Featured

ಜನಸಾಮಾನ್ಯರ ಶ್ರೇಯೋಭಿವೃದ್ದಿಗೆ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಲು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉತ್ಸುಕತೆ ತೋರಬೇಕು :  ಸುನಿಲ್ ಕುಮಾರ್  – Vishwanews24

ಜನಸಾಮಾನ್ಯರ ಶ್ರೇಯೋಭಿವೃದ್ದಿಗೆ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಲು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉತ್ಸುಕತೆ ತೋರಬೇಕು :  ಸುನಿಲ್ ಕುಮಾರ್  – Vishwanews24

ಮಂಗಳೂರು: ಜನಸಾಮಾನ್ಯರ ಶ್ರೇಯೋಭಿವೃದ್ದಿಗೆ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕಾರ್ಯಕ್ರಮಗಳನ್ನು ಮುಂದಿನ ಒಂದೂವರೆ ವರ್ಷ ಜನರಿಗೆ ತಲುಪಿಸುವ ಕೆಲಸವನ್ನು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಒಟ್ಟಾಗಿ ನಿರ್ವಹಿಸುವ ಉತ್ಸುಕತೆ ತೋರಬೇಕು ಎಂದು ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್ ಅವರು ಕರೆ ನೀಡಿದರು.

ಅವರು  ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರ ಸರ್ಕಾರ ಅಸ್ತಿತ್ವಕ್ಕೆ ಬಂದು ಇಂದಿಗೆ ಆರು ತಿಂಗಳು ಪೂರ್ಣಗೊಂಡಿವೆ, ಇನ್ನೂ ಬಾಕಿ ಉಳಿದಿರುವ ಒಂದೂವರೆ ವರ್ಷಗಳ ಅವಧಿಯಲ್ಲಿ ರಾಜ್ಯ ಸರ್ಕಾರವು ಜನರ ಕಲ್ಯಾಣಕ್ಕಾಗಿ ರೂಪಿಸಿರುವ ಹಲವು ಜನಪರ ಹಾಗೂ ಜನಪ್ರಿಯ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡಲು ಸಿದ್ದರಾಗುವಂತೆ ಅವರು ತಾಕೀತು ಮಾಡಿದರು.

ವಿಧಾನಸಭೆಯ ಸದಸ್ಯರಾಗಿ ಮೂರನೇ ಬಾರಿ ಆಯ್ಕೆಯಾಗಿರುವ ತಮಗೆ ತಾಲೂಕು ಹಾಗೂ ಗ್ರಾಮೀಣ ಮಟ್ಟದಲ್ಲಿ ಉದ್ಭವವಾಗುವ ಸಮಸ್ಯೆಗಳ ಬಗ್ಗೆ ಆಳವಾದ ಅರಿವಿದೆ, ಈ ಜಿಲ್ಲೆಯಲ್ಲಿರುವ ಆ ಸಮಸ್ಯೆಗಳು ಮುಂದಿನ ಒಂದೂವರೆ ವರ್ಷದಲ್ಲಿ ಬಗೆಹರಿಸಲು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ತಂಡದಂತೆ ಸರ್ಕಾರಕ್ಕೆ ಗೌರವ ತರುವ ರೀತಿಯಲ್ಲಿ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಒಳ್ಳೆಯ ಹಾಗೂ ಉತ್ತಮ ರೀತಿಯಲ್ಲಿ ಕೆಲಸ ಮಾಡುವ ಮೂಲಕ ಜನಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸಲು ಶ್ರಮಿಸಬೇಕು ಎಂದರು.

 

ಜಿಲ್ಲೆಯ ಸಹಾಯಕ ಆಯುಕ್ತರು, ತಹಶೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ಆರೋಗ್ಯ, ಕೃಷಿ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago