ಬೆಂಗಳೂರು: ಬೇರೆಯವರಿಗೆ ಜಮೀನು ಮಾರಾಟ ಮಾಡಿದ್ದರೂ, ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ಅಕ್ರಮವಾಗಿ ಅನುದಾನ ಪಡೆಯುತ್ತಿದ್ದ ಸುಮಾರು 1.50 ಲಕ್ಷ ರೈತರಿಗೆ, ಕೃಷಿ ಇಲಾಖೆ ಬಿಗ್ ಶಾಕ್ ನೀಡಿದೆ. ಹೀಗೆ ಅಕ್ರಮವಾಗಿ ಅನುದಾನ ಪಡೆಯುತ್ತಿದ್ದವರನ್ನು ಪತ್ತೆ ಹಚ್ಚಿದ್ದು, ಪಾವತಿಸಿರುವಂತ ಅನುದಾನ ವಾಪಾಸ್ ವಸೂಲಿಗೂ ಮುಂದಾಗಿ, ಬಿಗ್ ಶಾಕ್ ನೀಡಿದೆ.
ರಾಜ್ಯದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಅನುದಾನ ಪಡೆಯುತ್ತಿರುವಂತ ರೈತರ ಸಂಖ್ಯೆ ಸುಮಾರು 53 ಲಕ್ಷಕ್ಕೂ ಹೆಚ್ಚು ಇದ್ದಾರೆ. ಇದೀಗ ಪಿಎಂ ಕಿಸಾನ್ ಯೋಜನೆಯ ಅನುದಾನ ಅಕ್ರಮ ತಡೆಗೆ ಕೇಂದ್ರ ಸರ್ಕಾರ ಖಡಕ್ ನಿರ್ದೇಶನ ನೀಡಿದೆ. ಹೀಗಾಗಿ ಕೃಷಿ ಇಲಾಖೆಯಿಂದ ಅಕ್ರಮ ಪತ್ತೆಗೆ ಕ್ರಮ ಕೈಗೊಳ್ಳಲಾಗುತ್ತಿದೆ.
ಈ ನಿಟ್ಟಿನಲ್ಲಿ ಆದಾಯ ತೆರಿಗೆ ಪಾವತಿಸುವವರೂ ಸೇರಿದಂತೆ ಅನರ್ಹರಿಗೆ ಹಣ ಪಾವತಿಯಾಗುತ್ತಿರುವ ಬಗ್ಗೆ ಪತ್ತೆ ಕಾರ್ಯಕ್ಕೆ ಇಳಿದಿದೆ. ಇದಲ್ಲದೇ ತಮ್ಮ ಜಮೀನು ಬೇರೆಯವರಿಗೆ ಮಾರಾಟ ಮಾಡುತ್ತಿದ್ದರೂ, ಅನುದಾನ ಪಡೆಯುತ್ತಿರುವಂತ 1.50 ಲಕ್ಷ ಜನರ ಬಗ್ಗೆಯೂ ಮಾಹಿತಿ ಕಲೆ ಹಾಕಿದೆ. ತಮ್ಮಲ್ಲಿರುವಂತ ಭೂಮಿ ತಂತ್ರಾಂಶ, ಪ್ರೊಟ್ ಐಡಿ ಮತ್ತಿತ್ತರ ದತ್ತಾಂಶ ಆಧರಿಸಿ, ಈಗ ಮತ್ತಷ್ಟು ಪರಿಶೀಲನೆಗೆ ತೊಡಗಿದೆ.
ಅಂದಹಾಗೇ ರಾಜ್ಯದಲ್ಲಿ 200ಕ್ಕೂ ಅಧಿಕ ರೈತರು ಮೃತಪಟ್ಟ ನಂತ್ರವೂ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಪಾವತಿಯಾಗಿದೆ. ಇಂತಹ ಸಂಬಂಧಪಟ್ಟವರಿಂದ ಮೊತ್ತ ವಸೂಲು ಮಾಡುವಂತೆ ಬ್ಯಾಂಕ್ ಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೇ ಈಗಾಗಲೇ ಮೃತ ರೈತರ ಕುಟುಂಬದಿಂದ 84 ಸಾವಿರ ರೂ ವಾಪಸ್ ಪಡೆಯಲಾಗಿದೆ ಎಂದು ಕೃಷಿ ಇಲಾಖೆ ಮೂಲಗಳಿಂದ ತಿಳಿದು ಬಂದಿದೆ.
ಕೃಷಿ ಇಲಾಖೆ ಆಯುಕ್ತ ಬ್ರಿಜೇಶ್ ಕುಮಾರ್ ದೀಕ್ಷಿತ್ ಮಾತನಾಡಿ, ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಾಗಿದ್ದೂ, ಬಳಿಕ ಜಮೀನು ಮಾರಾಟ ಮಾಡಿದ 1.5 ಲಕ್ಷ ಪ್ರಕರಣಗಳು ರಾಜ್ಯದಲ್ಲಿ ಪತ್ತೆ ಹಚ್ಚಲಾಗಿದೆ. ಇವರಿಗೆ ಹಣ ಸಂದಾಯ ಆಗುವುದನ್ನು ನಿಲ್ಲಿಸಲಾಗಿದೆ. ಮೃತಪಟ್ಟವರ ಬ್ಯಾಂಕ್ ಖಾತೆಗೂ ಹಣ ಪಾವತಿಯಾಗುವುದನ್ನು ತಡೆ ಹಿಡಿಯಲಾಗಿದೆ ಎಂದು ತಿಳಿಸಿದ್ದಾರೆ.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…