Featured

ಜನಸ್ಪಂದನದಲ್ಲಿ ಸ್ವೀಕರಿಸಲಾದ ಅರ್ಜಿಗಳಿಗೆ ಮೂರು ತಿಂಗಳೊಳಗೆ ಪರಿಹಾರ ಒದಗಿಸಬೇಕು  : ಅಧಿಕಾರಿಗಳಿಗೆ  ಸಿದ್ದರಾಮಯ್ಯ ಸ್ಪಷ್ಟ ಸೂಚನೆ – Vishwanews24

ಜನಸ್ಪಂದನದಲ್ಲಿ ಸ್ವೀಕರಿಸಲಾದ ಅರ್ಜಿಗಳಿಗೆ ಮೂರು ತಿಂಗಳೊಳಗೆ ಪರಿಹಾರ ಒದಗಿಸಬೇಕು  : ಅಧಿಕಾರಿಗಳಿಗೆ  ಸಿದ್ದರಾಮಯ್ಯ ಸ್ಪಷ್ಟ ಸೂಚನೆ

ಬೆಂಗಳೂರು: ನವೆಂಬರ್‌ 27 ರಂದು ನಡೆದ ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪೈಕಿ ಶೇ. 98 ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಿ, ಜನರಿಗೆ ಪರಿಹಾರಗಳನ್ನು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸದರು.

ಅವರು ಇಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಎರಡನೇ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರ್ಕಾರವನ್ನು ಜನರ ಬಳಿಗೇ ಒಯ್ಯಬೇಕೆಂಬುದು ಸರ್ಕಾರದ ಆಶಯ. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಈ ವರೆಗೆ ಒಟ್ಟು 108 ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಿದ್ದಾರೆ ಎಂದು ವಿವರಿಸಿದರು. ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿಯೂ ಜನಸ್ಪಂದನ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಇಲ್ಲಿ ಬಗೆಹರಿಯದ ಸಮಸ್ಯೆಗಳನ್ನು ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಜನರು ಸಲ್ಲಿಸಬಹುದಾಗಿದೆ. ಕಾನೂನುಬದ್ಧವಾದ ಸಮಸ್ಯೆಗಳಿಗೆ ನಮ್ಮ ಸರ್ಕಾರ ಪರಿಹಾರ ಒದಗಿಸಲಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು. ಸಮಸ್ಯೆ ಬಗೆಹರಿಸಲು ಕಾನೂನು ತೊಡಕು ಇದ್ದಲ್ಲಿ, ಈ ಕುರಿತು ಅರ್ಜಿದಾರರಿಗೆ ಕಾರಣ ಸಹಿತ ಹಿಂಬರಹ ನೀಡಲಾಗುವುದು ಎಂದು ತಿಳಿಸಿದರು.

ಜನಸ್ಪಂದನದಲ್ಲಿ ಸ್ವೀಕರಿಸಲಾದ ಅರ್ಜಿಗಳಿಗೆ ಮೂರು ತಿಂಗಳೊಳಗೆ ವಿಲೇವಾರಿ ಮಾಡಬೇಕು; ಜನರ ಸಮ್ಸಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಆಡಳಿತ ವ್ಯವಸ್ಥೆ ಚುರುಕುಗೊಳ್ಳಬೇಕು; ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎನ್ನುವ ಆಶಯದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸರ್ಕಾರ ರೂಪಿಸುವ ಜನೋಪಯೋಗಿ ಕಾರ್ಯಕ್ರಮಗಳು ನೇರವಾಗಿ ಫಲಾನುಭವಿಗಳಿಗೆ ತಲುಪಬೇಕು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎಂಟು ತಿಂಗಳೊಳಗಾಗಿ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಬಿಜೆಪಿಯವರು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಸಾಧ್ಯವಿಲ್ಲ. ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಟೀಕಿಸಿದ್ದರು. ಯೋಜನೆ ಜಾರಿಗೊಳಿಸಿದಾಗ ವಿರೋಧ ಪಕ್ಷಗಳ ನಾಯಕರು ಈಗ ಯೋಜನೆ ಜಾರಿಗೊಳಿಸಿ ಆಮೇಲೆ ನಿಲ್ಲಿಸುತ್ತಾರೆ ಎಂದು ತಿಳಿಸಿದ್ದಾರೆ. ಆದರೆ ಇಂತಹ ಅಪಪ್ರಚಾರಗಳಿಗೆ ಕಿವಿಗೊಡಬಾರದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮ; ಅಸಮಾನತೆ ನಿವಾರಿಸುವ ಕಾರ್ಯಕ್ರಮ. ನಾವು ಸಂವಿಧಾನದಲ್ಲಿ, ಬಸವಾದಿ ಶರಣರಲ್ಲಿ ನಂಬಿಕೆ ಇಟ್ಟುಕೊಂಡಿರುವವರು. ಸಮಾಜದಲ್ಲಿ ಭ್ರಾತೃತ್ವ ಬೆಳೆಯಬೇಕು. ಸಮಾನತೆ ಮೂಡಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ, ನೆಮ್ಮದಿ ಕಾಪಾಡಲು ಸಾಧ್ಯ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ರಾಜ್ಯದ ನಾಯಕರು ಈಗ ಕೊಟ್ಟು ಆಮೇಲೆ ನಿಲ್ಲಿಸುತ್ತಾರೆ ಎಂದಿದ್ದಾರೆ. ಇದು ಬಡವರ ಕಾರ್ಯಕ್ರಮ. ಜೊತೆಗೆ ಅಸಮಾನತೆ ಹೋಗಲಾಡಿಸಲು ಮಾಡಿದ ಕಾರ್ಯಕ್ರಮಗಳು. ನಾವು ಸಂವಿಧಾನ, ಬಸವಾದಿ ಶರಣರಲ್ಲಿ ನಂಬಿಕೆ ಇಟ್ಟುಕೊಂಡಿರವವರು. ಭ್ರಾತೃವ ಬೆಳೆಯಬೇಕು, ಸಮಾನತೆ ಬೆಳೆಯಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ ನೆಮ್ಮದಿ ಕಾಪಾಡಲು ಸಾಧ್ಯ. ರಾಜ್ಯದಲಿ ಕಾನೂನು ಸುವ್ಯವಸ್ಥೆ ಇದ್ದರೆ ಬಂಡವಾಳ ಹೂಡಿಕೆ ಸಾಧ್ಯವಾಗುತ್ತದೆ. ರಾಜ್ಯದಲ್ಲಿ ಸಾಮಾಜಿಕ ಆರ್ಥಿಕ ಬದಲಾವಣೆ ತರಲು ಜನಸ್ಪಂದನ ಅಗತ್ಯ ಎಂದು ನುಡಿದರು

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago