ತುಮಕೂರು: ‘ಮುಸ್ಲಿಮರು ಬಿಜೆಪಿಗೆ ಮತಹಾಕುವುದಿಲ್ಲ. ಒಂದು ವೇಳೆ ಯಾರಾದರೂ ಮತ ಹಾಕಿದರೆ ಅವರು ಮುಸ್ಲಿಮರೇ ಅಲ್ಲ.’ ಇದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಜಮೀರ್ ಅಹ್ಮದ್ ಅವರ ವಿವಾದಾತ್ಮಕ ಹೇಳಿಕೆ.
ಜಮೀರ್ ಅವರ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದ್ದು,ಅವರನ್ನು ಸಚಿವ ಸಂಪುಟದಿಂದ ಕೈಬಿಡುವಂತೆ ಮಾಜಿ ಸಚಿವ ಸೊಗಡು ಶಿವಣ್ಣ ಆಗ್ರಹಿಸಿದ್ದಾರೆ. ಆತ ಪಾಕಿಸ್ತಾನಕ್ಕೆ ಹೋಗಲಿ. ಭಾರತ ಆತನ ತಾತನ ಆಸ್ತಿಯಲ್ಲ ಎಂದು ಸಚಿವ ಜಮೀರ್ ಅಹಮದ್ ವಿರುದ್ಧ ಮಾಜಿ ಸಚಿವ ಸೊಗಡು ಶಿವಣ್ಣ ವಾಗ್ದಾಳಿ ನಡೆಸಿದ್ದಾರೆ.
ಈ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸೊಗಡು ಶಿವಣ್ಣ ; ‘ಜನಪ್ರತಿನಿಧಿ ಆಗುವ ಯೋಗ್ಯತೆ ಜಮೀರ್ ಅವರಿಗೆ ಇಲ್ಲ. ವಿಧಾನಸಭಾ ಚುನಾವಣೆ ವೇಳೆ ಬಾಯಿಗೆ ಬಂದಂತೆ ಮಾತಾನಾಡಿದ್ದ ಅವರು, ಈಗ ಇಂತಹ ಹೇಳಿಕೆ ನೀಡಿದ್ದಾರೆ. ಜಮೀರ್ ಅವರು ಪದೇ ಪದೆ ಇಂತಹ ಹೇಳಿಕೆ ನೀಡುತ್ತಿದ್ದರೂ ಚುನಾವಣಾ ಆಯೋಗ ಮೌನವಹಿಸುತ್ತಿರುವುದು ಸರಿಯಲ್ಲ.ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ಸಚಿವರ ಬಾಯಿಯಲ್ಲಿ ಇಂತಹ ಹೇಳಿಕೆ ಬಂದಿರುವುದು ದುರದೃಷ್ಟಕರ. ಪ್ರಜಾಪ್ರಭುತ್ವ ದೇಶದಲ್ಲಿ ಬದುಕುತ್ತಿದ್ದೇವೆ ಎಂಬ ವಿವೇಚನೆಯೂ ಅವರಿಗಿಲ್ಲ. ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಹಿಂದು, ಮುಸ್ಲಿಂ ಜನರ ಭಾವನೆಗೆ ಧಕ್ಕೆ ತರುವಂತ ಹೇಳಿಕೆ ನೀಡಿದ್ದರೂ ಚುನಾವಣಾ ಆಯೋಗ ಕೈಗೊಳ್ಳದಿರುವುದು ಸರಿಯಲ್ಲ ಎಂದರು.
ದೇಶ ವಿಭಜನೆಯಾದಾಗ ಮುಸ್ಲಿಂ ಬಾಂಧವರು 3 ಕೋಟಿ ಇದ್ದರು. ಇದೀಗ 20 ಕೋಟಿ ಆಗಿದ್ದಾರೆ. ನಾವು ಅವರನ್ನ ಅಣ್ಣ ತಮ್ಮಂದಿರೆಂದು ಸಹಿಸಿಕೊಂಡಿದ್ದೇವೆ. ಮೊಘಲರು, ಬ್ರಿಟಿಷರು ಆಳ್ವಿಕೆ ನಡೆಸಿದ್ದರೂ ನಮ್ಮ ಸಂಸ್ಕೃತಿ ಹಾಳಾಗಿರಲಿಲ್ಲ. ಆದರೆ ನಮ್ಮಲ್ಲಿರುವ ಕಿಡಿಗೇಡಿಗಳು, ಪಾಪಿಗಳಿಂದ ನಮ್ಮ ಹಿಂದೂ ಸಮಾಜವನ್ನು ಒಡೆಯುತ್ತಿದ್ದಾರೆ. ನಮ್ಮ ಬಂಧು, ನಮ್ಮ ಸಂಸ್ಕೃತಿಯನ್ನು ಹಾಳು ಮಾಡುವ ಯಾವನೇ ವ್ಯಕ್ತಿ ಇದ್ದರೂ ಅವರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ. ಜಮೀರ್ ಅವರ ಹೇಳಿಕೆಗಳು ರಾಜ್ಯ ಸರ್ಕಾರಕ್ಕೆ ಕಪ್ಪು ಚುಕ್ಕಿಯಾಗುತ್ತಿವೆ ರಾಜ್ಯದ ಜನರ ನಡುವೆ ವಿಷ ಬೀಜ ಬಿತ್ತುತ್ತಿರುವ ಜಮೀರ್ ಅವರನ್ನು ತಕ್ಷಣವೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕು.’ಎಂದು ತಿಳಿಸಿದ್ದಾರೆ..
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…