Featured

ಜಪಾನ್‌ ಭೂಕಂಪ : ಒಂದೇ ದಿನ 155 ಬಾರಿ ಭೂಮಿ ಕಂಪನ, 13 ಮಂದಿ ಸಾವು – vishwanews24

ಜಪಾನ್‌ ಭೂಕಂಪ : ಒಂದೇ ದಿನ 155 ಬಾರಿ ಭೂಮಿ ಕಂಪನ, 13 ಮಂದಿ ಸಾವು

ಟೋಕಿಯೊ: ಒಂದೇ ದಿನ 155 ಬಾರಿ ಭೂಕಂಪ ಸಂಭವಿಸಿದ ಪರಿಣಾಮ ಜಪಾನ್‌ನಲ್ಲಿ 13 ಮಂದಿ ಸಾವಿಗೀಡಾಗಿದ್ದಾರೆ. ಹೊಸ ವರ್ಷದಂದೇ ಭೂಕಂಪ ಸಂಭವಿಸಿ ಅಪಾರ ಸಾವು-ನೋವಿಗೆ ಕಾರಣವಾಗಿದೆ.

ಹೊನ್ಶುವಿನ ಮುಖ್ಯ ದ್ವೀಪದಲ್ಲಿರುವ ಇಶಿಕಾವಾ ಪ್ರಾಂತ್ಯದಲ್ಲಿ 7.5 ತೀವ್ರತೆಯ ಭೂಕಂಪವು ಒಂದು ಮೀಟರ್ ಎತ್ತರದ ಸುನಾಮಿ ಅಲೆಗಳನ್ನು ಸೃಷ್ಟಿಸಿತು. ಭೂಕಂಪದ ತೀವ್ರತೆಗೆ ಕಟ್ಟಡಗಳು ನೆಲಕ್ಕುರುಳಿವೆ, ಪ್ರಮುಖ ಬಂದರು ಬೆಂಕಿ ಅವಘಡಕ್ಕೆ ಕಾರಣವಾಯಿತು, ರಸ್ತೆಗಳು ಬಿರುಕು ಬಿಟ್ಟಿವೆ.

ಜಪಾನ್‌ನಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದಿಂದಾಗಿ ಹಲವಾರು ಸಾವುನೋವುಗಳು, ಕಟ್ಟಡ ಕುಸಿತಗಳು ಮತ್ತು ಬೆಂಕಿ ಸೇರಿದಂತೆ ಬಹಳ ವ್ಯಾಪಕ ಹಾನಿಯಾಗಿದೆ ಎಂದು ವಿಪತ್ತು ನಿರ್ವಹಣಾ ಸಭೆಯ ಬಳಿಕ ಪ್ರಧಾನ ಮಂತ್ರಿ ಫ್ಯೂಮಿಯೊ ಕಿಶಿಡಾ ತಿಳಿಸಿದ್ದಾರೆ.

ವಾಜಿಮಾ ಬಂದರಿನಲ್ಲಿ ಏಳು ಮಂದಿ ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ ಎಂದು ಕ್ಯೋಡೋ ಸುದ್ದಿ ಸಂಸ್ಥೆ ವರದಿ ಮಾಡಿದೆ. ಏರಿಯಲ್ ನ್ಯೂಸ್ ಫೂಟೇಜ್ ಬಂದರಿನಲ್ಲಿ ಭೂಕಂಪದಿಂದ ಬೆಂಕಿ ಅವಘಡ ಸಂಭವಿಸಿತು. ಏಳು ಅಂತಸ್ತಿನ ಕಟ್ಟಡವು ಕುಸಿದಿದೆ. ಈ ಪ್ರದೇಶದಲ್ಲಿ ಸುಮಾರು 45,000 ಕುಟುಂಬಗಳು ವಿದ್ಯುತ್‌ ಸಮಸ್ಯೆಯಿಂದ ಕತ್ತಲಲ್ಲಿ ಜೀವನ ನಡೆಸುವಂತಾಗಿದೆ.

ಭೂಕಂಪದ ತೀವ್ರತೆ 7.5ರಷ್ಟಿತ್ತು ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ (ಯುಎಸ್‌ಜಿಎಸ್) ತಿಳಿಸಿದೆ. ಜಪಾನ್‌ನ ಹವಾಮಾನ ಸಂಸ್ಥೆ ಇದನ್ನು 7.6 ಎಂದು ಹೇಳಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago