ಬೆಂಗಳೂರು, -:ಕೆಲವರಿಗೆ ಅಧಿಕಾರ ಕೊಡುವ ಸಲುವಾಗಿ ಸಂಪುಟ ಪುನಾರಚಿಸಬೇಕು, ವಿಸ್ತರಣೆ ಮಾಡಬೇಕೆಂಬ ಪ್ರಶ್ನೆ ನಮ್ಮ ಮುಂದಿಲ್ಲ. ಜನ ಅಧಿಕಾರ ಕೊಟ್ಟಿದ್ದಾರೆ. ಅದನ್ನು ಬಳಸಿಕೊಂಡು ಅಭಿವೃದ್ಧಿ ಕೆಲಸ ಮಾಡುವುದು ನಮ್ಮ ಆದ್ಯತೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಎರಡರಲ್ಲಿ ಯಾವುದನ್ನು ಮಾಡಬೇಕೆಂಬ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಸಂಜೆ ಶಾಸಕಾಂಗ ಸಭೆ ಕರೆದಿದ್ದೇವೆ. ಎಲ್ಲರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ. ಕಾಂಗ್ರೆಸ್‍ಗೆ ನಮ್ಮ ಯಾವ ಶಾಸಕರ ಮೇಲೂ ಅಪನಂಬಿಕೆ ಇಲ್ಲ.
ರಮೇಶ್ ಜಾರಕಿಹೊಳಿ ಅವರನ್ನು ಕೆಲವು ಶಾಸಕರು ಭೇಟಿಮಾಡಿದ ತಕ್ಷಣ ಅನುಮಾನ ಪಡಬೇಕಿಲ್ಲ. ಸದ್ಯಕ್ಕೆ ಸರ್ಕಾರ ಸುಭದ್ರವಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಬರಗಾಲ ಇದೆ. ಕುಡಿಯುವ ನೀರು, ಮೇವು, ಜನರ ಉದ್ಯೋಗದ ಸಮಸ್ಯೆಗಳು ಕಾಡುತ್ತಿವೆ. ನಾವು ಆ ಬಗ್ಗೆ ಹೆಚ್ಚು ಚರ್ಚೆ ನಡೆಸುತ್ತಿದ್ದೇವೆ.
ಸರ್ಕಾರ ಇನ್ನಷ್ಟು ಉತ್ತಮ ಸಾಧನೆಗಳನ್ನು ಮಾಡಬೇಕು, ಜನರ ಸಮಸ್ಯೆಗಳನ್ನು ಬಗೆಹರಿಸಬೇಕು. ಒಳ್ಳೆಯ ಆಡಳಿತ ಕೊಡಬೇಕು ಎಂಬುದು ನಮ್ಮ ಆದ್ಯತೆ. ಸಮ್ಮಿಶ್ರ ಸರ್ಕಾರ ಆತಂಕದಲ್ಲಿದೆ, ಅತಂತ್ರದಲ್ಲಿದೆ ಎಂಬುದೆಲ್ಲ ಊಹಾಫೋಹ. ಸರ್ಕಾರ ಸುಭದ್ರವಾಗಿದೆ. ನಮ್ಮಲ್ಲಿ ಯಾವುದೇ ಸಮಸ್ಯೆಗಳಿಲ್ಲ ಎಂದು ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…