Featured

ಜನ ಅಧಿಕಾರ ಕೊಟ್ಟಿದ್ದಾರೆ ; ಅದನ್ನು ಬಳಸಿಕೊಂಡು ಅಭಿವೃದ್ಧಿ ಕೆಲಸ ಮಾಡುವುದು ನಮ್ಮ ಆದ್ಯತೆ : ದಿನೇಶ್‍ ಗುಂಡೂರಾವ್ -Vishwanews24

ಬೆಂಗಳೂರು, -:ಕೆಲವರಿಗೆ ಅಧಿಕಾರ ಕೊಡುವ ಸಲುವಾಗಿ ಸಂಪುಟ ಪುನಾರಚಿಸಬೇಕು, ವಿಸ್ತರಣೆ ಮಾಡಬೇಕೆಂಬ ಪ್ರಶ್ನೆ ನಮ್ಮ ಮುಂದಿಲ್ಲ. ಜನ ಅಧಿಕಾರ ಕೊಟ್ಟಿದ್ದಾರೆ. ಅದನ್ನು ಬಳಸಿಕೊಂಡು ಅಭಿವೃದ್ಧಿ ಕೆಲಸ ಮಾಡುವುದು ನಮ್ಮ ಆದ್ಯತೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಎರಡರಲ್ಲಿ ಯಾವುದನ್ನು ಮಾಡಬೇಕೆಂಬ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಸಂಜೆ ಶಾಸಕಾಂಗ ಸಭೆ ಕರೆದಿದ್ದೇವೆ. ಎಲ್ಲರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ. ಕಾಂಗ್ರೆಸ್‍ಗೆ ನಮ್ಮ ಯಾವ ಶಾಸಕರ ಮೇಲೂ ಅಪನಂಬಿಕೆ ಇಲ್ಲ.

ರಮೇಶ್ ಜಾರಕಿಹೊಳಿ ಅವರನ್ನು ಕೆಲವು ಶಾಸಕರು ಭೇಟಿಮಾಡಿದ ತಕ್ಷಣ ಅನುಮಾನ ಪಡಬೇಕಿಲ್ಲ. ಸದ್ಯಕ್ಕೆ ಸರ್ಕಾರ ಸುಭದ್ರವಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಬರಗಾಲ ಇದೆ. ಕುಡಿಯುವ ನೀರು, ಮೇವು, ಜನರ ಉದ್ಯೋಗದ ಸಮಸ್ಯೆಗಳು ಕಾಡುತ್ತಿವೆ. ನಾವು ಆ ಬಗ್ಗೆ ಹೆಚ್ಚು ಚರ್ಚೆ ನಡೆಸುತ್ತಿದ್ದೇವೆ.

ಸರ್ಕಾರ ಇನ್ನಷ್ಟು ಉತ್ತಮ ಸಾಧನೆಗಳನ್ನು ಮಾಡಬೇಕು, ಜನರ ಸಮಸ್ಯೆಗಳನ್ನು ಬಗೆಹರಿಸಬೇಕು. ಒಳ್ಳೆಯ ಆಡಳಿತ ಕೊಡಬೇಕು ಎಂಬುದು ನಮ್ಮ ಆದ್ಯತೆ. ಸಮ್ಮಿಶ್ರ ಸರ್ಕಾರ ಆತಂಕದಲ್ಲಿದೆ, ಅತಂತ್ರದಲ್ಲಿದೆ ಎಂಬುದೆಲ್ಲ ಊಹಾಫೋಹ. ಸರ್ಕಾರ ಸುಭದ್ರವಾಗಿದೆ. ನಮ್ಮಲ್ಲಿ ಯಾವುದೇ ಸಮಸ್ಯೆಗಳಿಲ್ಲ ಎಂದು ಹೇಳಿದರು.

 

Vishwa News 24

Recent Posts

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

57 minutes ago

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

1 hour ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

1 hour ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

1 hour ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

2 hours ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

2 hours ago