Featured

ಜಮೀನು ನಕ್ಷೆಗಳು ಇನ್ಮುಂದೆ ಆನ್ ಲೈನ್ ನಲ್ಲೇ ಲಭ್ಯ ; ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ – Vishwanews24

ಜಮೀನು ನಕ್ಷೆ ಇನ್ಮುಂದೆ  ಆನ್ ಲೈನ್ ನಲ್ಲೇ ಲಭ್ಯ ; ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ಬೆಂಗಳೂರು: ಜಮೀನಿಗೆ ಸಂಬಂಧಿಸಿದ 11ಇ, ಪೋಡಿ, ಭೂ ಪರಿವರ್ತನೆ ಸ್ಕೆಚ್‌, ಹದ್ದುಬಸ್ತು ಮತ್ತು ಇತರ ನಕ್ಷೆಗಳು ಇನ್ನು ಮುಂದೆ ಆನ್‌ ಲೈನ್‌ ನಲ್ಲೇ ಸಿಗುವುದಕ್ಕೆ ಈಗ ರಾಜ್ಯ ಸರ್ಕಾರ ವ್ಯವಸ್ಥೆ ಮಾಡಿದೆ.

11ಇ, ಪೋಡಿ, ಭೂ ಪರಿವರ್ತನೆ ಸ್ಕೆಚ್‌, ಹದ್ದುಬಸ್ತು ಮತ್ತು ಇತರೆ ನಕ್ಷೆಗಳಿಗೆ ಅರ್ಜಿ ಸಲ್ಲಿಸಿದ ನಾಗರಿಕರು https:// 103,138.196.154/service19/Report/ ವೆಬ್​ಸೈಟ್ ಮೂಲಕ ತಮ್ಮ ಅರ್ಜಿಯ ಸ್ಥಿತಿಗತಿಯನ್ನು ಸಹ ವೀಕ್ಷಿಸಬಹುದು.

ಅರ್ಜಿ ಸ್ವೀಕಾರಗೊಂಡು ಸರ್ವೇ ಸಿಬ್ಬಂದಿ ತಮ್ಮ ಜಮೀನಿಗೆ ಬಂದು ಸಂಬಂಧಿಸಿದ ಮಾಪನ ಕಾರ್ಯ ಮುಗಿಸಿ ನಕ್ಷೆ ಅನುಮೋದಿಸಿದ ತಕ್ಷಣ ಇದೇ ವೆಬ್‌ಸೈಟ್‌ನಲ್ಲಿ ಆ ನಕ್ಷೆಗಳನ್ನು ಸಾರ್ವಜನಿಕರು ಮುದ್ರಣ ಪ್ರತಿ ಪಡೆದುಕೊಳ್ಳಬಹುದು.

ಗುರುಪುರ : ಸೇತುವೆಯ ಮೇಲೆ ತನ್ನ ದ್ವಿಚಕ್ರ ವಾಹನ ನಿಲ್ಲಿಸಿ ನದಿಗೆ ಹಾರಿದ ವ್ಯಕ್ತಿ – Vishwanews24

ಅರ್ಜಿ ಸಲ್ಲಿಸುವಾಗ ನಾಗರಿಕರು ಹಣ ಪಾವತಿಸಿರುವ ಕಾರಣ ನಕ್ಷೆ ಪ್ರತಿಗಳನ್ನು ಡೌನ್‌ಲೋಡ್‌ ಮಾಡಿಕೊಂಡು ಮುದ್ರಣ ಪ್ರತಿ ಪಡೆಯಲು ಯಾವುದೇ ಹೆಚ್ಚುವರಿ ಹಣ ಕೊಡಬೇಕಾಗಿರುವುದಿಲ್ಲ. ಇದರಿಂದ ತಮ್ಮ ನಕ್ಷೆಗಳ ಪ್ರಿಂಟ್‌ ಔಟ್‌ ಪಡೆಯಲು ಸರ್ವೆ ಕಚೇರಿಗಳಿಗೆ ಹೋಗಬೇಕಾಗಿರುವುದಿಲ್ಲ.

