Featured

ಜನಾರ್ದನ ಪೂಜಾರಿ ಎನ್‌ಕೌಂಟರ್ ವಿವಾದ : ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರು

ಮಂಗಳೂರು :ಸಾಮಾಜಿಕ ಜಾಲತಾಣದಲ್ಲಿ ಜನಾರ್ದನ ಪೂಜಾರಿ ಅವರನ್ನು ಅವಹೇಳನಗೈದಿದ್ದ ಆರೋಪಿಯನ್ನು ಹಕೀಂ ಪುತ್ತೂರು ಎಂದು ಗುರುತಿಸಲಾಗಿದೆ.

ಪುತ್ತೂರು ನಿವಾಸಿ ಹಕೀಂ ಎಂಬಾತ ಈ ಆಡಿಯೋ ಜಾಣತಾಣದಲ್ಲಿ ಹರಿದು ಬಿಟ್ಟ ಆರೋಪಿಯಾಗಿದ್ದು, ಕೆಲ ವರ್ಷಗಳ ಹಿಂದೆ ದುಬೈಗೆ ಹೋಗಿದ್ದು, ಅಲ್ಲಿ ಕೆಲಸಕ್ಕೆ ಸೇರಿಕೊಂಡ್ಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗುವುದು ಖಚಿತ ಎಂದು ಕಾಂಗ್ರೇಸ್ ಮುಖಂಡ ಜನಾರ್ದನ ಪೂಜಾರಿ ನೀಡಿದ್ದ ಹೇಳಿಕೆಯಿಂದ ಆಕ್ರೋಶಗೊಂಡು ಅವರನ್ನು ಎನ್‌ಕೌಂಟರ್ ಮಾಡಿ, ಪಕ್ಷದಿಂದ ಹೊರದಬ್ಬಿ ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದನು. ಈ ಹೇಳಿಕೆ ವಿರುದ್ಧ ಕರಾವಳಿಗರು ಆಕ್ರೋಶ ವ್ಯಕ್ತಪಡಿಸಿದ್ದು ಮಾತ್ರವಲ್ಲದೇ, ಶೀಘ್ರ ಹೇಳಿಕೆ ಕೊಟ್ಟವನನ್ನು ಬಂಧಿಸಬೇಕು ಎಂದು ಸಂಸದ ನಳಿನ್‌ಕುಮಾರ್ ಕಟೀಲು, ಮಾಜಿ ಶಾಸಕ ಜೆ ಆರ್ ಲೋಬೋ ಸೇರಿದಂತೆ ವಿವಿಧ ಸಂಘಟನೆಗಳು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಂತೆ ನಗರ ಪೊಲೀಸ್ ಆಯುಕ್ತ ಸುರೇಶ್ ಕುಮಾರ್ ಅವರಿಗೆ ಮನವಿ ನೀಡಿದ್ದರು..

ಇದೀಗ ಈತನನ್ನು ಮಂಗಳೂರು ನಗರದ ಪೊಲೀಸರು ದುಬೈಯಲ್ಲಿ ಪತ್ತೆ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ.

 

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago