Featured

ಜನ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯಿರಿ, ಇಲ್ಲದಿದ್ದರೆ ರಾಜೀನಾಮೆ ನೀಡಿ : ಕೇಂದ್ರ ಸರ್ಕಾರಕ್ಕೆ ಮಮತಾ ದೀದಿ -Vishwanews24

ನನ್ನನ್ನು ಜೈಲಿಗೆ ಹಾಕಿದರೂ ಪರವಾಗಿಲ್ಲ,  ಬಿಜೆಪಿಯ ದುರಾಡಳಿತವನ್ನು ಮಾತ್ರ ಸಹಿಸಿಕೊಳ್ಳುವುದಿಲ್ಲ ..

ಜನ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯಿರಿ, ಇಲ್ಲದಿದ್ದರೆ ರಾಜೀನಾಮೆ ನೀಡಿ..

ರೈತರ ಹಕ್ಕುಗಳನ್ನು ಕಿತ್ತುಕೊಂಡ ನಂತರ ಅಧಿಕಾರದಲ್ಲಿ ಉಳಿಯಬಾರದು..

ಮಿಡ್ನಾಪುರ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತಕ್ಷಣವೇ “ಜನ ವಿರೋಧಿ” ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕು. ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಒತ್ತಾಯಿಸಿದ್ದಾರೆ.

ಪಶ್ಚಿಮ ಮಿಡ್ನಾಪುರ್ ಜಿಲ್ಲೆಯಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ನನ್ನನ್ನು ಜೈಲಿಗೆ ಹಾಕಿದರೂ ಪರವಾಗಿಲ್ಲ. ಆದರೆ ಬಿಜೆಪಿಯ ದುರಾಡಳಿತವನ್ನು ಮಾತ್ರ ಸಹಿಸಿಕೊಳ್ಳುವುದಿಲ್ಲ ಎಂದು ಗುಡುಗಿದ್ದಾರೆ.

“ಬಿಜೆಪಿ ಸರ್ಕಾರ (ಕೇಂದ್ರದಲ್ಲಿ) ತಕ್ಷಣವೇ ಕೃಷಿ ಮಸೂದೆಗಳನ್ನು ಹಿಂತೆಗೆದುಕೊಳ್ಳಬೇಕು. ಇಲ್ಲವೆ ಅಧಿಕಾರದಿಂದ ಕೆಳಗಿಳಿಯಬೇಕು. ರೈತರ ಹಕ್ಕುಗಳನ್ನು ಕಿತ್ತುಕೊಂಡ ನಂತರ ಅದು ಅಧಿಕಾರದಲ್ಲಿ ಉಳಿಯಬಾರದು” ಎಂದಿದ್ದಾರೆ.

ಬಿಜೆಪಿ “ಹೊರಗಿನಿಂದ ಬಂದವರ” ಪಕ್ಷವೆಂದು ವಾಗ್ದಾಳಿ ನಡೆಸಿದ ಟಿಎಂಸಿ ಮುಖ್ಯಸ್ಥೆ, ಕೇಸರಿ ಪಡೆ ಬಂಗಾಳದ ಮೇಲೆ ಹಿಡಿತ ಸಾಧಿಸಲು ಎಂದಿಗೂ ಅವಕಾಶ ನೀಡವುದಿಲ್ಲ ಮತ್ತು ರಾಜ್ಯ ಜನ ಸಹ ಅದಕ್ಕೆ ಅವಕಾಶ ನೀಡಬಾರದು ಎಂದರು.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago