ಜಮೀರ್ ಅವರನ್ನು ತಕ್ಷಣವೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕು.’; ಆತ ಪಾಕಿಸ್ತಾನಕ್ಕೆ ಹೋಗಲಿ, ಭಾರತ ಆತನ ತಾತನ ಆಸ್ತಿಯಲ್ಲ : ಸೊಗಡು ಶಿವಣ್ಣ

Featured, ರಾಜ್ಯ ನ್ಯೂಸ್

ತುಮಕೂರು: ‘ಮುಸ್ಲಿಮರು ಬಿಜೆಪಿಗೆ ಮತಹಾಕುವುದಿಲ್ಲ. ಒಂದು ವೇಳೆ ಯಾರಾದರೂ ಮತ ಹಾಕಿದರೆ ಅವರು ಮುಸ್ಲಿಮರೇ ಅಲ್ಲ.’ ಇದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಜಮೀರ್ ಅಹ್ಮದ್ ಅವರ ವಿವಾದಾತ್ಮಕ ಹೇಳಿಕೆ.

ಜಮೀರ್ ಅವರ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದ್ದು,ಅವರನ್ನು ಸಚಿವ ಸಂಪುಟದಿಂದ ಕೈಬಿಡುವಂತೆ ಮಾಜಿ ಸಚಿವ ಸೊಗಡು ಶಿವಣ್ಣ ಆಗ್ರಹಿಸಿದ್ದಾರೆ. ಆತ ಪಾಕಿಸ್ತಾನಕ್ಕೆ ಹೋಗಲಿ. ಭಾರತ ಆತನ ತಾತನ ಆಸ್ತಿಯಲ್ಲ ಎಂದು ಸಚಿವ ಜಮೀರ್ ಅಹಮದ್ ವಿರುದ್ಧ ಮಾಜಿ ಸಚಿವ ಸೊಗಡು ಶಿವಣ್ಣ ವಾಗ್ದಾಳಿ ನಡೆಸಿದ್ದಾರೆ.

ಈ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸೊಗಡು ಶಿವಣ್ಣ ; ‘ಜನಪ್ರತಿನಿಧಿ ಆಗುವ ಯೋಗ್ಯತೆ ಜಮೀರ್ ಅವರಿಗೆ ಇಲ್ಲ. ವಿಧಾನಸಭಾ ಚುನಾವಣೆ ವೇಳೆ ಬಾಯಿಗೆ ಬಂದಂತೆ ಮಾತಾನಾಡಿದ್ದ ಅವರು, ಈಗ ಇಂತಹ ಹೇಳಿಕೆ ನೀಡಿದ್ದಾರೆ. ಜಮೀರ್ ಅವರು ಪದೇ ಪದೆ ಇಂತಹ ಹೇಳಿಕೆ ನೀಡುತ್ತಿದ್ದರೂ ಚುನಾವಣಾ ಆಯೋಗ ಮೌನವಹಿಸುತ್ತಿರುವುದು ಸರಿಯಲ್ಲ.ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ಸಚಿವರ ಬಾಯಿಯಲ್ಲಿ ಇಂತಹ ಹೇಳಿಕೆ ಬಂದಿರುವುದು ದುರದೃಷ್ಟಕರ. ಪ್ರಜಾಪ್ರಭುತ್ವ ದೇಶದಲ್ಲಿ ಬದುಕುತ್ತಿದ್ದೇವೆ ಎಂಬ ವಿವೇಚನೆಯೂ ಅವರಿಗಿಲ್ಲ. ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಹಿಂದು, ಮುಸ್ಲಿಂ ಜನರ ಭಾವನೆಗೆ ಧಕ್ಕೆ ತರುವಂತ ಹೇಳಿಕೆ ನೀಡಿದ್ದರೂ ಚುನಾವಣಾ ಆಯೋಗ ಕೈಗೊಳ್ಳದಿರುವುದು ಸರಿಯಲ್ಲ  ಎಂದರು.

ದೇಶ ವಿಭಜನೆಯಾದಾಗ ಮುಸ್ಲಿಂ ಬಾಂಧವರು 3 ಕೋಟಿ ಇದ್ದರು. ಇದೀಗ 20 ಕೋಟಿ ಆಗಿದ್ದಾರೆ. ನಾವು ಅವರನ್ನ ಅಣ್ಣ ತಮ್ಮಂದಿರೆಂದು ಸಹಿಸಿಕೊಂಡಿದ್ದೇವೆ. ಮೊಘಲರು, ಬ್ರಿಟಿಷರು ಆಳ್ವಿಕೆ ನಡೆಸಿದ್ದರೂ ನಮ್ಮ ಸಂಸ್ಕೃತಿ ಹಾಳಾಗಿರಲಿಲ್ಲ. ಆದರೆ ನಮ್ಮಲ್ಲಿರುವ ಕಿಡಿಗೇಡಿಗಳು, ಪಾಪಿಗಳಿಂದ ನಮ್ಮ ಹಿಂದೂ ಸಮಾಜವನ್ನು ಒಡೆಯುತ್ತಿದ್ದಾರೆ. ನಮ್ಮ ಬಂಧು, ನಮ್ಮ ಸಂಸ್ಕೃತಿಯನ್ನು ಹಾಳು ಮಾಡುವ ಯಾವನೇ ವ್ಯಕ್ತಿ ಇದ್ದರೂ ಅವರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ. ಜಮೀರ್ ಅವರ ಹೇಳಿಕೆಗಳು ರಾಜ್ಯ ಸರ್ಕಾರಕ್ಕೆ ಕಪ್ಪು ಚುಕ್ಕಿಯಾಗುತ್ತಿವೆ ರಾಜ್ಯದ ಜನರ ನಡುವೆ ವಿಷ ಬೀಜ ಬಿತ್ತುತ್ತಿರುವ ಜಮೀರ್ ಅವರನ್ನು ತಕ್ಷಣವೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕು.’ಎಂದು ತಿಳಿಸಿದ್ದಾರೆ..