ವೆಬ್‌ ಸೈಟ್‌ಗೆ ಭೇಟಿ ನೀಡಿದಾಗ ನಾಗರಿಕರು ಯಾವ ನಕ್ಷೆಗೆ ಅರ್ಜಿ ಸಲ್ಲಿಸಿರುತ್ತಾರೋ ಆ ಅರ್ಜಿ ಸಂಖ್ಯೆ, ಮೊಬೈಲ್‌ ಸಂಖ್ಯೆ, ಸರ್ವೆ ನಂಬರ್‌, ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮ, ಸರ್ವೆ ನಂಬರ್‌ ಹೀಗೆ ವಿವಿಧ ಮಾಹಿತಿಗಳನ್ನು ದಾಖಲಿಸಿ ತಮ್ಮ ನಕ್ಷೆ ಪಡೆದುಕೊಳ್ಳಬಹುದು ಎಂದು ಸರ್ವೇ ಮಾಪನ ಮತ್ತು ಭೂ ದಾಖಲೆಗಳ ಆಯುಕ್ತ ಮುನೀಶ್‌ ಮೌದ್ಗಿಲ್‌ ತಿಳಿಸಿದ್ದಾರೆ.

ಆಯಪ್​ ಅಭಿವೃದ್ಧಿ

ರೈತರು ತಮ್ಮ ಜಮೀನಿನ ಪೋಡಿ ನಕ್ಷೆಯನ್ನು (ಸ್ಕೆಚ್) ತಾವೇ ತಯಾರಿಸಿಕೊಳ್ಳುವ ಸ್ವಯಂ ಸೇವೆಯ ಹೊಸ ವ್ಯವಸ್ಥೆಯನ್ನು ಕಂದಾಯ ಇಲಾಖೆ ಸಿದ್ದಪಡಿಸಿದೆ. ಇದಕ್ಕಾಗಿ ಕಂದಾಯ ಇಲಾಖೆಯು ಸ್ವಾವಲಂಬಿ ಎಂಬ ಹೆಸರಿನ ಆಯಪ್ ಒಂದನ್ನು ಅಭಿವೃದ್ಧಿಪಡಿಸಿದೆ.

ಈ ಆಯಪ್ ಸಹಾಯದಿಂದ ರೈತರು ಜಮೀನಿನ ಪೋಡಿಯನ್ನು ಸ್ವತಃ ತಯಾರಿಸಿ ಕೊಳ್ಳಬಹುದು. ಹಾಗಾದರೆ ಜಮೀನಿನ ಪೋಡಿ ಸ್ಕೆಚ್ ಎಂದರೇನು? ಪೋಡಿ ಯಾವಾಗ ಮಾಡಿಸಬೇಕು? ಪೋಡಿ ಮಾಡುವುದರಿಂದಾಗುವ ಪ್ರಯೋಜನವೇನೆಂಬುದರ ಬಗ್ಗೆ ಮಾಹಿತಿ ನೀಡಲಾಗಿದೆ.

ಗೋ ವ್ಯಾಪಾರಿಗಳ ಮನೆ, ಅಂಗಡಿ ಜಪ್ತಿ ಮಾಡಿದ ಜಿಲ್ಲಾಡಳಿತದ ನಡೆ ಅಧಿಕಾರ ದುರುಪಯೋಗದ ಪರಮಾವಧಿ: ಎಸ್‌ಡಿಪಿಐ ಆಕ್ರೋಶ..

ಪೋಡಿ ಎಂದರೇನು?

