ಮೈಸೂರು : “ಜನಾಭಿಪ್ರಾಯದ ವಿರುದ್ದ ಮಾತನಾಡಿದ ಬಳಿಕ ಕ್ಷಮೆಯಾಚಿಸುವುದು ಛಾಳಿಯಾಗಿದೆ. ಹಂಸಲೇಖ ಅವರು ಪರಿಜ್ಞಾನದಿಂದ ಮಾತನಾಡಬೇಕಿತ್ತು” ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮುಸ್ಲಿಂ ಸ್ಲೇಹಿತರನ್ನು ನಿಮ್ಮ ಮನೆಗೆ ಕರೆದು ಹಂದಿ ಮಾಂಸದ ಊಟ ಹಾಕಿ. ಆಗ ಅವರು ತಿನ್ನುತ್ತಾರಾ ನೋಡಿ. ಮುಸ್ಲಿಂ ಧರ್ಮದಲ್ಲಿ ಹಂದಿ ಮಾಂಸ ತಿನ್ನುವುದು ನಿಷೇಧ. ಹಾಗಾಗಿ ಅವರು ಹಂದಿ ಮಾಂಸ ತಿನ್ನುವುದಿಲ್ಲ ಅದನ್ನು ತಪ್ಪು ಎಂದು ಹೇಳುತ್ತೀರಾ?” ಎಂದು ಪ್ರಶ್ನಿಸಿದ್ದಾರೆ.
“ಪೇಜಾವರ ಶ್ರೀಗಳು ಬೇರೆ ರೀತಿಯ ಜಾತಿ ಸ್ವಾಮೀಜಿ ರೀತಿ ಅಲ್ಲ. ಸಸ್ಯಾಹಾರ ಸಾಧು-ಸಂತರ ಆಹಾರ ಪದ್ಧತಿ. ಮನಸ್ಸಿನ ತಾರತಮ್ಯ ತೆಗೆದು ಹಾಕಲು ಹೋಗಿದ್ದರೇ ಹೊರತು ಆಹಾರ ಪದ್ಧತಿಯ ಸಮಾನತೆಗೆ ಅಲ್ಲ” ಎಂದು ತಿಳಿಸಿದ್ದಾರೆ.
“ಹಂಸಲೇಖ ಅವರು ಬಾಯಿ ತಪ್ಪಿನಿಂದ ಈ ರೀತಿಯಾಗಿ ಹೇಳಿದ್ದಾರೆ ಎಂದೆನಿಸುತ್ತಿಲ್ಲ. ಪ್ರಗತಿಪರ ಅನ್ನಿಸಿಕೊಳ್ಳುವ ಗೀಳಿಗೆ ಬಿದ್ದು ಪ್ರಚಾರಕ್ಕಾಗಿ ಹೀಗೆ ಮಾತನಾಡುತ್ತಿದ್ದಾರೆ” ಎಂದಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…