ಮಂಗಳೂರು:ಜಮ್ಮು- ಕಾಶ್ಮೀರದಲ್ಲಿ ಅನ್ಯ ರಾಜ್ಯದವರು ಆಸ್ತಿ ಖರೀದಿಸಲು ಇದ್ದ ನಿಷೇಧ ತೆರವುಗೊಳಿಸಿರುವ ಹಿನ್ನೆಲ್ಲೆಯಲ್ಲಿಕರಾವಳಿ ಮೂಲದ ದುಬೈ ಉದ್ಯಮಿ ಬಿ.ಆರ್. ಶೆಟ್ಟಿಜಮ್ಮು- ಕಾಶ್ಮೀರದಲ್ಲಿ ಬೃಹತ್ ಫಿಲ್ಮ್ ಸಿಟಿಯೊಂದನ್ನು ಆರಂಭಿಸಲು ಉದ್ದೇಶಿಸಿದ್ದಾರೆ.
ಅರಬ್ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಬಿ.ಆರ್.ಶೆಟ್ಟಿ, ‘ಜಮ್ಮು- ಕಾಶ್ಮೀರ ಅತ್ಯಂತ ರಮಣೀಯ ಸ್ಥಳವಾಗಿದ್ದು, ನಾನು ಅಲ್ಲಿ ಫಿಲ್ಮ್ ಸಿಟಿಯೊಂದನ್ನು ಆರಂಭಿಸಲಿದ್ದೇನೆ. ಜನರು ಅಲ್ಲಿಗೆ ಬಂದು ಚಿತ್ರಗಳನ್ನು ಚಿತ್ರೀಕರಿಸಬಹುದು. ನನಗೆ ಈಗಾಗಲೇ ಜಮ್ಮು- ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಸುಮಾರು 3,000 ಎಕರೆಯಷ್ಟುಜಾಗ ನೀಡುವುದಾಗಿ ಆಫರ್‌ಗಳು ಬಂದಿವೆ’ ಎಂದು ಹೇಳಿದ್ದಾರೆ.
ಆಗಸ್ಟ್‌ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಯುಎಇಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಜಮ್ಮು- ಕಾಶ್ಮೀರದಲ್ಲಿ 7 ಸಾವಿರ ಕೋಟಿ ರು. ಹೂಡಿಕೆ ಮಾಡುವುದಾಗಿ ಬಿ.ಆರ್. ಶೆಟ್ಟಿಪ್ರಕಟಿಸಿದ್ದರು.
ಸಂವಿಧಾನದ 35ಎ ವಿಧಿ ಕಾಶ್ಮೀರದ ಜನರಿಗೆ ವಿಶೇಷ ಸೌಲಭ್ಯ ಕಲ್ಪಿಸಿತ್ತು. ಕಾಶ್ಮಿರದ ನಿವಾಸಿಗಳನ್ನು ಹೊರತುಪಡಿಸಿ ಅನ್ಯ ರಾಜ್ಯದವರು ಆಸ್ತಿಗಳನ್ನು ಖರೀದಿಸಲು ಅವಕಾಶ ಇರಲಿಲ್ಲ. ಆದರೆ, ಕೇಂದ್ರ ಸರ್ಕಾರ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿ ಹಾಗೂ 35ಎ ವಿಧಿಯನ್ನು ರದ್ದುಗೊಳಿಸಿರುವುದರಿಂದ ಕಾಶ್ಮೀರದಲ್ಲಿ ಹೂಡಿಕೆ ಮತ್ತು ಆಸ್ತಿ ಖರೀದಿಗೆ ಅವಕಾಶ ಇದೆ. ಜಮ್ಮು- ಕಾಶ್ಮೀರದಲ್ಲಿ ರೆಸಾರ್ಟ್ ಆರಂಭಿಸುವ ಬಗ್ಗೆ ಕರ್ನಾಟಕ ಹಾಗೂ ಮಹಾರಾಷ್ಟ್ರ ಸರ್ಕಾರಗಳು ಘೋಷಣೆ ಮಾಡಿವೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…