ಪೋಡಿ ಎಂದರೆ ಜಮೀನಿನ ಭಾಗ ಮಾಡುವುದು ಎಂದರ್ಥ. ಅಂದರೆ ಒಂದೇ ಸರ್ವೇ ನಂಬರಿನಲ್ಲಿ ಒಬ್ಬರಿಗಿಂತ ಹೆಚ್ಚು ಜನರ ಹೆಸರಿದ್ದರೆ ಅದನ್ನು ಪ್ರತ್ಯೇಕವಾಗಿ ಎಲ್ಲಾ ಸದಸ್ಯರ ಹೆಸರಿನ ಮೇಲೆ ಸರ್ವೇ ನಂಬರ್ ಮಾಡುವುದನ್ನೇ ಪೋಡಿ ಎಂದು ಕರೆಯುವರು.

ಕುಟುಂಬದ ಸದಸ್ಯರ ಪಾಲುಗಾರಿಕೆ, ಭೂ ಆಸ್ತಿಯ ಕೆಲವು ಭಾಗ ಮಾರಾಟ, ದಾನಪತ್ರ, ನಿವೇಶನಕ್ಕೆ ಬಳಕೆ, ಭೂ ಪರಿವರ್ತನೆ ಹೀಗೆ ಹಲವಾರು ಚಟುವಟಿಕೆಗಳಿಗೆ ಪೋಡಿ ನಕ್ಷೆ ತುಂಬಾ ಅವಶ್ಯಕವಾಗಿದೆ. ಒಂದು ಸರ್ವೇ ನಂಬರಿನಲ್ಲಿ ಹಲವರ ಹೆಸರಿದ್ದರೆ ಮುಂದೆ ಸರ್ಕಾರದಿಂದ ಸೌಲಭ್ಯ ಪಡೆಯುವುದಕ್ಕೆ ತೊಂದರಯಾಗುತ್ತದೆ. ಬ್ಯಾಂಕಿನಲ್ಲಿ ಸಾಲ ಸೌಲಭ್ಯವೂ ಸಿಗುವುದಿಲ್ಲ. ಜಮೀನು ಮಾರಾಟ ಸಂದರ್ಭದಲ್ಲಿಯೂ ತೊಡಕಾಗುವ ಸಾಧ್ಯತೆ ಇರುತ್ತದೆ. ಪೋಡಿ ನಕ್ಷೆ ಮಾಡಿಸುವುದಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸುವುದಕ್ಕಾಗಿ ಸರ್ಕಾರವು ಈಗ ಆನ್ ಲೈನ್ ವ್ಯವಸ್ಥೆಯನ್ನು ಮಾಡಿದೆ. ರೈತರು ಸ್ವತಃ ಅವರೆ ಮೊಬೈಲ್ ನಲ್ಲಿ ಜಮೀನಿನ ಪೋಡಿ ನಕ್ಷೆ ತಯಾರಿಸಿಕೊಳ್ಳಬಹುದು. ಸಹೋದರರು, ಸಂಬಂಧಿಕರು ಮನೆಯಲ್ಲಿಯೇ ಕುಳಿತು ತಮ್ಮ ಜಮೀನಿನ ಭಾಗ ಮಾಡಿಕೊಳ್ಳಲು ಇದು ಅವಕಾಶ ಕಲ್ಪಿಸಿದೆ.

