ಜನ ಶಕ್ತಿಯೇ ಸರ್ವಶ್ರೇಷ್ಠ ಎಂಬುದು ಮತ್ತೊಮ್ಮೆ ಸಾಬೀತು : ಪ್ರಧಾನಿ ಮೋದಿ – vishwanews24
ಚುನಾವಣೆಯಲ್ಲಿ ಗೆದ್ದ ಬಿಜೆಪಿ: ದೆಹಲಿ ಜನತೆಗೆ ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ
ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು 27 ವರ್ಷಗಳ ಬಳಿಕ ಐತಿಹಾಸಿಕ ಗೆಲುವು ಸಾಧಿಸಿದೆ. ಈ ಅಭೂತಪೂರ್ವ ಗೆಲುವು ದೊರಕಿಸಿ ಕೊಟ್ಟಿದ್ದಕ್ಕಾಗಿ ದೆಹಲಿ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ತಿಳಿಸಿದ್ದಾರೆ. ಇದರೊಂದಿಗೆ ದೆಹಲಿಯ ಬಿಜೆಪಿ ಕಾರ್ಯಕರ್ತರಿಗೂ ಅಭಿನಂದನೆ ಸಲ್ಲಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿರುವ ಪ್ರಧಾನಿ ಮೋದಿ, ಜನಶಕ್ತಿಯೇ ಸರ್ವ ಶ್ರೇಷ್ಠ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಅಭಿವೃದ್ಧಿ ಗೆಲ್ಲುತ್ತದೆ, ಉತ್ತಮ ಆಡಳಿತ ಜಯಗಳಿಸುತ್ತದೆ. ಈ ಅಭೂತಪೂರ್ವ ಮತ್ತು ಐತಿಹಾಸಿಕ ಜನಾದೇಶಕ್ಕಾಗಿ ದೆಹಲಿಯ ನನ್ನ ಪ್ರೀತಿಯ ಸಹೋದರಿಯರು ಮತ್ತು ಸಹೋದರರಿಗೆ ನಾನು ನಮಸ್ಕರಿಸುತ್ತೇನೆ. ಜನಾದೇಶಕ್ಕೆ ನಾವು ವಿನೀತರಾಗಿದ್ದೇವೆ ಮತ್ತು ಗೌರವಿಸುತ್ತೇವೆ ಎಂದು ಪೋಸ್ಟ್ ಮಾಡಿದ್ದಾರೆ.
Jana Shakti is paramount!
Development wins, good governance triumphs.
I bow to my dear sisters and brothers of Delhi for this resounding and historic mandate to @BJP4India. We are humbled and honoured to receive these blessings.
It is our guarantee that we will leave no…
— Narendra Modi (@narendramodi) February 8, 2025
ದೆಹಲಿಯನ್ನು ಅಭಿವೃದ್ಧಿಪಡಿಸುವ, ಜನರ ಒಟ್ಟಾರೆ ಜೀವನದ ಗುಣಮಟ್ಟವನ್ನು ಸುಧಾರಿಸುವ ನಮ್ಮ ಗ್ಯಾರಂಟಿಯಿಂದ, ವಿಕಸಿತ ಭಾರತ ನಿರ್ಮಾಣ ಮಾಡುವಲ್ಲಿ ದೆಹಲಿಯು ಪ್ರಧಾನ ಪಾತ್ರ ವಹಿಸುವಂತಾಗಲಿದೆ. ಈ ಬಗ್ಗೆ ನಾವು ಖಾತರಿ ನಿಡುತ್ತೇವೆ. ಇದುವೇ ನಮ್ಮ ಭರವಸೆಯಾಗಿದೆ ಎಂದು ಅವರು ತಿಳಿಸಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆ ಬಿಜೆಪಿ ಜಯಭೇರಿ : ಕಾಪು ಮಂಡಲ ಬಿಜೆಪಿ ವತಿಯಿಂದ ಸಂಭ್ರಮಾಚರಣೆ – vishwanews24
ಇನ್ನು ಇಂದು ಸಂಜೆ ರಾಷ್ಟ್ರ ರಾಜಧಾನಿಯಲ್ಲಿರುವ ಬಿಜೆಪಿ ಪ್ರಧಾನ ಕಚೇರಿಗೆ ಪ್ರಧಾನಿ ಮೋದಿ ಭೇಟಿ ನೀಡಿ 7.30ಕ್ಕೆ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
