ್ಳೆಯ ಕೆಲಸ ಮಾಡಿದ್ದಾರೆ. ಆದರೆ, ಅವರು ಮಾಡಿರುವ ಕೆಲಸ ಕಾರ್ಯಗಳು ಸರಿಯಾಗಿ ಪ್ರಚಾರವಾಗಿಲ್ಲ. ಈಗ ಯಡಿಯೂರಪ್ಪ ಅವರು ರಾಜ್ಯದಲ್ಲಿ ಸಿಎಂ ಆಗಿದ್ದಾರೆ. ಅವರೂ ಕೂಡಾ ಉತ್ತಮ ಕಾರ್ಯಗಳನ್ನು ಮಾಡಬೇಕಿದೆ. ಕುಮಾರಸ್ವಾಮಿ ಅವರು ಯಡಿಯೂರಪ್ಪ ಸರ್ಕಾರಕ್ಕೆ ಯಾವ ತೊಂದರೆಯನ್ನೂ ಮಾಡುವುದಿಲ್ಲ” ಎಂದು ಹೇಳಿದರು.
ಈ ಸಂದರ್ಭ ಮಾತನಾಡಿದ ಕುಮಾರಸ್ವಾಮಿ ಅವರು,ಯಡಿಯೂರಪ್ಪ ಅವರು ಬಹಳ ಶ್ರಮಪಟ್ಟು ಮುಖ್ಯಮಂತ್ರಿಯಾಗಿದ್ದಾರೆ. ಯಾವುದೇ ಸರ್ಕಾರವನ್ನು ನಾನು ಅಸ್ಥಿರಗೊಳಿಸಲು ಹೋಗಲ್ಲ. ಅಸ್ಥಿರಗೊಳಿಸುವ ಯಾವ ಗುಂಪುಗಳೊಂದಿಗೂ ನಾನಿಲ್ಲ. ನನಗೆ ಅದರ ಅವಶ್ಯಕತೆಯೂ ಇಲ್ಲ” ಎಂದು ಹೇಳಿದರು.
ಎಂಆರ್‌ಪಿಎಲ್ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…