ಮನೆಯಲ್ಲಿ ನಾಲ್ಕು ಜನ ಸದಸ್ಯರಿದ್ದರೆ ತಮ್ಮ ಐದು ಎಕರೆ ಭೂಮಿಯನ್ನು ಯಾರಿಗೆ ಎಷ್ಟು ಭಾಗ ಎಂಬುದನ್ನು ನಿರ್ಧರಿಸಿ ಸ್ಕೆಚ್ ಸಿದ್ಧಪಡಿಸಬಹುದು. ಎಲ್ಲರೂ ಒಪ್ಪಿದ ನಂತರ ಸ್ಕೆಚ್ ಅನ್ನು ತಹಶಿಲ್ದಾರ್​ ಕಚೇರಿಯ ಭೂ ದಾಖಲೆಗಳ ವಿಭಾಗಕ್ಕೆ ಅಪ್ಲೋಡ್ ಮಾಡಿದರೆ ಸಾಕು, ನೋಂದಣಿ ಇಲಾಖೆಯಲ್ಲಿ ಆ ಸ್ಕೆಚ್ ನ ಗಡಿಗಳಿಗೆ ಅನುಗುಣವಾಗಿ ನೋಂದಣಿ ಮಾಡಲಾಗುವುದು. ರೈತರಿಗೆ ಸ್ವಾವಲಂಬಿ ಆಯಪ್ ಕೇವಲ ಪೋಡಿ ನಕ್ಷೆ ಅಷ್ಟೇ ಅಲ್ಲದೆ ಜಮೀನಿನ 11 ಇ, ಭೂ ಪರಿವರ್ತನೆ ಮತ್ತು ವಿಭಾಗ ಮಾಡಿಕೊಳ್ಳಲು ಸಹಾಯವಾಗುತ್ತದೆ.

ಕಾಪುವಿನಲ್ಲಿ ದೀಪಾವಳಿಯ ರಂಗು ಹೆಚ್ಚಿಸಿದ ಶ್ರೀಶಾ ನಾಯಕ್ ನೇತೃತ್ವದ ಗೂಡುದೀಪ ಸ್ಪರ್ಧೆ..

ಮೊಬೈಲ್ ನಲ್ಲಿ ಪೋಡಿ ನಕ್ಷೆ ಪಡೆಯುವುದು ಹೇಗೆ?

ರೈತರು ಆನ್​ಲೈನ್ ಮೂಲಕ ಪೋಡಿ ನಕ್ಷೆ ಪಡೆಯಲು ಈ https://bhoomojini.karnataka.gov.in/Service27 ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಭೂ ಕಂದಾಯ ಇಲಾಖೆಯ ಸ್ವಾವಲಂಬಿ ಆಯಪ್ ಪೇಜ್ ಓಪನ್ ಆಗುತ್ತದೆ. ರೈತರು ಮೊಬೈಲ್ ನಂಬರ್ ಹಾಕಿ ಕ್ಯಾಪ್ಚ್ಯಾ ಕೋಡ್ ನಮೂದಿಸಬೇಕು. ನಂತರ ಮೊಬೈಲ್ ಗೆ ಓಟಿಪಿ ಬರುತ್ತದೆ. ಓಟಿಪಿ ನಮೂದಿಸಿದ ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ.

ಅಲ್ಲಿ ಹೊಸ ಅರ್ಜಿ ಮೇಲೆ ಕ್ಲಿಕ್ ಮಾಡಿ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಬೇಕು. ಆಧಾರ್ ಕಾರ್ಡ್ ಹಾಗೂ ಪಹಣಿಯಲ್ಲಿ ಹೆಸರು ಒಂದೇ ರೀತಿಯಿದ್ದರೆ ಸಮಸ್ಯೆಯಾಗುವುದಿಲ್ಲ. ಆಧಾರ್ ಕಾರ್ಡ್ ನಲ್ಲಿರುವ ಹೆಸರನ್ನು ನಮೂದಿಸಿ ಮುಂದಿನ ಪ್ರಕ್ರಿಯೆ ಪೂರ್ಣಗೊಳಿಸಿದರೆ ಪೋಡಿ ನಕ್ಷೆ ಸಿಗುತ್ತದೆ.

ಕುಂದಾಪುರ: ಓದುತ್ತಿದ್ದ ವೇಳೆ ಕುಸಿದು ಬಿದ್ದು ಹೃದಯಾಘಾತದಿಂದ 13 ವರ್ಷದ ಬಾಲಕಿ ಮೃತ್ಯು – Vishwanews24

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

1 day ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

1 day ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

1 day ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

2 days ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

2 days ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

2 days ago