Featured

ಜನೌಷಧಿ ಮಾದರಿಯಲ್ಲೇ ಜಾನುವಾರುಗಳಿಗೆ ಪಶು ಔಷಧಿ : ಕೇಂದ್ರ ಅನುಮೋದನೆ – vishwanews24

ಜನೌಷಧಿ ಮಾದರಿಯಲ್ಲೇ ಜಾನುವಾರುಗಳಿಗೆ ಪಶು ಔಷಧಿ : ಕೇಂದ್ರ ಅನುಮೋದನೆ

ನವದೆಹಲಿ :ಜನಸಾಮಾನ್ಯರಿಗೆ ಅಗ್ಗದ ದರದಲ್ಲಿ ಸಿಗುವ ‘ಜನೌಷಧಿ’ ಮಾದರಿಯಲ್ಲೇ ಜಾನುವಾರುಗಳಿಗೆ ‘ಪಶು ಔಷಧಿ’ ಹೆಸರಿನಲ್ಲಿ ಜೆನೆರಿಕ್‌ ಔಷಧಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ತಿರ್ಮಾನಿಸಿದೆ.

ಈ ಯೋಜನೆಗಾಗಿ 2026ರ ಮಾರ್ಚ್‌ 31ರ ಹೊತ್ತಿಗೆ 75 ಕೋಟಿ ರೂ. ವೆಚ್ಚ ಮಾಡಲು ನಿರ್ಧರಿಸಲಾಗಿದೆ. ಪಶು ಆರೋಗ್ಯ ಮತ್ತು ರೋಗ ನಿಯಂತ್ರಣದ ಕಾರ್ಯಕ್ರಮ ಪರಿಷ್ಕರಣೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ಈ ಕುರಿತು ಸಭೆಯ ಬಳಿಕ ಮಾಹಿತಿ ನೀಡಿರುವ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌, ‘ಜನ ಔಷಧಿಯಂತೆ ಪಶು ಔಷಧಿ ಎಂಬ ಯೋಜನೆಯನ್ನು ಆರಂಭಿಸಲಾಗಿದ್ದು, ಜಾನುವಾರುಗಳಿಗೆ ಉತ್ತಮ ಗುಣಮಟ್ಟದ ಔಷಧಿಗಳನ್ನು ಒದಗಿಸಲಾಗುವುದು. ಅದನ್ನು ಪಿಎಂ ಕಿಸಾನ್‌ ಸಮೃದ್ಧಿ ಕೇಂದ್ರಗಳಲ್ಲಿ ವಿತರಿಸಲಾಗುವುದು ಎಂದರು. ಅಂತೆಯೇ, ಸಾಂಪ್ರದಾಯಿಕ ಪಶುವೈದ್ಯಕೀಯ ಔಷಧಿಗಳನ್ನು ದಾಖಲಿಸುವುದೂ ಈ ಯೋಜನೆಗೆ ಭಾಗವಾಗಿದೆ ಎಂದು ತಿಳಿಸಿದರು.

Vishwa News 24

Recent Posts

ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ -vishwanews24

ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…

39 minutes ago

ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ -vishwanews24

ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…

1 hour ago

ನಂದಿನಿ ಹಾಲಿನ ದರ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ -vishwanews24

ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…

2 hours ago

ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ -vishwanews24

ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…

2 hours ago

ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್‌ ಠಾಣಾ…

2 hours ago

ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ :  ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ -vishwanews24

ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ :  ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ ನವದೆಹಲಿ : ವಂದೇ…

2 hours ago